ETV Bharat / bharat

ಕೇರಳ ಸ್ಫೋಟ: ಸಾವಿನ ಸಂಖ್ಯೆ 2ಕ್ಕೇರಿಕೆ, 52 ಮಂದಿಗೆ ತೀವ್ರ ಗಾಯ, 6 ಜನರ ಸ್ಥಿತಿ ಚಿಂತಾಜನಕ

ಕೊಚ್ಚಿಯ ಯೆಹೋವನ ಪ್ರಾರ್ಥನಾ ಸಭೆ ನಡೆಯುತ್ತಿದ್ದಾಗ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 2ಕ್ಕೇರಿದೆ. ಶೇ.90 ರಷ್ಟು ಸುಟ್ಟಿದ್ದ ಮಹಿಳೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಮಗು ಸೇರಿದಂತೆ 6 ಮಂದಿ ಸ್ಥಿತಿ ಗಂಭೀರವಾಗಿದೆ.

one-person-died-and-several-injured-in-explosion-at-prayer-meeting-in-kerala
ಕೇರಳದ ಪ್ರಾರ್ಥನಾ ಸಭೆಯಲ್ಲಿ ಸ್ಫೋಟ: ಓರ್ವ ಸಾವು, ಹಲವರು ಗಾಯ
author img

By ANI

Published : Oct 29, 2023, 12:16 PM IST

Updated : Oct 29, 2023, 10:24 PM IST

ಕೊಚ್ಚಿಯ ಯೆಹೋವನ ಪ್ರಾರ್ಥನಾ ಸಭೆಯಲ್ಲಿ ಸಂಭವಿಸಿದ ಸ್ಫೋಟ

ಕೇರಳ: ಕೊಚ್ಚಿಯ ಕಲಮಸ್ಸೆರಿ ಪ್ರದೇಶದಲ್ಲಿ ಭಾನುವಾರ ಬೆಳಗ್ಗೆ ನಡೆಯುತ್ತಿದ್ದ ಯೆಹೋವನ ಪ್ರಾರ್ಥನಾ ಸಭೆಯ ವೇಳೆ ಸಂಭವಿಸಿದ ಭೀಕರ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 2 ಕ್ಕೆ ಏರಿಕೆಯಾಗಿದೆ. 52 ಮಂದಿ ಗಾಯಗೊಂಡಿದ್ದಾರೆ. ಇದರಲ್ಲಿ 30 ಮಂದಿಯನ್ನು ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ.

  • #WATCH | Kerala LoP and state Congress President VD Satheesan says, "I was told that there were two blasts and there was a fire. First, there was a major blast. The second one was minor. One lady died and 25 persons are in the hospital. Out of 25, 6 persons are in the ICU unit.… pic.twitter.com/1hWQlBHEY8

    — ANI (@ANI) October 29, 2023 " class="align-text-top noRightClick twitterSection" data=" ">

ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಮೊದಲ ಸ್ಫೋಟ ಸಂಭವಿಸಿತು. ಒಂದು ಗಂಟೆ ಬಳಿಕ ಮತ್ತೆ ಸರಣಿ ಸ್ಫೋಟಗಳು ಸಂಭವಿಸಿದವು. ಗಾಯಾಳುಗಳಲ್ಲಿ 18 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದರಲ್ಲಿ ಮಗು ಸೇರಿದಂತೆ 6 ಮಂದಿ ಸ್ಥಿತಿ ಗಂಭೀರವಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಶೇ.90 ರಷ್ಟು ಸುಟ್ಟುಹೋಗಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ. ತ್ರಿಶೂರ್ ಮತ್ತು ಕೊಟ್ಟಾಯಂ ವೈದ್ಯಕೀಯ ಕಾಲೇಜುಗಳಿಂದ ಪ್ಲಾಸ್ಟಿಕ್ ಮತ್ತು ಸಾಮಾನ್ಯ ಶಸ್ತ್ರಚಿಕಿತ್ಸಕರ ತಂಡಗಳು ಕಲಮಸ್ಸೆರಿ ವೈದ್ಯಕೀಯ ಕಾಲೇಜಿಗೆ ಆಗಮಿಸಿವೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್​ ತಿಳಿಸಿದರು.

ಅಧಿಕಾರಿಗಳ ಪ್ರಕಾರ, ಸ್ಫೋಟ ಸಂಭವಿಸಿದಾಗ 2,000ಕ್ಕೂ ಹೆಚ್ಚು ಜನರು ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿದ್ದರು. ಗಾಜಾವನ್ನು ಇಸ್ರೇಲ್ ಮಿಲಿಟರಿ ಆಕ್ರಮಿಸಿಕೊಂಡ ಬಳಿಕ ಹಮಾಸ್‌ನ ಮಾಜಿ ಮುಖ್ಯಸ್ಥ ಖಲೀದ್ ಮಶಾಲ್ ಎಂಬಾತ ಪ್ಯಾಲೆಸ್ಟೈನ್​ ಪರ ನಡೆದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಒಂದು ದಿನದ ಬಳಿಕ ಈ ಘಟನೆ ನಡೆದಿದೆ.

  • #WATCH | Kerala: Outside visuals from Zamra International Convention & Exhibition Centre, Kalamassery; one person died and several others were injured in an explosion here. pic.twitter.com/RILM2z3vov

ಶನಿವಾರದ ಪ್ರತಿಭಟನೆಯಲ್ಲಿ ಹಮಾಸ್ ನಾಯಕ ಭಾಗವಹಿಸಿರುವ ಬಗ್ಗೆ ಪ್ರತಿಕ್ರಿಯಿಸಿದ್ದ, ಭಾರತದಲ್ಲಿರುವ ಇಸ್ರೇಲ್ ರಾಯಭಾರಿ ನೌರ್ ಗಿಲೋನ್, ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದರು. ಈ ಮೂಲಕ ಭಾರತದಲ್ಲಿ ಹಮಾಸ್ ಸಂಘಟನೆಯನ್ನು ಭಯೋತ್ಪಾದಕರ ಪಟ್ಟಿಗೆ ಸೇರಿಸುವಂತೆ ಹೇಳಿದ್ದರು.

ತನಿಖೆ ನಡೆಸುವಂತೆ ಎನ್ಐಎಗೆ ಅಮಿತ್ ಶಾ ಸೂಚನೆ: ಘಟನೆ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ಮಾತನಾಡಿ, ಪ್ರಾರ್ಥನಾ ಸಭೆಯಲ್ಲಿ ಸ್ಫೋಟ ಸಂಭವಿಸಿದ ನಂತರ ರಾಜ್ಯದ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ತೆರಳಿ ತನಿಖೆ ಆರಂಭಿಸುವಂತೆ ಗೃಹ ಸಚಿವರು, ಎನ್ಐಎ ಮತ್ತು ಎನ್ಎಸ್​ಜಿಗೆ ಸೂಚನೆ ನೀಡಿದ್ದಾರೆ.

  • Union Home Minister Amit Shah spoke with Kerala Chief Minister Pinarayi Vijayan and took stock of the situation in the state after a bomb explosion took place at a convention centre. He also instructed the NIA and the NSG to reach on the spot and start an inquiry into the… pic.twitter.com/h8StJC0b9T

ಕೇರಳ ಸಿಎಂ ಸಂತಾಪ: ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಂತಾಪ ವ್ಯಕ್ತಪಡಿಸಿದ್ದು, "ಇದು ಅತ್ಯಂತ ದುರದೃಷ್ಟಕರ ಘಟನೆ" ಎಂದು ಹೇಳಿದ್ದಾರೆ. "ಘಟನೆಗೆ ಸಂಬಂಧಿಸಿದಂತೆ ನಾವು ವಿವರ ಸಂಗ್ರಹಿಸುತ್ತಿದ್ದೇವೆ. ಎರ್ನಾಕುಲಂನ ಎಲ್ಲಾ ಉನ್ನತ ಅಧಿಕಾರಿಗಳು ಘಟನಾ ಸ್ಥಳದಲ್ಲಿದ್ದಾರೆ. ಡಿಜಿಪಿ ಸ್ಥಳಕ್ಕೆ ತೆರಳುತ್ತಿದ್ದಾರೆ. ನಾವು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಡಿಜಿಪಿಯೊಂದಿಗೆ ಮಾತನಾಡಿದ್ದೇನೆ. ತನಿಖೆ ನಡೆಯುತ್ತಿದೆ. ಇಲ್ಲಿಯವರೆಗೆ, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಗಾಯಗೊಂಡವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆಯ ಕುರಿತು ಸಂಪೂರ್ಣವಾಗಿ ವಿವರಗಳನ್ನು ಪಡೆದ ನಂತರ ಮಾತನಾಡುತ್ತೇನೆ" ಎಂದು ಸಿಎಂ ತಿಳಿಸಿದ್ದಾರೆ.

ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು, ರಜೆಯಲ್ಲಿರುವ ಆರೋಗ್ಯ ಸಿಬ್ಬಂದಿ ಸ್ಫೋಟದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ತಕ್ಷಣ ಹಿಂತಿರುಗುವಂತೆ ಎಲ್ಲಾ ಆಸ್ಪತ್ರೆಗಳಿಗೆ ನಿರ್ದೇಶನ ನೀಡಿದ್ದಾರೆ.

ಇದನ್ನೂ ಓದಿ: ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ 7 ಜನ ಸಾವು

Last Updated : Oct 29, 2023, 10:24 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.