ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಚನಪೋರಾ ಪ್ರದೇಶದಲ್ಲಿ ಇಂದು ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಓರ್ವ ಸಿಆರ್‌ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ.
ಇಂದು ಮಧ್ಯಾಹ್ನ 1.15 ರ ಸುಮಾರಿಗೆ ಉಗ್ರರು ಸಿಆರ್‌ಪಿಎಫ್‌ನ 29ನೇ ಬೆಟಾಲಿಯನ್ ಚೆಕ್‌ಪೋಸ್ಟ್ ಮೇಲೆ ಗ್ರೆನೇಡ್ ಎಸೆದಿದ್ದಾರೆ. ಪರಿಣಾಮ, ಓರ್ವ ಸಿಬ್ಬಂದಿಯ ಕಾಲಿಗೆ ಗಾಯವಾಗಿದೆ ಎಂದು ಸಿಆರ್‌ಪಿಎಫ್ ವಕ್ತಾರ ಅಭಿರಾಮ್ ಈಟಿವಿ ಭಾರತಕ್ಕೆ ತಿಳಿಸಿದರು.
ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಮಾಜಿ ಸಚಿವ, ಬಿಜೆಪಿ ಮುಖಂಡನ ಕೊಲೆ..?
ಚನಪೋರ ಪೊಲೀಸ್ ಠಾಣೆಯ ಮುಂದೆಯೇ ಈ ದಾಳಿ ನಡೆದಿದೆ. ಓರ್ವ ಮಹಿಳೆ ಕೂಡ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಆದರೆ ಇದು ಅಧಿಕೃತವಾಗಿ ದೃಢಪಟ್ಟಿಲ್ಲ. ಪೊಲೀಸರು ಸ್ಥಳವನ್ನು ಸುತ್ತುವರಿದಿದ್ದು, ಉಗ್ರರಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ ಎಂದು ಅಭಿರಾಮ್ ಹೇಳಿದ್ದಾರೆ.