ETV Bharat / bharat

ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ: ಇಬ್ಬರು ಉಗ್ರರ ಹತ್ಯೆ - ಜಮ್ಮು ಕಾಶ್ಮೀರದಲ್ಲಿ ಉಗ್ರರು

ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಜಮ್ಮು ಕಾಶ್ಮೀರದ ಅವಂತಿಪೋರಾ ಜಿಲ್ಲೆಯ ಟ್ರಾಲ್ ಪ್ರದೇಶದಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.

One terrorist killed in encounter in J-K's Awantipora, operation underway
ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ: ಓರ್ವ ಉಗ್ರನ ಹತ್ಯೆ
author img

By

Published : Apr 6, 2022, 9:19 AM IST

ಅವಂತಿಪೋರಾ, ಜಮ್ಮು ಕಾಶ್ಮೀರ: ಅವಂತಿಪೋರಾ ಜಿಲ್ಲೆಯ ಟ್ರಾಲ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಜಮ್ಮು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ. ಅವಂತಿಪೋರಾದಲ್ಲಿ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಅನ್ಸಾರ್ ಘಜ್ವತ್-ಉಲ್-ಹಿಂದ್ ಸಂಘಟನೆಯ ಸಫತ್ ಮುಜಾಫರ್ ಸೋಫಿ ಮತ್ತು ಎಲ್​ಇಟಿ ಉಗ್ರ ಉಮರ್ ತೇಲಿ ಎಂಬುವರನ್ನು ಟ್ರಾಲ್ ಪ್ರದೇಶದಲ್ಲಿ ಕೊಲ್ಲಲಾಗಿದೆ. ಈ ಇಬ್ಬರೂ ಶ್ರೀನಗರ ನಗರದಲ್ಲಿ ಹಲವಾರು ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದರು. ಖಾನ್ಮೋಹ್​ನಲ್ಲಿ ಸರಪಂಚ್ ಸಮೀರ್ ಅಹ್ಮದ್ ಹತ್ಯೆಯಲ್ಲಿ ಇವರು ಭಾಗಿಯಾಗಿದ್ದರು ಎಂದು ಕಾಶ್ಮೀರ ಐಜಿಪಿ ಟ್ವೀಟ್ ಮಾಡಿದ್ದಾರೆ.

  • AGuH #terrorist Safat Muzzaffar Sofi @ Muavia and LeT’s terrorist Umer Teli @ Talha killed in #Tral. Before shifting to Tral area both were involved in several #terror crimes in #Srinagar city including recent killing of Sarpanch (Sameer Ahmad) in Khanmoh Srinagar: IGP Kashmir

    — Kashmir Zone Police (@KashmirPolice) April 6, 2022 " class="align-text-top noRightClick twitterSection" data=" ">

ಅವಂತಿಪೋರಾ ಜಿಲ್ಲೆಯ ತ್ರಾಲ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಇಂದು ಮುಂಜಾನೆ ಎನ್‌ಕೌಂಟರ್ ಪ್ರಾರಂಭವಾಗಿತ್ತು. ಸೋಮವಾರ ಮುಂಜಾನೆ, ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಸೋಪೋರ್‌ನ ರಫಿಯಾಬಾದ್‌ನ ಲಾಡೂರ್​ ಪ್ರದೇಶದಲ್ಲಿ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕನನ್ನು ಬಂಧಿಸಿದ್ದರು.

ಇದನ್ನೂ ಓದಿ: ಉಕ್ರೇನ್​ನ ಬುಚಾದಲ್ಲಿ ನಾಗರಿಕರ ಹತ್ಯೆ: ಭಾರತ ಖಂಡನೆ, ತನಿಖೆಗೆ ಒತ್ತಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.