ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ಜಮ್ಮು - ಕಾಶ್ಮೀರದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ಆನ್ಲೈನ್ನಲ್ಲಿ ಪತ್ರಕರ್ತರಿಗೆ ಬೆದರಿಕೆ ಹಾಕಲಾಗಿದ್ದು, ಈ ಬಗ್ಗೆ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕಾಶ್ಮೀರ ಪೊಲೀಸರು ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿದರು.
ಶ್ರೀನಗರ, ಬುದ್ಗಾಮ್ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ ಗುರುವಾರ ಏಕಕಾಲದಲ್ಲಿ ದಾಳಿ ನಡೆಸಿದ ಕಾಶ್ಮೀರ ಪೊಲೀಸರು, ಪತ್ರಕರ್ತರಿಗೆ ಬೆದರಿಕೆ ಹಾಕಿದವರ ಪತ್ತೆ ಕಾರ್ಯ ನಡೆಸಿದರು. ಇದಕ್ಕೂ ಕೆಲ ದಿನಗಳ ಮೊದಲು ಇದೇ ತೆರನಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಪತ್ರಕರ್ತರಿಗೆ ನಿರಂತರವಾಗಿ ಬೆದರಿಕೆ ಹಾಕಿದ ಪ್ರಕರಣದಲ್ಲಿ ಶಂಕಿತ 12 ಜನರನ್ನು ವಿಚಾರಣೆ ನಡೆಸಲಾಗುತ್ತಿದೆ. ಈ ಬಗ್ಗೆ ಇನ್ನಷ್ಟು ಕ್ರಮ ಕೈಗೊಳ್ಳಲಾಗುವುದು ಎಂದು ಕಾಶ್ಮೀರ ಪೊಲೀಸರು ಟ್ವೀಟ್ ಮಾಡಿ ತಿಳಿಸಿದ್ದಾರೆ.
ಓದಿ: ಲಕ್ಷಗಟ್ಟಲೇ ಹಣ ಗಳಿಸುವ ಆಮಿಷ: 15 ಸಾವಿರ ಜನರಿಗೆ ಮಕ್ಮಲ್ ಟೋಪಿ: ಇಬ್ಬರು ಆರೋಪಿಗಳು ಅರೆಸ್ಟ್