ಚಂಡೀಗಢ: ಶಿಕ್ಷಕರ ನೇಮಕಾತಿ ಹಗರಣದಲ್ಲಿ ದೋಷಿಯಾಗಿ 10 ವರ್ಷ ಜೈಲಿಗೆ ಶಿಕ್ಷಗೆ ಒಳಗಾಗಿ ಬಿಡುಗಡೆಯಾಗಿದ್ದ ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ, ಇದೀಗ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿದ್ದು, ಮೇ 26 ರಂದು ನ್ಯಾಯಾಲಯ ಶಿಕ್ಷೆಯ ಪ್ರಮಾಣ ಘೋಷಿಸಲಿದೆ.
ಹರಿಯಾಣದ ಮಾಜಿ ಮುಖ್ಯಮಂತ್ರಿಯಾಗಿರುವ ಓಂ ಪ್ರಕಾಶ್ ಚೌಟಾಲಾ ಅವರ ವಿರುದ್ಧ ದಾಖಲಾಗಿದ್ದ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಎರಡು ದಿನಗಳಿಂದ ವಿಚಾರಣೆ ನಡೆಸಿತ್ತು. ಎರಡೂ ಕಡೆಯ ವಾದ - ಪ್ರತಿವಾದಗಳನ್ನು ಆಲಿಸಿದ ಕೋರ್ಟ್ ಒಪಿ ಚೌಟಾಲಾ ಪ್ರಕರಣದಲ್ಲಿ ಅಪರಾಧಿ ಎಂದು ಘೋಷಿಸಿದೆ. ಮೇ 26 ರಂದು ಶಿಕ್ಷೆಯನ್ನು ಪ್ರಕಟಿಸಲಿದೆ.
ಓದಿ: ಕುರ್ಲಾ ಆಸ್ತಿಗಾಗಿ 'ಡಿ ಕಂಪನಿ' ಜೊತೆ ಸೇರಿ ನವಾಬ್ ಮಲಿಕ್ ಸಂಚಿಗೆ ಸಾಕ್ಷ್ಯ ಇದೆ : ವಿಶೇಷ ನ್ಯಾಯಾಲಯ