ಚಂಡೀಗಢ(ಪಂಜಾಬ್): ಮುಂದಿನ ವರ್ಷ ಪಂಜಾಬ್ನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಇದೇ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಅವರು ಮಾತನಾಡಿದರು.
ಪಂಜಾಬ್ ಕಾಂಗ್ರೆಸ್ನಲ್ಲಿ ಉಂಟಾಗಿದ್ದ ಬಿಕ್ಕಟ್ಟಿನಿಂದಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಪಕ್ಷದಿಂದ ಹೊರಬಂದಿರುವ ಕ್ಯಾಪ್ಟನ್ ಅಮರೀಂದರ್ ಸಿಂಗ್ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ತನ್ನ ಪಕ್ಷ 'ಪಂಜಾಬ್ ಲೋಕ ಕಾಂಗ್ರೆಸ್' ಕಣಕ್ಕಿಳಿಯಲಿದ್ದು, ಇದಕ್ಕಾಗಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲಿದೆ ಎಂದಿದ್ದಾರೆ. ಆದಷ್ಟು ಬೇಗ ಮೈತ್ರಿ ಘೋಷಣೆಯಾಗಲಿದ್ದು, ಸೀಟು ಹಂಚಿಕೆ ಸಹ ನಡೆಯಲಿದೆ ಎಂದರು.
2022ರ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವುದೇ ನಮ್ಮ ಮುಖ್ಯ ಉದ್ದೇಶವಾಗಿದ್ದು, ತದನಂತರ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದರು. ಇದಕ್ಕೆ ಸಂಬಂಧಿಸಿದಂತೆ ಮುಂದಿನ ಕೆಲ ದಿನಗಳಲ್ಲಿ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಮಾತುಕತೆ ನಡೆಸುವ ಸುಳಿವು ನೀಡಿದ್ದಾರೆ.
ರಾಜ್ಯದಲ್ಲಿ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಈಗಾಗಲೇ ಅಮರೀಂದರ್ ಸಿಂಗ್ ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಜೊತೆ ಮಾತನಾಡಿದ್ದಾರೆ. ಇದೀಗ ಅಂತಿಮ ಹಂತದ ನಿರ್ಣಯಕ್ಕಾಗಿ ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದೆ.
-
In principle,a decision has been taken,now seat adjustment is to be done.We'll also do seat adjustments with Dhindsa sahab's party.I'll tell both parties that we should pick winners, support those candidates: Capt Amarinder Singh on question of alliance with BJP for Punjab polls pic.twitter.com/TImmIvBy3E
— ANI (@ANI) December 6, 2021 " class="align-text-top noRightClick twitterSection" data="
">In principle,a decision has been taken,now seat adjustment is to be done.We'll also do seat adjustments with Dhindsa sahab's party.I'll tell both parties that we should pick winners, support those candidates: Capt Amarinder Singh on question of alliance with BJP for Punjab polls pic.twitter.com/TImmIvBy3E
— ANI (@ANI) December 6, 2021In principle,a decision has been taken,now seat adjustment is to be done.We'll also do seat adjustments with Dhindsa sahab's party.I'll tell both parties that we should pick winners, support those candidates: Capt Amarinder Singh on question of alliance with BJP for Punjab polls pic.twitter.com/TImmIvBy3E
— ANI (@ANI) December 6, 2021
ಪಂಜಾಬ್ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹಾಗೂ ಶಿರೋಮಣಿ ಅಕಾಲಿ ದಳದ ಮಾಜಿ ಮುಖಂಡ ಸುಖ್ ದೇವ್ ಸಿಂಗ್ ದಿಂಡ್ಸಾ ಅವರೊಂದಿಗೂ ಮಾತಕತೆ ನಡೆದಿದೆ. ಇದೀಗ ಪಂಜಾಬ್ ಲೋಕ ಕಾಂಗ್ರೆಸ್, ಬಿಜೆಪಿ ಹಾಗೂ ಶಿರೋಮಣಿ ಅಕಾಲಿ ದಳ ಮೈತ್ರಿ ಮಾಡಿಕೊಂಡು ಚುನಾಚಣೆ ಎದುರಿಸುವ ಸಾಧ್ಯತೆ ಇದೆ.