ETV Bharat / bharat

ದೇವಸ್ಥಾನದಲ್ಲಿ ಬಾವಿಯ ಮೇಲ್ಛಾವಣಿ ಕುಸಿತ: ಮಹಿಳೆಯರು ಸೇರಿ ಐವರ ದುರ್ಮರಣ

ಮಧ್ಯಪ್ರದೇಶದ ಇಂದೋರ್‌ನಲ್ಲಿ ರಾಮ ನವಮಿ ಆಚರಣೆ ವೇಳೆ ದೇವಸ್ಥಾನದಲ್ಲಿ ಮೆಟ್ಟಿಲುಬಾವಿಯ ಮೇಲ್ಛಾವಣಿ ಕುಸಿದು ಭಾರಿ ದುರಂತ ಸಂಭವಿಸಿದೆ.

over-20-people-fall-into-stepwell-at-indore-temple
ದೇವಸ್ಥಾನದಲ್ಲಿ ಬಾವಿಯ ಮೇಲ್ಛಾವಣಿ ಕುಸಿತ: ಮಹಿಳೆಯರು ಸೇರಿ ಐವರ ದುರ್ಮರಣ, ಮುಂದುವರೆಗೆ ರಕ್ಷಣಾ ಕಾರ್ಯ
author img

By

Published : Mar 30, 2023, 3:50 PM IST

Updated : Mar 30, 2023, 4:25 PM IST

ದೇವಸ್ಥಾನದಲ್ಲಿ ಬಾವಿಯ ಮೇಲ್ಛಾವಣಿ ಕುಸಿತ: ಮಹಿಳೆಯರು ಸೇರಿ ಐವರ ದುರ್ಮರಣ

ಇಂದೋರ್‌ (ಮಧ್ಯಪ್ರದೇಶ): ಮಧ್ಯಪ್ರದೇಶದ ಇಂದೋರ್‌ನಲ್ಲಿ ಇಂದು ಭಾರಿ ಅವಘಡವೊಂದು ಸಂಭವಿಸಿದೆ. ದೇವಸ್ಥಾನದಲ್ಲಿ ಮೆಟ್ಟಿಲುಬಾವಿಯ ಮೇಲ್ಛಾವಣಿ ಕುಸಿದು ಬಿದ್ದಿದೆ. ಇದರ ಪರಿಣಾಮ ಮೂವರು ಮಹಿಳೆಯರು ಸೇರಿ ಐವರು ದುರ್ಮರಣ ಹೊಂದಿದ್ದಾರೆ. ಈಗಾಗಲೇ 10 ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.

ಇದನ್ನೂ ಓದಿ: ಠಾಣೆಯಲ್ಲಿದ್ದ ಹನುಮ:​ 27 ವರ್ಷಗಳ ನಂತರ ದೇವಸ್ಥಾನದಲ್ಲಿ ದೇವರ ವಿಗ್ರಹ ಮರು ಪ್ರತಿಷ್ಠಾಪನೆ

ಇಲ್ಲಿನ ಪಟೇಲ್ ನಗರ ಪ್ರದೇಶದ ಬೆಳೇಶ್ವರ ಮಹಾದೇವ್ ಜುಲೇಲಾಲ್ ದೇವಸ್ಥಾನದಲ್ಲಿ ರಾಮ ನವಮಿ ಆಚರಣೆ ವೇಳೆ ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಈ ಘಟನೆ ಸಂಭವಿಸಿದಾಗ ದೇವಸ್ಥಾನದಲ್ಲಿ ಹವನದ ಸಮಯದಲ್ಲಿ ಭಕ್ತರು ಪ್ರಾರ್ಥನೆ ಸಲ್ಲಿಸುತ್ತಿದ್ದರು. ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 20ಕ್ಕೂ ಹೆಚ್ಚು ಜನರು ಒಳಗಡೆ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.

  • इंदौर में दुर्भाग्यपूर्ण घटना घटी है। हम पूरी ताकत से रेस्क्यू ऑपरेशन में जुटे हुए हैं, मैं लगातार प्रशासन के संपर्क में हूं। अब तक 10 लोग सुरक्षित बाहर निकाले जा चुके हैं। 9 लोग अंदर हैं जो सुरक्षित हैं : CM pic.twitter.com/5SXHbAECy2

    — Chief Minister, MP (@CMMadhyaPradesh) March 30, 2023 " class="align-text-top noRightClick twitterSection" data=" ">

ಈ ವಿಷಯ ತಿಳಿದ ತಕ್ಷಣವೇ ಪೊಲೀಸರು, ಅಗ್ನಿಶಾಮಕ ದಳ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಬಾವಿಯೊಳಗೆ ಸಿಲುಕಿದ್ದ ಭಕ್ತರನ್ನು ಸ್ಥಳೀಯರ ನೆರವಿನಿಂದ ರಕ್ಷಿಸುವ ಕಾರ್ಯಾಚರಣೆ ನಡೆದಿದೆ. ಜಿಲ್ಲಾಡಳಿತದ ಉನ್ನತ ಅಧಿಕಾರಿಗಳು ಕೂಡ ಧಾವಿಸಿದ್ದಾರೆ.

ಮುಖ್ಯಮಂತ್ರಿಗಳ ಕಚೇರಿಯ ಹೇಳಿಕೆ: ಈ ಘಟನೆ ಕುರಿತು ಮುಖ್ಯಮಂತ್ರಿಗಳ ಕಚೇರಿಯ ಹೇಳಿಕೆ ಬಿಡುಗಡೆ ಮಾಡಿದ್ದು, ಸಿಎಂ ಚೌಹಾಣ್ ಶಿವರಾಜ್​ ಸಿಂಗ್​ ಚೌಹಾಣ್ ಘಟನೆಯ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಇಂದೋರ್‌ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಕಮಿಷನರ್ ಅವರೊಂದಿಗೆ ದೂರವಾಣಿಯಲ್ಲಿ ಸಿಎಂ ಚರ್ಚಿಸಿದ್ದಾರೆ. ಜೊತೆಗೆ ರಕ್ಷಣಾ ಕಾರ್ಯಾಚರಣೆಯನ್ನು ವೇಗಗೊಳಿಸಲು ಸೂಚನೆ ನೀಡಿದ್ದಾರೆ. ಇದಲ್ಲದೇ ಮುಖ್ಯಮಂತ್ರಿಗಳ ಕಚೇರಿ ಇಂದೋರ್ ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

  • Extremely pained by the mishap in Indore. Spoke to CM @ChouhanShivraj Ji and took an update on the situation. The State Government is spearheading rescue and relief work at a quick pace. My prayers with all those affected and their families.

    — Narendra Modi (@narendramodi) March 30, 2023 " class="align-text-top noRightClick twitterSection" data=" ">

ಪ್ರಧಾನಿ ಮೋದಿ ಟ್ವೀಟ್​: ಮುಂದುವರೆದು, ಇದೊಂದು ದುರದೃಷ್ಟಕರ ಘಟನೆಯಾಗಿದೆ. ಸದ್ಯ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಇದುವರೆಗೂ 10 ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಒಂಬತ್ತು ಮಂದಿ ಇನ್ನೂ ಸಿಕ್ಕಿಬಿದ್ದಿದ್ದಾರೆ. ಅವರನ್ನು ರಕ್ಷಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಸಿಎಂ ಕಚೇರಿ ತಿಳಿಸಿದೆ. ಮತ್ತೊಂದೆಡೆ, ಪ್ರಧಾನಿ ಮೋದಿ ಸಹ ಈ ಬಗ್ಗೆ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: ಶ್ರೀರಾಮನ ಬದುಕು ಪ್ರತಿ ಯುಗದ ಮಾನವೀಯತೆಗೆ ಸ್ಫೂರ್ತಿ: ಪ್ರಧಾನಿ ಮೋದಿ

ಇಂದೋರ್‌ನಲ್ಲಿ ನಡೆದ ದುರ್ಘಟನೆಯಿಂದ ತೀವ್ರ ನೋವಾಗಿದೆ. ಸಿಎಂ ಚೌಹಾಣ್ ಶಿವರಾಜ್ ಜಿ ಅವರೊಂದಿಗೆ ಮಾತನಾಡಿ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆಯಲಾಗಿದೆ. ರಾಜ್ಯ ಸರ್ಕಾರವು ತ್ವರಿತ ಗತಿಯಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ನಡೆಸುತ್ತಿದೆ. ಎಲ್ಲ ಸಂತ್ರಸ್ತರು ಮತ್ತು ಅವರ ಕುಟುಂಬಗಳ ಸುರಕ್ಷತೆಗೆ ನನ್ನ ಪ್ರಾರ್ಥನೆ ಎಂದು ಪ್ರಧಾನಿ ಮೋದಿ ಟ್ವೀಟ್​ ಮಾಡಿದ್ದಾರೆ.

ಈ ದೇವಾಲಯವು ಇಂದೋರ್ ನಗರದಲ್ಲಿ ಬಹಳ ಹಳೆಯದಾಗಿದೆ. ಪ್ರತಿ ವರ್ಷ ರಾಮ ನವಮಿಯಂದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸೇರಿರುತ್ತಾರೆ.

ಇದನ್ನೂ ಓದಿ: ತ್ರಿಪುರಾ ವಿಧಾನಸಭೆಯಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸಿದ ಬಿಜೆಪಿ ಶಾಸಕ!

Last Updated : Mar 30, 2023, 4:25 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.