ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶೇ.56ರಷ್ಟು ಮಂದಿಯಲ್ಲಿ ಕೊರೊನಾ ಸೋಂಕಿನ ವಿರುದ್ಧ ಹೋರಾಡುವ ಶಕ್ತಿ(ಇಮ್ಯುನಿಟಿ) ಇದೆ ಎಂದು ಎಂದು ಐದನೇ ಸಿರೋ ಸಮೀಕ್ಷೆ ವರದಿಯಿಂದ ತಿಳಿದು ಬಂದಿದೆ.
ಇದಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಅಲ್ಲಿನ ಆರೋಗ್ಯ ಸಚಿವ ಸತ್ಯೇಂದ್ರ ಜೈನ್, ಸಮೀಕ್ಷೆ ಪ್ರಕಾರ ಉತ್ತರ ದೆಹಲಿಯ 11 ಜಿಲ್ಲೆಗಳಲ್ಲಿ ಅತಿ ಕಡಿಮೆ ಅಂದರೆ ಶೇ.49ರಷ್ಟು ಕೋವಿಡ್ ಇಮ್ಯುನಿಟಿ ಹಾಗೂ ದಕ್ಷಿಣ ದೆಹಲಿಯಲ್ಲಿ ಶೇ.62.18ರಷ್ಟು ಹಿರಿಯ ನಾಗರಿಕರಿಗೆ ಕೊರೊನಾ ಪ್ರತಿಕಾಯ ಇರುವುದು ಖಚಿತವಾಗಿದೆ ಎಂದು ತಿಳಿಸಿದ್ದಾರೆ.
ಓದಿ: ರೈತರ ಪ್ರತಿಭಟನೆ :ಪಂಜಾಬ್ ಸಿಎಂ ಕರೆದ ಸರ್ವಪಕ್ಷ ಸಭೆಗೆ ಬಿಜೆಪಿ ಗೈರು
ಈ ಸಮೀಕ್ಷೆ ನಡೆಸಲು ಉತ್ತಮ ತಂತ್ರಜ್ಞಾನ ಬಳಕೆ ಮಾಡಲಾಗಿದ್ದು, ಪ್ರತಿ ವಾರ್ಡ್ನಿಂದ ಮಾದರಿ ಸಂಗ್ರಹ ಮಾಡಲಾಗಿದೆ. ಒಟ್ಟಾರೆ 28 ಸಾವಿರ ಮಾದರಿ ತೆಗೆದುಕೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿ ಮಾಹಿತಿ ನೀಡಿದ್ದಾರೆ. ಇದರ ಜತೆಗೆ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು, ಹ್ಯಾಂಡ್ ವಾಶ್ ಹಾಗೂ ಸ್ಯಾನಿಟೈಸರ್ ಬಳಕೆ ಮುಂದುವರಿಸಬೇಕು ಎಂದು ಅವರು ತಿಳಿಸಿದ್ದಾರೆ.
ಕಳೆದ ಕೆಲ ದಿನಗಳಿಂದ ದೇಶದಲ್ಲಿ ಕೊರೊನಾ ವೈರಸ್ ಹಾವಳಿ ಕಡಿಮೆಯಾಗಿದ್ದು, ಈಗಾಗಲೇ ದೇಶದಲ್ಲಿ ಕೊರೊನಾ ವ್ಯಾಕ್ಸಿನ್ಗಳಾದ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಕೆಲಸ ಮಾಡುತ್ತಿವೆ.