ETV Bharat / bharat

ಉತ್ತರ ಪ್ರದೇಶದಲ್ಲಿ ಅಸಾದುದ್ದೀನ್ ಓವೈಸಿ ಕಾರಿನ ಮೇಲೆ ಗುಂಡಿನ ದಾಳಿ.. ಓರ್ವನ ಬಂಧನ - Asaduddin Owaisi car

Firing on MP Owaisi car in Uttar Pradesh.. ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ ದೆಹಲಿಗೆ ತೆರಳುತ್ತಿದ್ದ ವೇಳೆ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಗುಂಡಿನ ದಾಳಿ ನಡೆದಿದೆ.

AIMIM chief Asaduddin Owaisi
AIMIM chief Asaduddin Owaisi
author img

By

Published : Feb 3, 2022, 6:29 PM IST

Updated : Feb 3, 2022, 7:37 PM IST

ಮೀರತ್​​(ಉತ್ತರ ಪ್ರದೇಶ): ಉತ್ತರ ಪ್ರದೇಶದ ಕಿಥೌರ್​​ನಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ ದೆಹಲಿಗೆ ತೆರಳುತ್ತಿದ್ದ ವೇಳೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ತಮ್ಮ ಕಾರಿನ ಮೇಲೆ ಗುಂಡಿನ ದಾಳಿ ನಡೆದಿದೆ ಎಂದು ಹೇಳಿಕೊಂಡಿದ್ದಾರೆ.

ಮೀರತ್​ನಿಂದ ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳುತ್ತಿದ್ದಾಗ ಛಜರ್ಸಿ ಟೋಲ್ ಪ್ಲಾಜಾ ಬಳಿ ಓವೈಸಿ ಕಾರಿನ ಮೇಲೆ 3-4 ಸುತ್ತು ಗುಂಡು ಹಾರಿಸಲಾಗಿದ್ದು, ಕಾರಿನ ಟೈರ್​ಗಳು ಪಂಕ್ಚರ್​​ ಆಗಿವೆ ಎಂದು ಅವರು ತಿಳಿಸಿದ್ದಾರೆ. ತಕ್ಷಣವೇ ಓವೈಸಿ ಬೇರೆ ಕಾರಿನಲ್ಲಿ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ.

  • AIMIM chief Asaduddin Owaisi says that bullets were fired upon his vehicle near Chhajarsi toll plaza when he was heading to Delhi after election campaigning in Kithaur, Meerut (in UP) today.

    Visuals from the spot. pic.twitter.com/0VBamMqyt0

    — ANI (@ANI) February 3, 2022 " class="align-text-top noRightClick twitterSection" data=" ">

ಘಟನಾ ಸ್ಥಳಕ್ಕೆ ಈಗಾಗಲೇ ಭೇಟಿ ನೀಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆಂದು ತಿಳಿದುಬಂದಿದೆ.

ಇದನ್ನೂ ಓದಿರಿ: UP Polls: 'ಭಾಗಿದಾರಿ' ಅಧಿಕಾರಕ್ಕೆ ಬಂದರೆ ಯುಪಿಗೆ ಇಬ್ಬರು ಸಿಎಂ, ಮೂವರು ಡಿಸಿಎಂ: ಓವೈಸಿ ವಿಚಿತ್ರ ಭರವಸೆ

ಆಲ್​ ಇಂಡಿಯಾ ಮಸ್ಲಿಸ್​​-ಎ- ಇತ್ತೆಹಾದುಲ್​ ಮುಸ್ಲಿಮೀನ್​(ಎಐಎಂಐಎಂ) ಅಧ್ಯಕ್ಷ ಅಸಾದುದ್ದೀನ್ ಓವೈಸಿ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಅನೇಕ ಅಭ್ಯರ್ಥಿಗಳನ್ನ ಕಣಕ್ಕಿಳಿಸಿದ್ದು, ಅವರ ಪರವಾಗಿ ಪ್ರಚಾರ ನಡೆಸಿದ್ದಾರೆ.

ಶೂಟರ್ ಬಂಧನ: ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಉಳಿದವರ ಬಂಧನಕ್ಕೆ ಶೋಧಕಾರ್ಯ ನಡೆದಿದೆ.

Last Updated : Feb 3, 2022, 7:37 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.