ಥಾಣೆ: ಆಕ್ಸಿಜನ್ ಅಲಭ್ಯತೆಯಿಂದಾಗಿ ಆರು ಜನ ಸಾವನ್ನಪ್ಪಿರುವ ದಾರುಣ ಘಟನೆ ನಗರದ ವೇದಾಂತ ಆಸ್ಪತ್ರೆಯಲ್ಲಿ ನಡೆದಿದೆ.
ವರ್ತಕ್ ನಗರದ ಆಸ್ಪತ್ರೆಯಲ್ಲಿ ಆರು ಮಂದಿ ರೋಗಿಗಳು ಸಕಾಲದಲ್ಲಿ ಆಕ್ಸಿಜನ್ ಸಿಗದೆ ಪ್ರಾಣ ಕಳೆದುಕೊಂಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಮೃತರ ಸಂಬಂಧಿಕರು ಪ್ರತಿಭಟನೆಗಿಳಿದಿದ್ದಾರೆ.
ಥಾಣೆ ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ಕೈಗೊಂಡರು. ಬಳಿಕ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.