ETV Bharat / bharat

ಪದ್ಮ ಪ್ರಶಸ್ತಿ 2022 : ಸಿಡಿಎಸ್‌ ಜ.ಬಿಪಿನ್‌ ರಾವತ್‌ಗೆ ಮರಣೋತ್ತರ ಪದ್ಮ ವಿಭೂಷಣ ; ಪುತ್ರಿಯರಿಗೆ ಪ್ರಶಸ್ತಿ ಪ್ರದಾನ

author img

By

Published : Mar 21, 2022, 5:57 PM IST

Updated : Mar 21, 2022, 6:39 PM IST

ಸೇನೆಯಲ್ಲಿ ಸಲ್ಲಿಸಿದ ಸೇವೆ ಪರಿಗಣಿಸಿ ಸಿಡಿಎಸ್‌ ಜನರಲ್‌ ಬಿಪಿನ್‌ ರಾವತ್‌ ಅವರಿಗೆ ಮರಣೋತ್ತರವಾಗಿ ಘೋಷಿಸಿದ್ದ ಪದ್ಮ ವಿಭೂಷಣ ಪ್ರಶಸ್ತಿಯನ್ನು ರಾವತ್‌ ಅವರ ಪುತ್ರಿಯರು ರಾಷ್ಟ್ರಪತಿಗಳಿಂದ ಸ್ವೀಕರಿಸಿದ್ದಾರೆ..

Padma Awards 2022: Gen Bipin Rawat conferred with Padma Vibhushan award posthumously
ಪದ್ಮ ಪ್ರಶಸ್ತಿ 2022: ಸಿಡಿಎಸ್‌ ಜ.ಬಿಪಿನ್‌ ರಾವತ್‌ಗೆ ಮರಣೋತ್ತರ ಪದ್ಮ ವಿಭೂಷಣ; ಪುತ್ರಿಯರಿಗೆ ಪ್ರಶಸ್ತಿ ಪ್ರದಾನ

ನವದೆಹಲಿ : 2022ನೇ ಸಾಲಿನ ದೇಶದ ಉತ್ಯುನ್ನತ ಗೌರವ ಪದ್ಮ ಪ್ರಶಸ್ತಿಗಳನ್ನು ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ರಾಷ್ಟ್ರಪತಿ ಭವನದಲ್ಲಿ ಪ್ರದಾನ ಮಾಡುತ್ತಿದ್ದಾರೆ.

ಸಿಡಿಎಸ್‌ ಜನರಲ್‌ ಬಿಪಿನ್‌ ರಾವತ್‌ ಅವರಿಗೆ ಮರಣೋತ್ತರವಾಗಿ ಘೋಷಿಸಲಾಗಿದ್ದ ಪದ್ಮ ವಿಭೂಷಣ ಪ್ರಶಸ್ತಿಯನ್ನು ರಾವತ್‌ ಅವರ ಪುತ್ರಿಯರಾದ ಕ್ರಿತಿಕಾ ಮತ್ತು ತರಿಣಿ ಅವರು ಸ್ವೀಕರಿಸಿದರು.

ಪದ್ಮ ಪ್ರಶಸ್ತಿ 2022 : ಸಿಡಿಎಸ್‌ ಜ.ಬಿಪಿನ್‌ ರಾವತ್‌ಗೆ ಮರಣೋತ್ತರ ಪದ್ಮ ವಿಭೂಷಣ ; ಪುತ್ರಿಯರಿಗೆ ಪ್ರಶಸ್ತಿ ಪ್ರದಾನ

ಕಳೆದ ವರ್ಷ ಡಿಸೆಂಬರ್‌ನಲ್ಲಿ ತಮಿಳುನಾಡಿನಲ್ಲಿ ನಡೆದಿದ್ದ ಸೇನಾ ಹೆಲಿಕಾಪ್ಟರ್‌ನಲ್ಲಿ ಅಪಘಾತದಲ್ಲಿ ಸಿಡಿಎಸ್‌ ಬಿಪಿನ್‌ ರಾವತ್‌ ಅವರ ಪತ್ನಿ ಮಧುಲಿಕಾ ರಾವತ್‌ ಸೇರಿ 13 ಮಂದಿ ಮೃತಪಟ್ಟಿದ್ದರು. ರಾವತ್‌ ಅವರು ಸೇನೆಗೆ ಸಲ್ಲಿಸಿದ್ದ ಸೇವೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ಮರಣೋತ್ತರವಾಗಿ ಪದ್ಮ ವಿಭೂಷಣ ಪ್ರಶಸ್ತಿಯನ್ನು ಘೋಷಿಸಿತ್ತು.

ಕಾಂಗ್ರೆಸ್‌ ನಾಯಕ ಆಜಾದ್‌ಗೆ ಪದ್ಮ ಭೂಷಣ : ಸಾರ್ವಜನಿಕ ಕ್ಷೇತ್ರದಲ್ಲಿನ ಸೇವೆಯನ್ನು ಪರಿಗಣಿಸಿ ಕಾಂಗ್ರೆಸ್‌ ಹಿರಿಯ ನಾಯಕ ಗುಲಾಂ ನಬಿ ಆಜಾದ್‌ ಅವರಿಗೆ ಪದ್ಮ ಭೂಷಣ ಪ್ರಶಸ್ತಿಯನ್ನು ಘೋಷಿಸಲಾಗಿದ್ದು, ಆಜಾದ್‌ ಅವರು ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದರು.

ಇದನ್ನೂ ಓದಿ: ದಲಿತ ಕವಿ ದಿ. ಸಿದ್ದಲಿಂಗಯ್ಯ ಸೇರಿ ಕರ್ನಾಟಕದ ಐವರಿಗೆ ಪದ್ಮಶ್ರೀ ಪುರಸ್ಕಾರ

Last Updated : Mar 21, 2022, 6:39 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.