ಕಾನ್ಪುರ(ಉತ್ತರ ಪ್ರದೇಶ): ನಗರದ ಜೂಹಿ ಲಾಲ್ ಕಾಲೋನಿಯಲ್ಲಿ ಪಾಕಿಸ್ತಾನದ ಧ್ವಜಾರೋಹಣ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಕಿದ್ವಾಯಿ ನಗರ ಪೊಲೀಸರು ಪಾಕಿಸ್ತಾನದ ಧ್ವಜವನ್ನು ಕೆಳಗಿಳಿಸಿದ್ದಾರೆ.
ಮೂಲಗಳ ಪ್ರಕಾರ, ಜೂಹಿ ಲಾಲ್ ಕಾಲೋನಿಯಲ್ಲಿ ವಾಸಿಸುತ್ತಿದ್ದ ಮುಬೀನ್ ಎಂಬುವವರ ಮನೆಯ ಛಾವಣಿಯ ಮೇಲೆ ಕಳೆದ ಒಂದು ವರ್ಷದಿಂದ ಪಾಕಿಸ್ತಾನದ ಧ್ವಜವನ್ನು ಅಳವಡಿಸಲಾಗಿತ್ತು. ಅಲ್ಲದೇ ಜೂಹಿ ಲಾಲ್ ಕಾಲೋನಿಯಲ್ಲಿ ಭಾರತೀಯ ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡಲಾಗಿದೆ ಎನ್ನಲಾಗ್ತಿದೆ.
ಇಲ್ಲಿ ಅಳವಡಿಸಲಾಗಿರುವ ತ್ರಿವರ್ಣ ಧ್ವಜದಲ್ಲಿ ಅಶೋಕ ಚಕ್ರದ ಬದಲಿಗೆ ಇಸ್ಲಾಮಿಕ್ ಚಿಹ್ನೆಯನ್ನು ತಯಾರಿಸಿ ಧ್ವಜವನ್ನು ಛಾವಣಿಯ ಮೇಲೆ ಅಳವಡಿಸಲಾಗಿದೆ. ಈ ವಿಡಿಯೋ ವೈರಲ್ ಆಗಿದೆ. ಆದರೆ ಸ್ಥಳೀಯ ಪೊಲೀಸರು ಹಾಗೂ ಉನ್ನತ ಅಧಿಕಾರಿಗಳು ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ವಿವಿಧತೆಯಲ್ಲಿ ಏಕತೆಯೇ ಭಾರತದ ಶಕ್ತಿ.. 100ನೇ ವರ್ಷದ ಸ್ವಾತಂತ್ರ್ಯ ದಿನಕ್ಕೆ ಪಂಚ ಪ್ರಾಣ ಪ್ರತಿಪಾದಿಸಿದ ಮೋದಿ