ಅಮೃತಸರ(ಪಂಜಾಬ್): ಭಾರತದ ಗಡಿ ನಿಯಂತ್ರಣ ರೇಖೆ ಬಳಿ ಬಂದಿದ್ದ ಪಾಕಿಸ್ತಾನಕ್ಕೆ ಸೇರಿದ ಡ್ರೋನ್ ಅನ್ನು ಗುಂಡಿನ ದಾಳಿ ಮೂಲಕ ಭದ್ರತಾ ಪಡೆಗಳು ಹಿಮ್ಮೆಟ್ಟಿಸಿರುವ ಘಟನೆ ಪಂಜಾಬ್‌ನ ಅಮೃತಸರ ಜಿಲ್ಲೆಯಲ್ಲಿ ನಡೆದಿದೆ.
ಭಾರತ - ಪಾಕ್ ಗಡಿಯ ಬಿಒಪಿ ಟವರ್ ಬಳಿ ಡ್ರೋನ್ ಕಾಣಿಸಿಕೊಳ್ಳುತ್ತಿದ್ದಂತೆ ಭದ್ರತಾ ಸಿಬ್ಬಂದಿ ಗುಂಡು ಹಾರಿಸಿದ್ದಾರೆ. ಆಗ ಪಾಕಿಸ್ತಾನದತ್ತ ಡ್ರೋನ್ ವಾಪಸ್ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಮೃತಸರ ಜಿಲ್ಲೆಯ ಬಿಂದಿ ಸೈದನ್ ಗ್ರಾಮದಲ್ಲಿ ಭದ್ರತಾ ಸಿಬ್ಬಂದಿ ಈ ಡ್ರೋನ್ ಅನ್ನು ಗುರುತಿಸಿದ್ದಾರೆ.
ಕಳೆದ ಹಲವು ದಿನಗಳಿಂದ ಮಂಜಿನ ಲಾಭವನ್ನು ಪಡೆದುಕೊಂಡು ಪಾಕಿಸ್ತಾನದ ಕಳ್ಳಸಾಗಣೆದಾರರು ಡ್ರೋನ್‌ಗಳ ಮೂಲಕ ಭಾರತಕ್ಕೆ ಹೆರಾಯಿನ್ ಮತ್ತು ಇತರ ಶಸ್ತ್ರಾಸ್ತ್ರಗಳನ್ನು ಕಳುಹಿಸುತ್ತಿದ್ದಾರೆ ಎನ್ನಲಾಗಿದೆ. ಸೈದಾನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿಎಸ್‌ಎಫ್ ಯೋಧರು ಮತ್ತು ಪೊಲೀಸ್ ಅಧಿಕಾರಿಗಳು ಶೋಧ ಕಾರ್ಯಾಚರಣೆಯನ್ನು ಮುಂದುವರೆಸಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ