ಅಮೃತಸರ: ಪಂಜಾಬ್ನ ಅಮೃತಸರ ಜಿಲ್ಲೆಯಲ್ಲಿನ ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನಿ ನುಸುಳುಕೋರನನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್) ಹೊಡೆದುರುಳಿಸಿದೆ.
ನಿನ್ನೆ ಸಂಜೆ ಗಡಿಯ ಬಳಿ ಅನುಮಾನಾಸ್ಪದ ಚಲನೆಯನ್ನು ಗಮನಿಸಿದ ಬಿಎಸ್ಎಫ್ ಸಿಬ್ಬಂದಿ ಎಚ್ಚೆತ್ತುಕೊಂಡಿದ್ದು, ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದಾರೆ.
ಇದನ್ನೂ ಓದಿ: ಮಧುರೈನಲ್ಲಿ ಜಲ್ಲಿಕಟ್ಟು ಸಂಭ್ರಮ: 58 ಮಂದಿಗೆ ಗಾಯ
ಅನುಮಾನಾಸ್ಪದ ಚಲನೆ ಪಾಕಿಸ್ತಾನಿ ನುಸುಳುಕೋರನದ್ದು ಎಂಬುದು ಖಚಿತವಾಗುತ್ತಿದ್ದಂತೆಯೇ ರಾತ್ರಿ 8.30ರ ವೇಳೆಗೆ ಆತನನ್ನು ಗುಂಡಿಕ್ಕಿ ಹತ್ಯೆಗೈಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.