ETV Bharat / bharat

ದೆಹಲಿ ಪೊಲೀಸರಲ್ಲಿ 'ಕುಂದುಕೊರತೆ' ಹೇಳಿದ ಪಾಕಿಸ್ತಾನದ ಮಹಿಳೆ: ನಮಗೆ ಅಧಿಕಾರವಿಲ್ಲ ಎಂದ ಪೊಲೀಸರು

ಪಾಕಿಸ್ತಾನದ ಮಹಿಳೆಯೋರ್ವರು ದೆಹಲಿ ಪೊಲೀಸರೊಂದಿಗೆ ಕುಂದುಕೊರತೆ ಹಂಚಿಕೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಪೊಲೀಸರು ನಿಮ್ಮ ದೇಶದಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಿದಾಗ ನೀವು ಹೇಗೆ ಟ್ವೀಟ್ ಮಾಡುತ್ತಿದ್ದೀರಿ? ಎಂದು ಕೇಳಿದ್ದಾರೆ.

Representative image
ಪ್ರಾತಿನಿಧಿಕ ಚಿತ್ರ
author img

By

Published : May 10, 2023, 12:47 PM IST

ನವದೆಹಲಿ: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನದ ನಂತರ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವಿಲಕ್ಷಣ ಘಟನೆಗಳು ನಡೆದಿವೆ. ಡಿಜಿಟಲ್ ಕ್ಷೇತ್ರದಲ್ಲಿ ಸಂದೇಶಗಳ ಕೋಲಾಹಲದ ನಡುವೆ ಓರ್ವ ಟ್ವಿಟರ್ ಬಳಕೆದಾರರು ನ್ಯಾಯಕ್ಕಾಗಿ 'ಅಸಾಂಪ್ರದಾಯಿಕ' ಮನವಿ ಮಾಡಿ ಎಲ್ಲರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಪಾಕಿಸ್ತಾನದ ಕರಾಚಿಯ ಸ್ವಯಂ ಘೋಷಿತ ಸಾಮಾಜಿಕ ಕಾರ್ಯಕರ್ತೆ ಎಂದು ಹೇಳಿಕೊಂಡಿರುವ ಟ್ವಿಟರ್ ಬಳಕೆದಾರರಾದ ಸೆಹರ್ ಶಿನ್ವಾರಿ ಎಂಬುವವರು ತನ್ನ 'ಕುಂದುಕೊರತೆ'ಗಳನ್ನು ಹಂಚಿಕೊಳ್ಳಲು ಸಾಮಾಜಿಕ ವೇದಿಕೆಯನ್ನು ಬಳಸಿಕೊಂಡಿದ್ದಾರೆ. ಕ್ಷಿಪ್ರವಾಗಿ ಗಮನ ಸೆಳೆದ ಟ್ವೀಟ್‌ನಲ್ಲಿ "ದೆಹಲಿ ಪೊಲೀಸರ ಆನ್‌ಲೈನ್ ಲಿಂಕ್ ಯಾರಿಗಾದರೂ ತಿಳಿದಿದೆಯೇ?. ನಾನು ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತೀಯ ಗುಪ್ತಚರ ಸಂಸ್ಥೆ (ಸಂಶೋಧನೆ ಮತ್ತು ವಿಶ್ಲೇಷಣೆ ವಿಭಾಗ) ವಿರುದ್ಧ ದೂರು ದಾಖಲಿಸಬೇಕಾಗಿದೆ. ಪಾಕಿಸ್ತಾನದಲ್ಲಿ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಪರಿಸ್ಥಿತಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗುಪ್ತಚರ ಸಂಸ್ಥೆ ಹೊಣೆ. ಭಾರತೀಯ ನ್ಯಾಯಾಲಯಗಳು ಸ್ವತಂತ್ರವಾಗಿವೆ. ಭಾರತೀಯ ಸುಪ್ರೀಂ ಕೋರ್ಟ್ ನನಗೆ ನ್ಯಾಯವನ್ನು ಒದಗಿಸುತ್ತದೆ ಎಂದು ನನಗೆ ಖಾತ್ರಿಯಿದೆ ಎಂದು ಅವರು ಟ್ವೀಟ್​ನಲ್ಲಿ ಹೇಳಿಕೊಂಡಿದ್ದಾರೆ.

  • We are afraid we still do not have jurisdiction in Pakistan.

    But, would like to know how come you are tweeting when the internet has been shut down in your country! https://t.co/lnUCf8tY59

    — Delhi Police (@DelhiPolice) May 9, 2023 " class="align-text-top noRightClick twitterSection" data=" ">

ಇದನ್ನೂ ಓದಿ: ಪಾಕಿಸ್ತಾನ ಪ್ರಕ್ಷುಬ್ಧ: ಇಮ್ರಾನ್ ಖಾನ್ ಬಂಧನದ ಬಳಿಕ ಭುಗಿಲೆದ್ದ ಆಕ್ರೋಶ

ಟ್ವೀಟ್ ಪೋಸ್ಟ್​​ ಆಗುತ್ತಿದ್ದಂತೆ ನೆಟಿಜನ್‌ಗಳು ದೆಹಲಿ ಪೊಲೀಸರ ಪ್ರತಿಕ್ರಿಯೆಗಾಗಿ ಕುತೂಹಲದಿಂದ ಕಾಯುತ್ತಿದ್ದರು. ದೆಹಲಿ ಪೊಲೀಸರ ಸಾಮಾಜಿಕ ಮಾಧ್ಯಮ ತಂಡ ಇದಕ್ಕೆ ಹಾಸ್ಯಮಯ ಪ್ರತಿಕ್ರಿಯೆ ನೀಡಿತು. "ಪಾಕಿಸ್ತಾನದಲ್ಲಿ ನಮಗೆ ಅಧಿಕಾರವಿಲ್ಲ. ಆದರೆ ನಿಮ್ಮ ದೇಶದಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಿದಾಗ ನೀವು ಹೇಗೆ ಟ್ವೀಟ್ ಮಾಡುತ್ತಿದ್ದೀರಿ ಎಂದು ತಿಳಿಯಲು ಬಯಸುತ್ತೇವೆ?" ಎಂದು ಸೆಹರ್ ಅವರ ಟ್ವೀಟ್ ಅನ್ನು ಟ್ಯಾಗ್ ಮಾಡಿ ಪ್ರಶ್ನಿಸಿದ್ದಾರೆ.

ಇದಕ್ಕೆ ಒರ್ವ ಬಳಕೆದಾರ "ಹೊಟ್ಟೆಯಲ್ಲಿ ಆಹಾರವಿಲ್ಲದಿದ್ದರೆ, ಮನಸ್ಸು ಹೀಗೆ ಹಾಳಾಗುತ್ತದೆ" ಎಂದು ಕಾಮೆಂಟ್​ ಮಾಡಿದ್ದಾರೆ. "ಅದು ಪಾಕಿಸ್ತಾನ. ಅಲ್ಲಿ ಎಲ್ಲವೂ ಸಾಧ್ಯ" ಎಂದು ಮತ್ತೊಬರು ಬರೆದಿದ್ದಾರೆ. ಪಾಕಿಸ್ತಾನದ ಸಹರ್ ಶಿನ್ವಾರಿ ತನ್ನ ಟ್ವಿಟ್ಟರ್ ಪ್ರೊಫೈಲ್‌ನಲ್ಲಿ ನಟಿ ಮತ್ತು ಸಾಮಾಜಿಕ ಕಾರ್ಯಕರ್ತೆ ಎಂದು ಹೇಳಿಕೊಂಡಿದ್ದಾರೆ. ಅವರು ಯೂಟ್ಯೂಬರ್ ಕೂಡ. ಭಾರತ ಮತ್ತು ಹಿಂದೂ ಧರ್ಮದ ವಿರುದ್ಧ ಪ್ರತಿಭಟಿಸಿ ಅವರು ಟ್ವಿಟರ್‌ನಲ್ಲಿ ವಿಡಿಯೋಗಳನ್ನು ಪೋಸ್ಟ್ ಮಾಡುತ್ತಿರುತ್ತಾರೆ.

ಇಮ್ರಾನ್ ಖಾನ್ ಅವರ ಬಂಧನದ ವಿರುದ್ಧ ಹಿಂಸಾತ್ಮಕ ಪ್ರತಿಭಟನೆಗಳ ನಡುವೆ ಆಂತರಿಕ ಸಚಿವಾಲಯದ ನಿರ್ದೇಶನದ ಮೇರೆಗೆ ರಾಷ್ಟ್ರವ್ಯಾಪಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಅವರ ಬಂಧನ ಖಂಡಿಸಿ ಪಾಕಿಸ್ತಾನದಾದ್ಯಂತ ನಿನ್ನೆಯಿಂದ(ಮಂಗಳವಾರ) ಪ್ರತಿಭಟನೆಗಳು ಭುಗಿಲೆದ್ದಿವೆ. ಹಲವಾರು ನಗರಗಳಲ್ಲಿ ಸಾವಿರಾರು ಪ್ರತಿಭಟನಾಕಾರರು ಪೊಲೀಸರೊಂದಿಗೆ ಸಂಘರ್ಷ ನಡೆಸುತ್ತಿದ್ದಾರೆ. ಮುಖ್ಯ ರಸ್ತೆಗಳನ್ನು ನಿರ್ಬಂಧಿಸಲಾಗಿದೆ.

ಇದನ್ನೂ ಓದಿ: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್​ ಖಾನ್​ ಅರೆಸ್ಟ್​..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.