ETV Bharat / bharat

ಒತ್ತಡದಿಂದ ಯಶಸ್ಸಿನತ್ತ ತೆಗೆದುಕೊಂಡು ಹೋಗುವುದೇ ಪರೀಕ್ಷಾ ಪೇ ಚರ್ಚಾ ಗುರಿ: ಮೋದಿ - ಪ್ರಧಾನಿ ನರೇಂದ್ರ ಮೋದಿ

ಮಕ್ಕಳಲ್ಲಿ ಇರುವ ಪರೀಕ್ಷಾ ಭಯವನ್ನು ನಿವಾರಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಪ್ರತಿ ವರ್ಷ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಮಕ್ಕಳ ಎಲ್ಲ ಪ್ರಶ್ನೆಗಳಿಗೆ ಅದರಲ್ಲಿ ಉತ್ತರಿಸುತ್ತಾರೆ.

'Pariksha Pe Charcha' aims to transform stress into success: PM Modi
ಒತ್ತಡದಿಂದ ಯಶಸ್ಸಿನತ್ತ ತೆಗೆದುಕೊಂಡು ಹೋಗುವುದೇ ಪರೀಕ್ಷಾ ಪೇ ಚರ್ಚಾ ಗುರಿ: ಮೋದಿ
author img

By PTI

Published : Dec 15, 2023, 6:51 AM IST

ನವದೆಹಲಿ: ತಾವು 'ಪರೀಕ್ಷಾ ಪೇ ಚರ್ಚಾ' ಕಾರ್ಯಕ್ರಮವನ್ನು ನಡೆಸುತ್ತಿರುವ ಪ್ರಮುಖ ಉದ್ದೇಶ ಎಂದರೆ ಒತ್ತಡವನ್ನ ಮೀರಿ ಯಶಸ್ಸಿನತ್ತ ಸಾಗುವ ಗುರಿ ಆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ, ವಿದ್ಯಾರ್ಥಿಗಳು ನಗುಮೊಗದಿಂದ ಪರೀಕ್ಷೆಗಳನ್ನು ಎದುರಿಸಲು ಅನುವು ಮಾಡಿಕೊಡುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟನೆ ನೀಡಿದ್ದಾರೆ.

ಈ ನಡುವೆ 'ಪರೀಕ್ಷಾ ಪೇ ಚರ್ಚಾ' ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ಮತ್ತು ಪ್ರಧಾನಿ ಮೋದಿಯವರೊಂದಿಗೆ ಸಂವಾದ ನಡೆಸುವ ಅವಕಾಶ ಸದುಪಯೋಗ ಪಡಿಸಿಕೊಳ್ಳುವಂತೆ ಕೇಂದ್ರ ಶಿಕ್ಷಣ ಸಚಿವಾಲಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರಲ್ಲಿ ಮನವಿ ಮಾಡಿದೆ.

"ಪರೀಕ್ಷಾ ಪೇ ಚರ್ಚಾವು ಒತ್ತಡವನ್ನು ನಿರ್ವಹಣೆ ಮಾಡಿ ಯಶಸ್ಸಿನತ್ತ ಸಾಗುವ ಗುರಿ ಹೊಂದಿದೆ. ವಿದ್ಯಾರ್ಥಿಗಳು ನಗುಮೊಗದಿಂದ ಪರೀಕ್ಷೆಗಳನ್ನು ಎದುರಿಸಲು ಅನುವು ಮಾಡಿಕೊಡುತ್ತದೆ ಎಂದಿರುವ ಪ್ರಧಾನಿ ಮೋದಿ, ಯಾರಿಗೆ ಗೊತ್ತು ನಮ್ಮ ಈ ಸಂವಾದದ ಅಧಿವೇಶನದಲ್ಲಿ ಮುಂದಿನ ಅಧ್ಯಯನಕ್ಕೆ ಪ್ರೇರಣಾದಾಯಕವಾಗಲೂ ಬಹುದು ಎಂದು ಹೇಳಿದ್ದಾರೆ.

ಮಹತ್ವದ ಬೋರ್ಡ್ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳೊಂದಿಗೆ ಪ್ರತಿ ವರ್ಷ ಪ್ರಧಾನಿ ಮೋದಿ ಸಂವಾದ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದ್ದಾರೆ. ಈ ಮೂಲಕ ಎಸ್​​ಎಸ್​​​ಎಲ್​ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಸಂವಾದ ನಡೆಸಿ, ಮಕ್ಕಳು ಕೇಳುವ ಪ್ರಶ್ನೆಗಳಿಗೆ ಉತ್ತರಿಸುತ್ತಾರೆ. ಸ್ಪೂರ್ತಿದಾಯಕ ಮಾತುಗಳೊಂದಿಗೆ ಮಕ್ಕಳ ಓದಿನ ಒತ್ತಡ ನಿವಾರಿಸುವ ಕೆಲಸವನ್ನು ನರೇಂದ್ರ ಮೋದಿ ಮಾಡುತ್ತಾ ಬಂದಿದ್ದಾರೆ. ಪರೀಕ್ಷೆಯ ಒತ್ತಡವನ್ನು ಹೇಗೆ ನಿವಾರಿಸಬೇಕು ಎಂಬುದನ್ನು ಸ್ಪೂರ್ತಿದಾಯಕ ಮಾತುಗಳನ್ನು ಹೇಳುತ್ತಾರೆ. ಇತರ ಸಮಸ್ಯೆಗಳಿಗೆ ಸಂಬಂಧಿಸಿದ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಪ್ರಧಾನಿ ಉತ್ತರ ಕೂಡಾ ನೀಡುತ್ತಾರೆ.

ಶಿಕ್ಷಣ ಸಚಿವಾಲಯ ಪರೀಕ್ಷಾ ಪೇ ಚರ್ಚಾದ 7ನೇ ಆವೃತ್ತಿಯ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಿದೆ. 2024 ಜನವರಿ 12 ಕಾರ್ಯಕ್ರಮಕ್ಕೆ ನೋಂದಾಯಿಸಲು ಕೊನೆಯ ದಿನಾಂಕ. ಕಾರ್ಯಕ್ರಮದ ದಿನಾಂಕವನ್ನು ಕೇಂದ್ರ ಶಿಕ್ಷಣ ಸಚಿವಾಲಯ ಶೀಘ್ರದಲ್ಲೇ ಪ್ರಕಟಿಸಲಿದೆ.

ಕಾಶಿ ವಿಶ್ವನಾಥ ಕಾರಿಡಾರ್‌ನ ಎರಡು ವರ್ಷಗಳ ಸಂಭ್ರಮಾಚರಣೆಯ ಬಗ್ಗೆ ಬಂದಿರುವ ಸಾಮಾಜಿಕ ಜಾಲತಾಣದ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, "ಕಾಶಿಯ ಅಭಿವೃದ್ಧಿ ಮುಂದುವರೆದಿದೆ. ಮೂಲಸೌಕರ್ಯ, ಸಂಸ್ಕೃತಿ, ಪ್ರವಾಸೋದ್ಯಮ, ವಾಣಿಜ್ಯ, ನಾವೀನ್ಯತೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಪ್ರಗತಿಯನ್ನ ಸಾಧಿಸಲಾಗುತ್ತಿದೆ ಎಂದು ಹೇಳಿದ್ದಾರೆ. ವಾರಾಣಸಿ ಈಗ ಎಲ್ಲ ರೀತಿಯಿಂದಲೂ ಅಭಿವೃದ್ಧಿ ಪಡಿಸಲಾಗುತ್ತಿದೆ. ಮೋದಿ ಸರ್ಕಾರ ಬಂದ ಮೇಲೆ ಕಾಶಿಯ ಚಹರೆ ಬದಲಾವಣೆ ಕೂಡಾ ಆಗಿದೆ.

ಇದನ್ನು ಓದಿ: ಕೇಂದ್ರ ಗುಪ್ತಚರ ಇಲಾಖೆಯಲ್ಲಿ 995 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.