ನವದೆಹಲಿ: ಕೇಂದ್ರ ಸರ್ಕಾರದ ಮಾಹಿತಿ ತಂತ್ರಜ್ಞಾನ ಇಲಾಖೆಯ ಹೊಸ ನಿಯಮಗಳು ಮತ್ತು ಟ್ವಿಟರ್ ನಡುವೆ ಜಟಾಪಟಿ ಮುಂದುವರೆದಿದ್ದು, ಸಂಸತ್ನ ಸ್ಥಾಯಿ ಸಮಿತಿ ಟ್ವಿಟರ್ಗೆ ಸಮನ್ಸ್ ಜಾರಿ ಮಾಡಿದೆ.
ಜೂನ್ 18ಕ್ಕೆ ಪಾರ್ಲಿಮೆಂಟ್ನ ಸಂಕೀರ್ಣದಲ್ಲಿರುವ ಪ್ಯಾನೆಲ್ ಮುಂದೆ ಹಾಜರಾಗುವಂತೆ ಸೂಚನೆ ನೀಡಿದೆ. ಹೊಸ ಐಟಿ ನಿಯಮಗಳನ್ನು ಎಲ್ಲಾ ಸಾಮಾಜಿಕ ಜಾಲತಾಣಗಳು ಅಳವಡಿಸಿಕೊಳ್ಳಬೇಕೆಂದು ಕೇಂದ್ರ ಸರ್ಕಾರ ಕೆಲವು ದಿನಗಳ ಹಿಂದೆ ಹೇಳಿದ್ದು, ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ಆನ್ಲೈನ್ ನ್ಯೂಸ್ ದುರ್ಬಳಕೆ ಆಗದಂತೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವಿವರಣೆ ನೀಡಬೇಕೆಂದು ಸೂಚನೆ ನೀಡಿದೆ.
ಇದನ್ನೂ ಓದಿ: ಲ್ಯಾಂಡಿಂಗ್ ವೇಳೆ ಇಂಡಿಗೋ ವಿಮಾನದ ಟೈರ್ ಸ್ಫೋಟ; ಅನಾಹುತ ತಪ್ಪಿಸಿದ ಪೈಲೆಟ್
ಸಂಜೆ 4 ಗಂಟೆಯೊಳಗೆ ಟ್ವಿಟರ್ ಪ್ರತಿನಿಧಿ ಸ್ಥಾಯಿ ಸಮಿತಿ ಮುಂದೆ ಹಾಜರಾಗಬೇಕೆಂದು ಸೂಚನೆ ನೀಡಲಾಗಿದ್ದು, ನಾಗರಿಕರ ಹಕ್ಕುಗಳನ್ನು ರಕ್ಷಿಸಲು ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವಿವರಣೆ ನೀಡಬೇಕೆಂದು ಸಮನ್ಸ್ನಲ್ಲಿ ಸೂಚನೆ ನೀಡಿದೆ.
ಕೇಂದ್ರ ಸರ್ಕಾರದ ಐಟಿ ನಿಯಮಗಳನ್ನು ಅಳವಡಿಸಿಕೊಳ್ಳುವುದಾಗಿ ಟ್ವಿಟರ್ ಕೆಲವು ದಿನಗಳ ಹಿಂದೆ ಭರವಸೆ ನೀಡಿತ್ತು. ಸರ್ಕಾರದ ಹೊಸ ಮಾರ್ಗಸೂಚಿಗಳನ್ನು ಅನುಸರಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಕಂಪನಿಯ ವಕ್ತಾರರು ತಿಳಿಸಿದ್ದರು.