ನವದೆಹಲಿ: ಭಾರತ ಮತ್ತು ಚೀನಾ ಪಡೆಗಳ ನಡುವೆ ಹಿಂಸಾತ್ಮಕ ಘರ್ಷಣೆಗೆ ಸಾಕ್ಷಿಯಾಗಿರುವ ಪೂರ್ವ ಲಡಾಖ್ನ ಗಾಲ್ವಾನ್ ಕಣಿವೆ ಮತ್ತು ಪ್ಯಾಂಗಾಂಗ್ ಸರೋವರಕ್ಕೆ ಭೇಟಿ ನೀಡಲು ರಕ್ಷಣಾ ಸಂಸದೀಯ ಸ್ಥಾಯಿ ಸಮಿತಿ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿಯ ಹಿರಿಯ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಜುವಾಲ್ ಓರಮ್ ಅಧ್ಯಕ್ಷರಾಗಿರುವ ಮತ್ತು ರಾಹುಲ್ ಗಾಂಧಿ ಸದಸ್ಯರಾಗಿರುವ 30 ಸದಸ್ಯರ ಸಮಿತಿಯು ಮೇ ಕೊನೆಯ ವಾರದಲ್ಲಿ ಅಥವಾ ಜೂನ್‌ನಲ್ಲಿ ಪೂರ್ವ ಲಡಾಖ್ ಪ್ರದೇಶಕ್ಕೆ ಭೇಟಿ ನೀಡಲಿದೆ.
ಈ ಪ್ರದೇಶಗಳಿಗೆ ಭೇಟಿ ನೀಡುವ ನಿರ್ಧಾರವನ್ನು ಸಭೆಯಲ್ಲಿ ತೆಗೆದುಕೊಳ್ಳಲಾಗಿದ್ದು, ಸರ್ಕಾರದ ಅನುಮೋದನೆ ಇನ್ನಷ್ಟೇ ಲಭಿಸಬೇಕಿದೆ.
ಹಿಂಸಾತ್ಮಕ ಘರ್ಷಣೆಯ ಒಂಬತ್ತು ತಿಂಗಳ ಬಳಿಕ, ಉಭಯ ದೇಶಗಳ ಸೇನೆಗಳು ಪ್ಯಾಂಗಾಂಗ್ ಸರೋವರದ ಉತ್ತರ ಮತ್ತು ದಕ್ಷಿಣದ ತೀರಗಳಲ್ಲಿ ಸೇನೆ ನಿಷ್ಕ್ರಿಯಗೊಳಿಸುವ ಒಪ್ಪಂದಕ್ಕೆ ಬಂದಿವೆ.