ಬಾಲಸೋರ್(ಒಡಿಶಾ): ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್ವೊಂದು ಟ್ರಕ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಪರಿಣಾಮ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 20 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಾಲಸೋರ್ ಜಿಲ್ಲೆಯ ಸೊರೊ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ.
ಪ್ರಯಾಣಿಕರಿದ್ದ ಬಸ್ವೊಂದು ಒಡಿಶಾದ ಉಡಾಲಾದಿಂದ ಭುವನೇಶ್ವರಕ್ಕೆ ತೆರಳುತ್ತಿತ್ತು. ಈ ವೇಳೆ, ಸೊರೊ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಟ್ರಕ್ಗೆ ಡಿಕ್ಕಿ ಹೊಡೆದು, ಪಲ್ಟಿಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದ್ದು, ಗಾಯಗೊಂಡವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿರಿ: ನೂತನ ಬಸ್ ಸಂಚಾರಕ್ಕೆ ಚಾಲನೆ ನೀಡಿ, ಡ್ರೈವರ್ ಆದ ಡಿಎಂಕೆ ಶಾಸಕ!
ಅಪಘಾತದಲ್ಲಿ ಒಂದು ವರ್ಷದ ಮಗು ಸಹ ಸಾವನ್ನಪ್ಪಿದ್ದು, ಪ್ರಾಥಮಿಕ ಮಾಹಿತಿ ಪ್ರಕಾರ 20 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ