ನವದೆಹಲಿ : ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ ಆಕಸ್ಮಿಕವಾಗಿ ಮೊಬೈಲ್ನಲ್ಲಿ ಬೆಂಕಿ ಕಾಣಿಸಿಕೊಂಡು ಸ್ವಲ್ಪ ಸಮಯದವರೆಗೆ ಗೊಂದಲ ಸೃಷ್ಟಿಯಾಗಿರುವ ಘಟನೆ ನಡೆದಿದೆ. ಗುರುವಾರ ದಿಬ್ರುಗಢದಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಈ ಘಟನೆ ನಡೆದಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಎಚ್ಚೆತ್ತ ಕ್ಯಾಬಿನ್ ಸಿಬ್ಬಂದಿ ವಿಮಾನದಲ್ಲಿನ ಅಗ್ನಿಶಾಮಕ ಯಂತ್ರದ ಮೂಲಕ ಅದನ್ನು ನಂದಿಸಿದ್ದಾರೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಅಧಿಕಾರಿಗಳು ತಿಳಿಸಿದ್ದಾರೆ.
ಫ್ಲೈಟ್ 6E 2037 ವಿಮಾನದಲ್ಲಿ ಕ್ಯಾಬಿನ್ ಸಿಬ್ಬಂದಿಯೊಬ್ಬರು ಪ್ರಯಾಣಿಕರ ಫೋನ್ಗೆ ಬೆಂಕಿ ಹೊತ್ತಿಕೊಂಡಿರುವುದನ್ನು ಕಂಡಿದ್ದು, ನಂತರ ಅಗ್ನಿಶಾಮಕ ಯಂತ್ರವನ್ನು ಬಳಸಿ ಬೆಂಕಿ ನಂದಿಸಲಾಗಿದೆ. ನಂತರ ಯಾವುದೇ ಅಪಾಯವಿಲ್ಲದೇ ಗುರುವಾರ ಮಧ್ಯಾಹ್ನ 12.45ರ ಸುಮಾರಿಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಂಡಿಗೋ ಫ್ಲೈಟ್ ಇಳಿಯಿತು.
ಸಿಬ್ಬಂದಿಗೆ ಇಂತಹ ಅಪಾಯಕಾರಿ ಘಟನೆಗಳನ್ನು ನಿರ್ವಹಿಸಲು ತರಬೇತಿ ನೀಡಲಾಗಿದೆ. ಅವರು ಪರಿಸ್ಥಿತಿಯನ್ನು ತ್ವರಿತವಾಗಿ ನಿರ್ವಹಿಸಿದ್ದಾರೆ. ಯಾವುದೇ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಮೆಟ್ರೋ ನಿಲ್ದಾಣದ ಮೇಲಿಂದ ಜಿಗಿದ ಯುವತಿ ಸಾವು.. ಯೋಧರ ರಕ್ಷಣಾ ಕಾರ್ಯ ವಿಫಲ!