ETV Bharat / bharat

ಪೆಗಾಸಸ್‌ ಗೂಢಚರ್ಯೆ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಗಂಭೀರ ವಿಚಾರ: ಶಶಿ ತರೂರ್‌

ಪೆಗಾಸಸ್ ದತ್ತಾಂಶವನ್ನು ಸರ್ಕಾರಗಳಿಗೆ ಮಾತ್ರ ಮಾರಾಟ ಮಾಡಲಾಗುತ್ತದೆ. ನಾವಿದನ್ನು ಮಾಡಿಲ್ಲ ಎಂದು ಸರ್ಕಾರ ಹೇಳಿದರೆ ರಾಷ್ಟ್ರೀಯ ಭದ್ರತೆಯ ವಿಷಯದಲ್ಲಿ ಮತ್ತಷ್ಟು ಗಂಭೀರವಾಗಲಿದೆ. ಈ ಬಗ್ಗೆ ಸರ್ಕಾರ ವಿವರಣೆ ನೀಡಬೇಕು ಎಂದು ಸಂಸದ ಶಶಿ ತರೂರ್‌ ಒತ್ತಾಯಿಸಿದ್ದಾರೆ.

Pegasus Project is serious national security concern, govt needs to explain says Tharoor
ಗಾಸಸ್‌ ಪ್ರಾಜೆಕ್ಟ್‌; ರಾಷ್ಟ್ರೀಯ ಭದ್ರತೆ ಸಂಬಂಧ ಗಂಭೀರ ವಿಚಾರ: ಶಶಿ ತರೂರ್‌
author img

By

Published : Jul 20, 2021, 6:45 PM IST

ನವದೆಹಲಿ: ಪೆಗಾಸಸ್‌ ಸ್ಪೈವೇರ್ ಮೂಲಕ ಗೂಢಚರ್ಯೆ ದೇಶದ ಭದ್ರತೆಗೆ ಸಂಬಂಧಿಸಿದ ಅತ್ಯಂತ ಗಂಭೀರವಾದ ವಿಚಾರವಾಗಿದೆ. ಈ ಬಗ್ಗೆ ಸರ್ಕಾರ ವಿವರಣೆ ನೀಡಬೇಕು ಎಂದು ಕಾಂಗ್ರೆಸ್‌ ಸಂಸದ ಶಶಿ ತರೂರ್‌ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಭಾರತದಲ್ಲಿ ಫೋನ್‌ಗಳನ್ನು ಪರೀಕ್ಷಿಸಿರುವುದು ಪೆಗಾಸಸ್‌ನ ಆಕ್ರಮಣ ನೀತಿ ಎಂಬುದು ಸಾಬೀತಾಗಿದೆ. ಈ ಡೇಟಾವನ್ನು ಸರ್ಕಾರಗಳಿಗೆ ಮಾತ್ರ ಮಾರಾಟ ಮಾಡಲಾಗುತ್ತದೆ. ಆದ್ರೆ ಯಾವ ಸರ್ಕಾರಗಳಿಗೆ ನೀಡಲಾಗಿತ್ತು ಎಂಬ ಪ್ರಶ್ನೆ ಉದ್ಭವಿಸುತ್ತದೆ. ನಾವು ಇದನ್ನು ಮಾಡಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದರೆ ಇದು ರಾಷ್ಟ್ರೀಯ ಭದ್ರತೆಯ ವಿಷಯದಲ್ಲಿ ಮತ್ತಷ್ಟು ಗಂಭೀರವಾಗಲಿದೆ ಎಂದು ತರೂರ್‌ ಹೇಳಿದ್ದಾರೆ.

ಈ ರೀತಿ ಸರ್ಕಾರಕ್ಕೆ ಮಾಡಲು ಅಧಿಕಾರ ಇದೆಯೇ, ರಾಷ್ಟ್ರೀಯ ಭದ್ರತೆ ಮತ್ತು ಭಯೋತ್ಪಾದನೆಯ ವಿಷಯಗಳಿಗೆ ಸಂವಹನದ ಪ್ರತಿಬಂಧವನ್ನು ಕಾನೂನು ಮಾತ್ರ ಅನುಮತಿಸುವುದರಿಂದ ಸರ್ಕಾರ ಈ ಬಗ್ಗೆ ವಿವರಣೆ ನೀಡಬೇಕಾಗಿದೆ. ಇಲ್ಲದಿದ್ದರೆ ಅದು ಕಾನೂನುಬಾಹಿರವಾಗಿದೆ. ತನಿಖೆಯಲ್ಲಿ ಸರ್ಕಾರ ಸಹಕರಿಸುವುದು ಅತ್ಯಗತ್ಯ ಎಂದಿದ್ದಾರೆ.

ಇದನ್ನೂ ಓದಿ: 2019ರಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಸರ್ಕಾರ ಪತನದಲ್ಲಿ 'ಪೆಗಾಸಸ್‌ ಕಣ್ಗಾವಲು' ಮಹತ್ವದ ಪಾತ್ರ!?

ಪೆಗಾಸಸ್ ಸ್ಪೈವೇರ್ ಬಳಸುವ ಅಪರಿಚಿತ ಏಜೆನ್ಸಿಯ ಕಣ್ಗಾವಲು ಸಂಭಾವ್ಯ ಗುರಿಗಳ ಪಟ್ಟಿಯಲ್ಲಿ 40 ಕ್ಕೂ ಹೆಚ್ಚು ಭಾರತೀಯ ಪತ್ರಕರ್ತರ ಹೆಸರುಗಳು ಕಾಣಿಸಿಕೊಂಡ ನಂತರ ಈ ಬೆಳವಣಿಗೆ ಕಂಡುಬಂದಿದೆ ಎಂದು ದಿ ವೈರ್‌ ಭಾನುವಾರ ಪ್ರಕಟವಾದ ವರದಿಯಲ್ಲಿ ತಿಳಿಸಲಾಗಿದೆ.

ವರದಿಯ ಪ್ರಕಾರ, ಹಿಂದೂಸ್ತಾನ್ ಟೈಮ್ಸ್, ದಿ ಹಿಂದೂ, ಇಂಡಿಯಾ ಟುಡೇ, ಇಂಡಿಯನ್ ಎಕ್ಸ್‌ಪ್ರೆಸ್ ಮತ್ತು ನೆಟ್‌ವರ್ಕ್ 18 ಸೇರಿದಂತೆ ದೇಶದ ಕೆಲವು ಸುದ್ದಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಪತ್ರಕರ್ತರನ್ನು ಗುರಿಯಾಗಿಸಲಾಗಿದೆ. ಇದರಲ್ಲಿ ರಕ್ಷಣಾ, ಗೃಹ ಸಚಿವಾಲಯ, ಚುನಾವಣಾ ಆಯೋಗ ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ವಿಷಯಗಳನ್ನು ಒಳಗೊಂಡಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.