ETV Bharat / bharat

ಪೊಲೀಸ್​ ಕಾನ್ಸ್​ಟೇಬಲ್​ಗೆ ಹಿಗ್ಗಾ ಮುಗ್ಗಾ ಥಳಿಸಿದ ಗ್ರಾಮಸ್ಥರು! ವಿಡಿಯೋ...

ಪೊಲೀಸ್​ ಕಾನ್ಸ್​ಟೇಬಲ್​ನನ್ನು ಹಿಡಿದು ಹಿಗ್ಗಾ-ಮುಗ್ಗಾ ಥಳಿಸಿರುವ ಘಟನೆ ರಾಜಸ್ಥಾನದ ಚುರು ಗ್ರಾಮದಲ್ಲಿ ನಡೆದಿದೆ.

people beaten police constable  police constable  churu news  rajasthan news  police constable video viral  ಪೊಲೀಸ್​ ಕಾನ್ಸ್​ಟೇಬಲ್​ಗೆ ಹಿಗ್ಗಾ ಮುಗ್ಗಾ ಥಳಿಸಿದ ಗ್ರಾಮಸ್ಥರು  ರಾಜಸ್ಥಾನದಲ್ಲಿ ಪೊಲೀಸ್​ ಕಾನ್ಸ್​ಟೇಬಲ್​ಗೆ ಹಿಗ್ಗಾ ಮುಗ್ಗಾ ಥಳಿಸಿದ ಗ್ರಾಮಸ್ಥರು  ಪೊಲೀಸ್​ ಕಾನ್ಸ್​ಟೇಬಲ್​ಗೆ ಹಿಗ್ಗಾ ಮುಗ್ಗಾ ಥಳಿಸಿದ ಗ್ರಾಮಸ್ಥರು ಸುದ್ದಿ
ಪೊಲೀಸ್​ ಕಾನ್ಸ್​ಟೇಬಲ್​ಗೆ ಹಿಗ್ಗಾ ಮುಗ್ಗಾ ಥಳಿಸಿದ ಗ್ರಾಮಸ್ಥರು
author img

By

Published : Mar 20, 2021, 10:32 AM IST

ಚುರು: ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಘಟನೆಯೊಂದು ರಾಜಸ್ಥಾನದಲ್ಲಿ ನಡೆದಿದೆ. ಗ್ರಾಮಸ್ಥರು ಕಾನ್ಸ್​ಟೇಬಲ್ ಒಬ್ಬರನ್ನು ಹಗ್ಗದಿಂದ ಕಂಬಕ್ಕೆ ಕಟ್ಟಿ ತೀವ್ರವಾಗಿ ಥಳಿಸಿದ ಘಟನೆ ಇಲ್ಲಿನ ಕನುಟಾ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.

ಕುಡಿದ ಮತ್ತಿನಲ್ಲಿ ಕಾನ್ಸ್​ಟೇಬಲ್​ ಮನೆಯೊಂದಕ್ಕೆ ನುಗ್ಗಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿದ ಗ್ರಾಮದ ಜನರು ಕುಡಿದ ಮತ್ತಿನಲ್ಲಿದ್ದ ಕಾನ್ಸ್​ಟೇಬಲ್​ನನ್ನು ಹಿಡಿದು ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾ-ಮುಗ್ಗಾ ಥಳಿಸಿದ್ದಾರೆ.

ಪೊಲೀಸ್​ ಕಾನ್ಸ್​ಟೇಬಲ್​ಗೆ ಹಿಗ್ಗಾ ಮುಗ್ಗಾ ಥಳಿಸಿದ ಗ್ರಾಮಸ್ಥರು

ಈ ಸುದ್ದಿ ತಿಳಿದ ಕೂಡಲೇ ಸಾಂಡ್ವಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಕಾನ್ಸ್​ಟೇಬಲ್​ನನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿದರು. ಯಾವುದೋ ದುರುದ್ದೇಶದಿಂದ ಕಾನ್ಸ್​ಟೇಬಲ್ ರಾತ್ರಿ ಕುಡಿದು ಮನೆಯೊಂದಕ್ಕೆ ನುಗ್ಗಿ ಅಸಭ್ಯವಾಗಿ ವರ್ತಿಸಿದ ಹಿನ್ನೆಲೆ ಥಳಿಸಲಾಗಿದೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ.

"ಗ್ರಾಮದಲ್ಲಿ ಜಗಳ ನಡೆಯುತ್ತಿದೆ ಎಂದು ನನಗೆ ಫೋನ್​ ಬಂದ ಹಿನ್ನೆಲೆ ನಾನು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದೆ." ಎಂದು ಕಾನ್ಸ್​ಟೇಬಲ್​ ಹೇಳಿದ್ದಾರೆ. ಆರೋಪ ಮತ್ತು ಪ್ರತ್ಯಾರೋಪ ಆಲಿಸಿದ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಥಳಿಸುತ್ತಿರುವ ವಿಡಿಯೋ ವೈರಲ್​ ಆಗ್ತಿದ್ದಂತೆ ಕಾನ್ಸ್​ಟೇಬಲ್​ನನ್ನು ಚುರು ಎಸ್​ಪಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.