ರೂಪನಗರ(ಪಂಜಾಬ್): ವಿವಿಧ ಬೇಡಿಕೆ ಈಡೇರಿಕೆ ಮಾಡುವಂತೆ ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ ನಿವಾಸದ ಎದುರು ಪ್ರತಿಭಟನೆ ನಡೆಯುತ್ತಿದ್ದ ವೇಳೆ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿದ್ದು, ಈ ವೇಳೆ ಹಲವು ಪೊಲೀಸರು ಗಾಯಗೊಂಡಿದ್ದಾರೆ.
ಪಂಜಾಬ್ನ ಮೊರಿಂಡಾದಲ್ಲಿರುವ ಸಿಎಂ ಖಾಸಗಿ ನಿವಾಸದ ಎದುರು ವಿವಿಧ ಸಂಘಟನೆಯ ಪ್ರತಿಭಟನಾಕಾರರು ಧರಣಿ ನಡೆಸುತ್ತಿದ್ದರು. ಈ ವೇಳೆ, ವಾತಾವರಣ ಹದಗೆಟ್ಟ ಕಾರಣ, ಕೆಲವರು ಬ್ಯಾರಿಕೇಡ್ ಹಿಂದಕ್ಕೆ ತಳ್ಳಲು ಯತ್ನಿಸಿದ್ದು, ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ. ಈ ವೇಳೆ, ಪ್ರತಿಭಟನಾಕಾರರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾಗಿ ತಿಳಿದು ಬಂದಿದೆ.
ಇದನ್ನೂ ಓದಿರಿ: ಅಫ್ಘಾನಿಸ್ತಾನ ಭಯೋತ್ಪಾದನೆಯ ಮೂಲವಾಗುವುದನ್ನ ತಡೆಯಿರಿ: ಜಿ-20 ಶೃಂಗಸಭೆಯಲ್ಲಿ ನಮೋ
ಕೆಲ ನಿಮಿಷಗಳ ಕಾಲ ಪ್ರತಿಭಟನಾ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ಕೆಲ ಪೊಲೀಸರು ಹಲ್ಲೆಗೊಳಗಾಗಿದ್ದಾಗಿ ತಿಳಿದು ಬಂದಿದೆ.