ಉತ್ತರಾಖಂಡ್ (ಡೆಹ್ರಾಡೂನ್): ಡೆಹ್ರಾಡೂನ್‌ನ ಚಂದ್ರಬಾನಿ ಚಿಯೋಲಾ ಪ್ರದೇಶದಲ್ಲಿ ಬುಧವಾರ ಸಂಜೆಯಿಂದ ನಿರಂತರವಾಗಿ ಮಳೆಯಾಗುತ್ತಿದೆ. ಪರಿಣಾಮ ಇಲ್ಲಿನ ರಸ್ತೆಗಳು ನದಿಗಳಾಗಿ ಮಾರ್ಪಟ್ಟಿದ್ದು, ನೀರಿನ ರಭಸಕ್ಕೆ ಹಸುವೊಂದು ಕೊಚ್ಚಿಕೊಂಡು ಹೋಗಿದೆ.
ಚಂದ್ರಬಾನಿ ಸಾಹಸಪುರ ವಿಧಾನಸಭೆಯ ಮುಖ್ಯರಸ್ತೆಯಲ್ಲಿ ಭಾರಿ ಮಳೆಗೆ ಪ್ರವಾಹದಂತಹ ಪರಿಸ್ಥಿತಿ ಉಂಟಾಗಿದೆ. ಬಲವಾದ ಪ್ರವಾಹದ ಹೊಡೆತದಿಂದ ವ್ಯಕ್ತಿಯೊಬ್ಬರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಡೆಹ್ರಾಡೂನ್‌ನಲ್ಲಿ ಮಳೆ ಮತ್ತು ಜಲಾವೃತದಿಂದಾಗಿ ಜನರ ಸಮಸ್ಯೆಗಳು ಹೆಚ್ಚಿವೆ. ಈ ಬಗ್ಗೆ ಪುರಸಭಾ ಸದಸ್ಯ ಸುಖಬೀರ್ ಬುಟೋಲಾ ಮಾತನಾಡಿ, ಪ್ರತಿ ಮಳೆಗಾಲದಲ್ಲಿ ಈ ರಸ್ತೆಯಲ್ಲಿ ಪ್ರವಾಹದ ಪರಿಸ್ಥಿತಿ ಇದೆ. ಇದರಿಂದಾಗಿ ಜನರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಚಲಿಸಬೇಕಾದ ಅನಿವಾರ್ಯತೆ ಇದೆ ಎಂದಿದ್ದಾರೆ.
ಓದಿ: ಗಂಗೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಭೂ ಕುಸಿತ.. ರಸ್ತೆಯಲ್ಲಿ ಸಿಲುಕಿದ 1500 ಪ್ರಯಾಣಿಕರು