ETV Bharat / bharat

ವಿವಾದಿತ ಹೇಳಿಕೆ.. ರಾಜಾಸಿಂಗ್​ ವಿರುದ್ಧ ರಾತ್ರೋರಾತ್ರಿ ಪ್ರತಿಭಟನೆ - ಶಾಸಕರ ವಿರುದ್ಧ ಆಕ್ರೋಶ

ಮದೀನಾ, ಅಫ್ಜಲ್‌ಗಂಜ್, ಚಾರ್ಮಿನಾರ್ ಭಾಗದಲ್ಲಿ ಅನೇಕ ಜನರು ಗುಂಪು ಗುಂಪಾಗಿ ಜಮಾಯಿಸಿ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ತಮ್ಮ ವಾಹನಗಳನ್ನು ನಿಲ್ಲಿಸಿ ಘೋಷಣೆಗಳನ್ನು ಕೂಗಿದರು.

ರಾಜಾಸಿಂಗ್​ ವಿರುದ್ಧ ರಾತ್ರೋರಾತ್ರಿ ಪ್ರತಿಭಟನೆ

author img

By

Published : Aug 24, 2022, 9:16 AM IST

ಹೈದರಾಬಾದ್: ಹಳೆ ನಗರದಲ್ಲಿ ಮಧ್ಯರಾತ್ರಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಮಧ್ಯರಾತ್ರಿ ಹಳೆ ನಗರದಲ್ಲಿ ಯುವಕರು ರಸ್ತೆಗಿಳಿದು ರಾಜಾ ಸಿಂಗ್ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಿದರು. ಚಾರ್ಮಿನಾರ್, ಮದೀನಾ, ಚಂದ್ರಯ್ಯನಗುಟ್ಟ, ಬರ್ಕಾಸ್​​ಗಳಲ್ಲಿ ನೂರಾರು ಜನರು ಜಮಾಯಿಸಿ ರಾಜಾ ಸಿಂಗ್ ವಿರುದ್ಧ ಘೋಷಣೆಗಳನ್ನು ಕೂಗಿದರು.

ಉದ್ರಿಕ್ತರು ಕಪ್ಪು ಬಾವುಟ ಹಿಡಿದು ಪ್ರತಿಭಟನೆ ನಡೆಸಿದರು. ಮದೀನಾ, ಅಫ್ಜಲ್‌ಗಂಜ್, ಚಾರ್ಮಿನಾರ್ ಭಾಗದಲ್ಲಿ ಅನೇಕ ಜನರು ಗುಂಪು ಗುಂಪಾಗಿ ಜಮಾಯಿಸಿ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ತಮ್ಮ ವಾಹನಗಳನ್ನು ನಿಲ್ಲಿಸಿ ಘೋಷಣೆಗಳನ್ನು ಕೂಗಿದರು. ಕಪ್ಪು ಬಾವುಟ ಹಿಡಿದು ಪ್ರತಿಭಟನಾ ರ‍್ಯಾಲಿ ನಡೆಸಲಾಯಿತು. ಬಿಗಿ ಬಂದೋಬಸ್ತ್ ಮಾಡಿರುವ ಪೊಲೀಸರು ಪ್ರತಿಭಟನಾಕಾರರು ಹಿಂಸಾಚಾರ ನಡೆಸದಂತೆ ಕ್ರಮ ಕೈಗೊಂಡಿದ್ದಾರೆ.

ಬೆಳಗಿನ ಜಾವ 4 ಗಂಟೆಯವರೆಗೂ ಪ್ರತಿಭಟನಾಕಾರರು ಧರಣಿ ನಡೆಸಿದರು. ಮತ್ತೊಂದೆಡೆ, ಬಿಜೆಪಿ ಶಾಸಕ ರಾಜಾ ಸಿಂಗ್ ಅವರ ನಿವಾಸಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಅವರ ಮನೆಯತ್ತ ಬೇರೆಯವರು ಬರದಂತೆ ಬ್ಯಾರಿಕೇಡ್‌ಗಳನ್ನು ಕೂಡಾ ಹಾಕಲಾಗಿತ್ತು.

ರಾಜಾಸಿಂಗ್​ಗೆ ಜಾಮೀನು: ಪ್ರವಾದಿ ಮೊಹಮ್ಮದ್​​​ ಪೈಗಂಬರ್‌ ಕುರಿತಾಗಿ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ಬಂಧನವಾಗಿರುವ ಬಿಜೆಪಿ ಶಾಸಕ ಟಿ. ರಾಜಾ ಸಿಂಗ್​ ಕೋರ್ಟ್​ನಿಂದ ಜಾಮೀನು ಪಡೆದುಕೊಂಡು ಹೊರಬಂದಿದ್ದಾರೆ. ಇಂದು ಬೆಳಗ್ಗೆ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಅವರನ್ನ ನಾಂಪಲ್ಲಿ ನ್ಯಾಯಾಲಯಕ್ಕೆ ಕರೆದುಕೊಂಡು ಹೋಗಲಾಗಿತ್ತು. ಈ ವೇಳೆ ವಿಚಾರಣೆ ನಡೆಸಿದ ಕೋರ್ಟ್​, ಯಾವುದೇ ಷರತ್ತುಗಳಿಲ್ಲದೆ ಕೇವಲ 45 ನಿಮಿಷಗಳಲ್ಲಿ ಜಾಮೀನು ಮಂಜೂರು ಮಾಡಿದೆ. ಜೊತೆಗೆ ತಕ್ಷಣವೇ ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಿದೆ.

ತೆಲಂಗಾಣದ ಗೋಶಾಮಹಲ್‌ನ ಶಾಸಕ ರಾಜಾ ಸಿಂಗ್​ ರಿಲೀಸ್ ಮಾಡಿದ್ದ ವಿಡಿಯೋದಲ್ಲಿ ಪ್ರವಾದಿ ಮೊಹಮ್ಮದ್​​​ ಅವರ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದರು. ಇದು ಹೆಚ್ಚಿನ ವಿರೋಧಕ್ಕೆ ಕಾರಣವಾಗುತ್ತಿದ್ದಂತೆ ತಮಾಷೆಗಾಗಿ ಈ ರೀತಿ ಮಾಡಿರುವುದಾಗಿ ಹೇಳಿದ್ದರು. ಇದಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆದಿತ್ತು. ಜೊತೆಗೆ ಪ್ರಕರಣ ಕೂಡ ದಾಖಲಾಗಿತ್ತು.

ಬಿಜೆಪಿ ಶಾಸಕ ರಾಜಾ ಸಿಂಗ್‌ ವಿರುದ್ಧ ಐಪಿಸಿಯ 295 (ಎ), 153 (ಎ) ಸೇರಿದಂತೆ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಡಬೀರ್‌ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನು ಓದಿ:ಬಿಜೆಪಿ ಶಾಸಕ ರಾಜಾ ಸಿಂಗ್​ಗೆ ಷರತ್ತುಗಳಿಲ್ಲದೆ 45 ನಿಮಿಷದಲ್ಲೇ ಸಿಕ್ತು ಜಾಮೀನು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.