ETV Bharat / bharat

ನೂಪುರ್ ಶರ್ಮಾಗೆ ಸುಪ್ರೀಂ ಛೀಮಾರಿ: ಸಾಮಾಜಿಕ ಮಾಧ್ಯಮಗಳಿಗೆ ಲಗಾಮು ಹಾಕುವಂತೆ ನ್ಯಾಯಮೂರ್ತಿ ಸಲಹೆ

ತನ್ನ ವಿರುದ್ಧ ದೇಶಾದ್ಯಂತ ದಾಖಲಾಗಿರುವ ಎಲ್ಲ ಪ್ರಥಮ ಮಾಹಿತಿ ವರದಿಗಳನ್ನು ಒಟ್ಟುಗೂಡಿಸಿ ದೆಹಲಿಗೆ ವರ್ಗಾಯಿಸಬೇಕು ಎಂದು ನೂಪುರ್ ಶರ್ಮಾ ಸುಪ್ರೀಂ ಕೋರ್ಟ್‌ನ ಮೊರೆ ಹೋಗಿದ್ದರು. ಈ ವೇಳೆ ನ್ಯಾಯಮೂರ್ತಿಗಳು ಇವರನ್ನು ತರಾಟೆಗೆ ತೆಗೆದುಕೊಂಡಿದ್ದಕ್ಕೆ ಒಂದು ವರ್ಗ ಈಗ ಸುಪ್ರೀಂ ಪೀಠದ ವಿರುದ್ಧವೇ ಆಕ್ರೋಶ ಹೊರಹಾಕುತ್ತಿದೆ.

ನೂಪುರ್ ಶರ್ಮಾಗೆ ನ್ಯಾಯಾಲಯದಿಂದ ಛೀಮಾರಿ
ನೂಪುರ್ ಶರ್ಮಾಗೆ ನ್ಯಾಯಾಲಯದಿಂದ ಛೀಮಾರಿ
author img

By

Published : Jul 3, 2022, 7:16 PM IST

ನವದೆಹಲಿ: ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಹೇಳಿಕೆಗಾಗಿ ಬಿಜೆಪಿಯ ನೂಪುರ್ ಶರ್ಮಾ ಅವರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ ಪೀಠದ ಭಾಗವಾಗಿದ್ದ ನ್ಯಾಯಮೂರ್ತಿಗಳು ಇಂದು ತಮ್ಮ ತೀರ್ಪುಗಳಿಗಾಗಿ ವೈಯಕ್ತಿಕ ದಾಳಿ ಎದುರಿಸುತ್ತಿದ್ದಾರೆ. ಈ ಬಗ್ಗೆ ಬೇಸರ ಹೊರಹಾಕಿರುವ ನ್ಯಾಯಮೂರ್ತಿ ಜೆ ಬಿ ಪರ್ದಿವಾಲಾ 'ತೀರ್ಪುಗಳಿಗಾಗಿ ನ್ಯಾಯಮೂರ್ತಿಗಳ ಮೇಲೆ ವೈಯಕ್ತಿಕ ದಾಳಿಗಳು ಅಪಾಯಕಾರಿ ಸನ್ನಿವೇಶಕ್ಕೆ ಕಾರಣವಾಗುತ್ತವೆ' ಎಂದಿದ್ದಾರೆ.

ನೂಪುರ್ ಶರ್ಮಾ ಅವರ ಅರ್ಜಿಯ ವಿಚಾರಣೆ ವೇಳೆ ಶರ್ಮಾ ವಿರುದ್ಧ ಮಾತನಾಡಿದ್ದ ನ್ಯಾಯಮೂರ್ತಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಸೂರ್ಯ ಕಾಂತ್ ಇಬ್ಬರೂ ಸಹ ನೆಟ್ಟಿಗರಿಂದ ತೀವ್ರ ಟೀಕೆ ಎದುರಿಸುತ್ತಿದ್ದಾರೆ.

ತನ್ನ ವಿರುದ್ಧ ದೇಶಾದ್ಯಂತ ದಾಖಲಾಗಿರುವ ಎಲ್ಲ ಪ್ರಥಮ ಮಾಹಿತಿ ವರದಿಗಳನ್ನು ಒಟ್ಟುಗೂಡಿಸಿ ದೆಹಲಿಗೆ ವರ್ಗಾಯಿಸಬೇಕು ಎಂದು ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಸುಪ್ರೀಂ ಕೋರ್ಟ್‌ನ ಮೊರೆ ಹೋಗಿದ್ದರು. ತಮ್ಮ ಅರ್ಜಿಯಲ್ಲಿ, ತಾವು ಮತ್ತು ತಮ್ಮ ಕುಟುಂಬವು ಬೆದರಿಕೆಗಳನ್ನು ಎದುರಿಸುತ್ತಿದೆ ಮತ್ತು ರಕ್ಷಣೆಯ ಅಗತ್ಯವಿದೆ ಎಂದು ಮನವಿ ಮಾಡಿದ್ದರು.

  • Personal attacks on judges for their judgements lead to a dangerous scenario where judges have to think about what the media thinks instead of what the law really thinks: Supreme Court judge Justice JB Pardiwala who heard Nupur Sharma's plea https://t.co/zdqgTxhcxa pic.twitter.com/W9f1z2Ngdu

    — ANI (@ANI) July 3, 2022 " class="align-text-top noRightClick twitterSection" data=" ">

ಈ ವಿಚಾರಣೆ ವೇಳೆ ನೂಪುರ್ ಶರ್ಮಾ ಅವರನ್ನು ಏಕೆ ಬಂಧಿಸಲಿಲ್ಲ ಮತ್ತು ದೇಶಾದ್ಯಂತ ಜನರ ಧಾರ್ಮಿಕ ಭಾವನೆಗಳನ್ನು ಕೆರಳಿಸಿದ್ದು ಅವರನ್ನು ಹೊಣೆಗಾರರನ್ನಾಗಿ ಯಾಕೆ ಮಾಡಲಿಲ್ಲ ಎಂದು ನ್ಯಾಯಮೂರ್ತಿಗಳು ಪ್ರಶ್ನಿಸಿದ್ದರು. ಅಲ್ಲದೆ, ನೂಪುರ್​ ಶರ್ಮಾ ಅವರು ದೇಶದ ಜನರಲ್ಲಿ ಕ್ಷಮೆಯಾಚಿಸುವಂತೆ ತರಾಟೆಗೆ ತೆಗೆದುಕೊಂಡಿದ್ದರು.

ಈ ಎಲ್ಲಾ ಘಟನೆ ಹಿನ್ನೆಲೆ ನ್ಯಾಯಮೂರ್ತಿ ಪರ್ದಿವಾಲಾ ಅವರು ಇಂದು ಸಮಾರಂಭವೊಂದರಲ್ಲಿ ಭಾಷಣ ಮಾಡಿದ್ದು, ಸಾಮಾಜಿಕ ಜಾಲತಾಣಗಳಿಗೆ ಕಡಿವಾಣ ಹಾಕಲು ಕಾನೂನು ರೂಪಿಸುವಂತೆ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿನ ವೈಯಕ್ತಿಕ ದಾಳಿಗೆ ಸಂಬಂಧಿಸಿದಂತೆ, ಅರ್ಧ ಸತ್ಯಗಳು, ಅಪೂರ್ಣ ಮಾಹಿತಿ ಹೊಂದಿರುವ ಜನರು ಹಾಗೂ ಕಾನೂನು, ಸಾಕ್ಷ್ಯಗಳು, ನ್ಯಾಯಾಂಗ ಪ್ರಕ್ರಿಯೆ ಮತ್ತು ಅದರ ಗಡಿಗಳನ್ನು ಅರ್ಥಮಾಡಿಕೊಳ್ಳದ ಜನರು ಪ್ರಾಬಲ್ಯ ಹೊಂದಿದ್ದಾರೆ ಎಂದು ಹೇಳಿದರು.

ಸಾಮಾಜಿಕ ಜಾಲತಾಣಗಳನ್ನು ನಿಯಂತ್ರಿಸುವ ಕುರಿತು ಸರ್ಕಾರ ಚಿಂತನೆ ನಡೆಸಬೇಕು. ಸೂಕ್ಷ್ಮ ಪ್ರಕರಣಗಳಲ್ಲಿ ಸಾಮಾಜಿಕ ಮಾಧ್ಯಮಗಳ ವಿಚಾರಣೆಯು ನ್ಯಾಯಾಂಗ ಪ್ರಕ್ರಿಯೆಯಲ್ಲಿ ಅನಗತ್ಯ ಹಸ್ತಕ್ಷೇಪವಾಗಿದ್ದು, ಇದನ್ನು ನಿಯಂತ್ರಿಸಲು ಸಂಸತ್ತು ಕಾನೂನು ತರಬೇಕು ಎಂದು ಸಲಹೆ ನೀಡಿದರು.

ನ್ಯಾಯಾಲಯವು ರಚನಾತ್ಮಕ ಟೀಕೆಗಳನ್ನು ಸ್ವೀಕರಿಸುತ್ತದೆ. ಆದರೆ, ನ್ಯಾಯಮೂರ್ತಿಗಳ ಮೇಲಿನ ವೈಯಕ್ತಿಕ ದಾಳಿ ಸ್ವೀಕಾರಾರ್ಹವಲ್ಲ. ಸಾಮಾಜಿಕ ಮಾಧ್ಯಮವನ್ನು ಇಲ್ಲಿನ ವಿಚಾರಗಳ ಮೇಲೆ ಪ್ರಭಾವ ಬೀರಲು ಬಳಸಲಾಗುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: ಇಬ್ಬರು ವಿಕಲಚೇತನರ ನಡುವೆ ದ್ವೇಷ.. ಓರ್ವನಿಗೆ ಚಾಕುವಿನಿಂದ ಇರಿದು ಕೊಲೆ ಯತ್ನ - ಸಿಸಿಟಿವಿಯಲ್ಲಿ ಕೃತ್ಯ ಸೆರೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.