ಚೆನ್ನೈ(ತಮಿಳುನಾಡು): ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ವೇಳೆ ಎಐಎಡಿಎಂಕೆ ಪಕ್ಷವು ಶಾಸಕ ತೊಪ್ಪು ವೆಂಕಟಾಚಲಂ ಅವರನ್ನು ಉಚ್ಛಾಟಿಸಿದೆ.
ಪಕ್ಷದ ನೀತಿಗೆ ವಿರುದ್ಧವಾಗಿ ನಡೆದುಕೊಂಡಿರುವುದಕ್ಕಾಗಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ನಾನು ಮೋದಿ ಅಲ್ಲ, ಸುಳ್ಳು ಹೇಳಲ್ಲ.. ಚಹಾ ಕಾರ್ಮಿಕರಿಗೆ 365 ರೂ. ಪಕ್ಕಾ: ರಾಹುಲ್ ಗಾಂಧಿ ಭರವಸೆ
ತೊಪ್ಪು ವೆಂಕಟಾಚಲಂ ಅವರು ನಿನ್ನೆ ಎಐಎಡಿಎಂಕೆ ಅಭ್ಯರ್ಥಿ ವಿರುದ್ಧವಾಗಿ ಪೆರುಂಡುರೈ ವಿಧಾನಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು.
ತಮಿಳುನಾಡಿನಲ್ಲಿ ಏಪ್ರಿಲ್ 6ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಡಿಎಂಕೆ - ಕಾಂಗ್ರೆಸ್ - ಸಿಪಿಎಂ ಹಾಗೂ ಬಿಜೆಪಿ-ಎಐಎಡಿಎಂಕೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಲು ಸಿದ್ಧವಾಗಿವೆ.