ETV Bharat / bharat

ಅತ್ಯಾಚಾರ ಸಂತ್ರಸ್ತೆಯ ಗುರುತು ಬಹಿರಂಗ: ರಾಗಾ ವಿರುದ್ಧ FIR ದಾಖಲಿಸಲು ಹೈಕೋರ್ಟ್​ಗೆ ಅರ್ಜಿ - ಅತ್ಯಾಚಾರಕ್ಕೊಳಗಾಗಿ ಕೊಲೆಯಾಗಿದ್ದ ದೆಹಲಿ ಬಾಲಕಿ

ಮೃತ ಅತ್ಯಾಚಾರ ಸಂತ್ರಸ್ತೆಯ ಕುಟುಂಬಸ್ಥರೊಂದಿಗಿನ ಫೋಟೋ ಹಂಚಿಕೊಂಡು ವಿವಾದಕ್ಕೊಳಗಾಗಿದ್ದ ರಾಹುಲ್​ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಲು ದೆಹಲಿ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ರಾಗಾ ವಿರುದ್ಧ FIR ದಾಖಲಿಸಲು ಹೈಕೋರ್ಟ್​ಗೆ ಅರ್ಜಿ

author img

By

Published : Aug 9, 2021, 1:03 PM IST

ನವದೆಹಲಿ: ಅತ್ಯಾಚಾರಕ್ಕೊಳಗಾಗಿ ಕೊಲೆಯಾಗಿದ್ದ ರಾಷ್ಟ್ರ ರಾಜಧಾನಿಯ ನಂಗಲ್ ಮೂಲದ ದಲಿತ ಬಾಲಕಿಯ ಗುರುತು ಬಹಿರಂಗಪಡಿಸಿದ ಆರೋಪದಡಿ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸುವಂತೆ ಕೋರಿ ದೆಹಲಿ ಹೈಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಲಾಗಿದೆ.

ಕಳೆದ ವಾರ ಮೃತ ಸಂತ್ರಸ್ತೆಯ ಕುಟುಂಬವನ್ನು ಭೇಟಿಯಾಗಿದ್ದ ರಾಹುಲ್​ ಗಾಂಧಿ ಸಾಂತ್ವನ ಹೇಳಿದ್ದರು. "ಈ ದೇಶದ ಮಗಳು ನ್ಯಾಯಕ್ಕೆ ಅರ್ಹಳು. ನಾನು ನ್ಯಾಯದ ಹಾದಿಯಲ್ಲಿ ಅವರೊಂದಿಗೆ ಇದ್ದೇನೆ" ಎಂದು ಕೊಲೆಯಾದ 9 ವರ್ಷದ ಬಾಲಕಿ ಮತ್ತು ಆಕೆಯ ಕುಟುಂಬಸ್ಥರ ಜೊತೆಗಿನ ಫೋಟೋವನ್ನು ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದರು.

ಇದನ್ನೂ ಓದಿ: ದಲಿತ ಬಾಲಕಿ ಮೇಲಿನ Rape & Murder: ರಾಹುಲ್ ಹಂಚಿಕೊಂಡಿದ್ದ ಟ್ವೀಟ್​ ಮಾಯ

ಹೀಗೆ 9 ವರ್ಷದ ಸಂತ್ರಸ್ತೆಯ ಫೋಟೋ ಹಂಚಿಕೊಳ್ಳುವ ಮೂಲಕ ರಾಹುಲ್​ ಗಾಂಧಿ ಅವರು ಬಾಲ ನ್ಯಾಯ ಮತ್ತು ಪೊಕ್ಸೊ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಪೊಕ್ಸೊ ಕಾಯ್ದೆಯ ಸೆಕ್ಷನ್ 23 (2) ರ ಅಡಿಯಲ್ಲಿ ಅವರನ್ನು ಆರು ತಿಂಗಳಿಂದ ಒಂದು ವರ್ಷದವರೆಗೆ ಜೈಲಿನಲ್ಲಿಡಬೇಕು. ಬಾಲ ನ್ಯಾಯ ಕಾಯ್ದೆಯ ಸೆಕ್ಷನ್ 74 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲು ಅರ್ಜಿ ಸಲ್ಲಿಸಲಾಗಿದೆ.

ಈ ಮೊದಲು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್‌ಸಿಪಿಸಿಆರ್) ಕೂಡ ರಾಹುಲ್ ಗಾಂಧಿ ಟ್ವೀಟ್​ ವಿರುದ್ಧ ಕ್ರಮ ಕೈಗೊಳ್ಳಿ ಎಂದು ದೆಹಲಿ ಪೊಲೀಸ್ ಮತ್ತು ಟ್ವಿಟರ್‌ಗೆ ಸೂಚನೆ ನೀಡಿತ್ತು. ಇದರ ಬೆನ್ನಲ್ಲೇ ರಾಗಾ ಟ್ವೀಟ್​ ಅನ್ನು ಟ್ವಿಟರ್​ ಅಳಿಸಿ ಹಾಕಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.