ನವದೆಹಲಿ/ಬೆಂಗಳೂರು: ಇಂದು ಇಂಧನ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ದೆಹಲಿಯಲ್ಲಿ ಪೆಟ್ರೋಲ್ ದರ 96.72 ರೂ, ಡೀಸೆಲ್ ದರ 89.62 ಇದೆ. ಮುಂಬೈನಲ್ಲಿ ಪೆಟ್ರೋಲ್ 106.31 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ 94.27 ರೂ. ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 106.03 ರೂ. ಆಗಿದ್ದರೆ, ಡೀಸೆಲ್ 92.76 ರೂ. ಗೆ ದೊರೆಯುತ್ತಿದೆ. ಚೆನ್ನೈನಲ್ಲಿ ಪೆಟ್ರೋಲ್ 102.63 ರೂ ಮತ್ತು ಡೀಸೆಲ್‌ಗೆ 94.24 ರೂ.ಗೆ ಮಾರಾಟವಾಗುತ್ತಿದೆ. ಪಂಜಾಬ್‌ನ ಚಂಡೀಗಢದಲ್ಲಿ ಪೆಟ್ರೋಲ್ ಬೆಲೆ 96.20 ರೂ. ಮತ್ತು ಡೀಸೆಲ್ ಬೆಲೆ 84.26 ರೂ. ಆಗಿದೆ.
ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ:
ನಗರ | ಪೆಟ್ರೋಲ್ | ಡೀಸೆಲ್ |
ಬೆಂಗಳೂರು | 101.96 ರೂ. | 87.91 ರೂ. |
ಹುಬ್ಬಳ್ಳಿ | 101.65 ರೂ. | 87.65 ರೂ. |
ದಾವಣಗೆರೆ | 103.95 ರೂ. | 89.52 ರೂ. |
ಮೈಸೂರು | 101.44 ರೂ. | 87.43 ರೂ. |
ಮಂಗಳೂರು | 101.21 ರೂ. | 87.20 ರೂ. |
ಇಂಧನ ದರವನ್ನು ಬಹು ಅಂಶಗಳಿಂದ ನಿರ್ಧರಿಸಲಾಗುತ್ತದೆ. ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳಿಂದ ದೇಶದಲ್ಲಿ ನಿಯಮಿತವಾಗಿ ಪರಿಷ್ಕರಿಸಲಾಗುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿನ ಕಚ್ಚಾ ತೈಲ ಬೆಲೆಗಳು ಮತ್ತು ವಿನಿಮಯ ದರಗಳಂತಹ ಅಂಶಗಳನ್ನು ಪರಿಗಣಿಸಲಾಗುತ್ತದೆ. ರಾಜ್ಯವು ಸ್ಥಳೀಯ ತೆರಿಗೆಗಳು, ವ್ಯಾಟ್ ಮತ್ತು ಸರಕು ಸಾಗಣೆ ಶುಲ್ಕಗಳನ್ನು ಸೇರಿಸಿದ ನಂತರ ಬೆಲೆ ಅಂತಿಮಗೊಳಿಸುವುದರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ.
ಇದನ್ನೂ ಓದಿ: ರಾಜ್ಯದ ಮಾರುಕಟ್ಟೆಗಳಲ್ಲಿ ಇಂದಿನ ತರಕಾರಿ ದರ ಹೀಗಿದೆ..