ETV Bharat / bharat

ಮೇಘಾಲಯ ಸಿಎಂ ನಿವಾಸದ ಮೇಲೆ ಪೆಟ್ರೋಲ್ ಬಾಂಬ್ ದಾಳಿ - Militant Kiled

ಮಾಜಿ ಉಗ್ರನನ್ನು ಪೊಲೀಸರು ಶೂಟೌಟ್‌ನಲ್ಲಿ ಹತ್ಯೆ ಮಾಡಿದ್ದು ಮೇಘಾಲಯದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಇದೇ ವಿಚಾರವಾಗಿ ಸಿಎಂ ಮನೆ ಮೇಲೆ ದಾಳಿ ನಡೆದಿದೆ.

Petrol bombs hurled at Meghalaya CM's private residence
ಪೆಟ್ರೋಲ್ ಬಾಂಬ್ ದಾಳಿ
author img

By

Published : Aug 16, 2021, 9:25 AM IST

ಶಿಲ್ಲಾಂಗ್: ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಕೆ.ಸಂಗ್ಮಾ ಅವರ ನಿವಾಸದ ಮೇಲೆ ಭಾನುವಾರ ರಾತ್ರಿ ಅಪರಿಚಿತ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ದಾಳಿ ನಡೆಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ರಾತ್ರಿ 10:15ರ ಸುಮಾರಿಗೆ ಈ ಘಟನೆ ನಡೆದಿದೆ. ವಾಹನದಲ್ಲಿ ಬಂದ ದುಷ್ಕರ್ಮಿಗಳು ಅಪ್ಪರ್​​ ಶಿಲಾಂಗ್​ನ ಮೂರನೇ ಮೈಲ್‌ನಲ್ಲಿರುವ ಸಿಎಂ ನಿವಾಸದ ಮೇಲೆ ಬಾಂಬ್‌ ಎಸೆದಿದ್ದಾರೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಜಿಲ್ಲಾ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಮೊದಲ ಬಾಟಲಿಯನ್ನು ಸಿಎಂ ಮನೆಯ ಮುಂಭಾಗದಲ್ಲಿ ಎಸೆಯಲಾಗಿದೆ, ಎರಡನೆಯದನ್ನು ಹಿಂಭಾಗದಲ್ಲಿ ಎಸೆದಿದ್ದಾರೆ. ಅಲ್ಲಿನ ಸಿಬ್ಬಂದಿ ತಕ್ಷಣ ಬೆಂಕಿ ನಂದಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆಯಂದು ರಾಜ್ಯ ರಾಜಧಾನಿ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿಧ್ವಂಸಕ ನಡೆದಿರುವ ಕಾರಣ ರಾಜ್ಯ ಸರ್ಕಾರ ಕರ್ಫ್ಯೂ ವಿಧಿಸಿದೆ. ಮತ್ತು ನಾಲ್ಕು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ.

ಗೃಹಸಚಿವರ ರಾಜೀನಾಮೆ:

ಮಾಜಿ ಉಗ್ರನ ಮೇಲೆ ಪೊಲೀಸರು ಶೂಟ್​ ಮಾಡಿದ್ದರಿಂದ ಶಿಲ್ಲಾಂಗ್​ನಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಈ ನಡುವೆ ಮೇಘಾಲಯ ಗೃಹ ಸಚಿವ ಲಹ್ಕ್‌ಮೆನ್ ರಿಂಬುಯಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ನಿಷೇಧಿತ ನ್ಯಾಷನಲ್ ಲಿಬರೇಶನ್ ಕೌನ್ಸಿಲ್‌ನ ಪ್ರಧಾನ ಕಾರ್ಯದರ್ಶಿ ಚೆರಿಸ್ಟರ್‌ಫೀಲ್ಡ್ ತಂಗ್‌ಕೀವ್​ನ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಸಂಬಂಧ ಹಿಂಸಾಚಾರ ನಡೆಯುತ್ತಿದೆ. ಹಾಗಾಗಿ, ಈ ಪ್ರಕರಣವನ್ನು ಉನ್ನತ ಮಟ್ಟದ ತನಿಖೆ ನಡೆಸುವಂತೆ ನಿರ್ಗಮಿತ ಗೃಹ ಸಚಿವ ರಿಂಬುಯಿ ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ.

ಸರಣಿ ಐಇಡಿ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಉಗ್ರ ತಂಗ್‌ಕೀವ್​ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಆತನ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ಮಾಡಲು ಯತ್ನಿಸಿದ್ದ. ಆಗ ಪೊಲೀಸರು ಶೂಟ್ ಮಾಡಿ ಆತನನ್ನು ಕೊಂದು ಹಾಕಿದ್ದಾರೆ. ಹಾಗಾಗಿ, ರಾಜ್ಯದಲ್ಲಿ ಹಿಂಸಾಚಾರ ಪ್ರಾರಂಭವಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.