ETV Bharat / bharat

ವಾಹನ ಸವಾರರಿಗೆ ತೈಲ ಬಿಸಿ: ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ ಇಂಧನ ದರ

ಬೆಂಗಳೂರಿನಲ್ಲಿ 30 ಪೈಸೆ ಏರಿಕೆಯೊಂದಿಗೆ ಲೀಟರ್​ ಪೆಟ್ರೋಲ್ ಬೆಲೆ 105.95 ಕ್ಕೆ ಹಾಗೂ ಬರೋಬ್ಬರಿ 36 ಪೈಸೆ ಹೆಚ್ಚಳದೊಂದಿಗೆ ಡೀಸೆಲ್​ ದರ 96.34 ರೂ.ಗೆ ಏರಿಕೆಯಾಗಿದೆ.

ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ ಇಂಧನ ದರ
ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ ಇಂಧನ ದರ
author img

By

Published : Oct 3, 2021, 12:12 PM IST

Updated : Oct 3, 2021, 12:35 PM IST

ಮುಂಬೈ: ಇಂದು ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದೆ. ಈ ಮೂಲಕ ಇಂಧನ ದರ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ. ಪ್ರತಿ ಲೀಟರ್ ಪೆಟ್ರೋಲ್​​ ಮೇಲೆ 24 ರಿಂದ 30 ಪೈಸೆ ಹಾಗೂ ಡೀಸೆಲ್​ ಮೇಲೆ 28 ರಿಂದ 36 ಪೈಸೆಯನ್ನು ತೈಲ ಕಂಪನಿಗಳು ಹೆಚ್ಚಿಸಿವೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 25 ಪೈಸೆ ಏರಿಕೆಯೊಂದಿಗೆ ಲೀಟರ್ ಪೆಟ್ರೋಲ್ ದರ 102.39 ರೂ. ಹಾಗೂ 30 ಪೈಸೆ ಹೆಚ್ಚಳದೊಂದಿಗೆ ಡೀಸೆಲ್​ ದರ 90.77 ರೂ.ಗೆ ಏರಿಕೆಯಾಗಿದೆ. ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ 30 ಪೈಸೆ ಏರಿಕೆಯೊಂದಿಗೆ ಲೀಟರ್​ ಪೆಟ್ರೋಲ್ ಬೆಲೆ 105.95ಕ್ಕೆ ಹಾಗೂ ಬರೋಬ್ಬರಿ 36 ಪೈಸೆ ಹೆಚ್ಚಳದೊಂದಿಗೆ ಡೀಸೆಲ್​ ದರ 96.34 ರೂ.ಗೆ ಏರಿಕೆಯಾಗಿದೆ.

ಪ್ರಮುಖ ಮೆಟ್ರೋ ನಗರಗಳಲ್ಲಿನ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ

ಇದನ್ನೂ ಓದಿ: ಇಂಧನ ಬೆಲೆ ಹೆಚ್ಚಳ: CNG ವಾಹನಗಳತ್ತ ಮುಖ ಮಾಡಿದ ಗ್ರಾಹಕರು

ಭಾರತ್ ಪೆಟ್ರೋಲಿಯಂ, ಇಂಡಿಯನ್ ಆಯಿಲ್ ಮತ್ತು ಹಿಂದುಸ್ತಾನ್ ಪೆಟ್ರೋಲಿಯಂ ಸೇರಿದಂತೆ ತೈಲ ಕಂಪನಿಗಳು ಅಬಕಾರಿ ಸುಂಕಗಳ ಆಧಾರದ ಮೇಲೆ ಇಂಧನ ದರವನ್ನು ಹೆಚ್ಚಿಸುತ್ತಿರುತ್ತದೆ. ಎಲ್ಲಾ ರಾಜ್ಯಗಳಲ್ಲೂ ಈಗಾಗಲೇ ಪೆಟ್ರೋಲ್​ ಬೆಲೆ ಶತಕದ ಗಡಿ ದಾಟಿದ್ದು, ಹೀಗೆ ತೈಲ ಕಂಪನಿಗಳು ಇಂಧನ ದರ ಹೆಚ್ಚಿಸುತ್ತಿದ್ದರೆ ಡೀಸೆಲ್​ ಬೆಲೆಯೂ ನೂರರ ಗಡಿ ತಲುಪಲಿದೆ.

bhopal
ಭೋಪಾಲ್​ನಲ್ಲಿ ಇಂಧನ ದರ

ಇನ್ನು ಭೋಪಾಲ್​ನಲ್ಲಿ ಪೆಟ್ರೋಲ್​ ದರ ಗರಿಷ್ಠ ಮಟ್ಟವಾದ 110.88 ರೂಪಾಯಿಗೆ ತಲುಪಿದ್ದು, ಡೀಸೆಲ್​ ಬೆಲೆ ಶತಕ ಬಾರಿಸಲು ಕೇವಲ 27 ಪೈಸೆ ಬೇಕಿದೆ.

Last Updated : Oct 3, 2021, 12:35 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.