ETV Bharat / bharat

ಇಂದೂ ಸಹ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ.. ಜನಸಾಮಾನ್ಯನ ಸ್ಥಿತಿ ದುಸ್ತರ!

ಇಂದು ಮತ್ತೆ ಇಂಧನದ ಬೆಲೆ ಹೆಚ್ಚಳವಾಗಿದ್ದು, ಕಳೆದ 43 ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 16 ಪಟ್ಟು ಹೆಚ್ಚಾಗಿದೆ.

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ
ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ
author img

By

Published : Feb 12, 2021, 11:49 AM IST

ನವದೆಹಲಿ: ಕಳೆದ ತಿಂಗಳು ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಕೆ ಮಾಡಲಾಗಿತ್ತು. ಇಂದೂ ಸಹ ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಕ್ರಮವಾಗಿ 29 ಪೈಸೆ ಮತ್ತು 35 ಪೈಸೆ ಏರಿಕೆಯಾಗಿದೆ.

ದೆಹಲಿಯಲ್ಲಿ ಸತತವಾಗಿ ನಾಲ್ಕನೇ ದಿನವೂ ಪೆಟ್ರೋಲ್ ಬೆಲೆ ಏರಿಕೆಯಾಗಿದ್ದು, ಪೆಟ್ರೋಲ್ ದರ ಪ್ರತೀ ಲೀಟರ್​ಗೆ 88.14 ರೂ. ಪೈಸೆ ಆಗಿದೆ. ಡೀಸೆಲ್ ಬೆಲೆ ಕೂಡ ಏರಿಕೆಯಾಗಿದ್ದು, 35 ಪೈಸೆ ಹೆಚ್ಚಳವಾಗುವ ಮೂಲಕ ಪ್ರತೀ ಲೀಟರ್​ಗೆ 78.38 ರೂ. ಪೈಸೆ ಆಗಿದೆ.

ಕಳೆದ 43 ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 16 ಪಟ್ಟು ಹೆಚ್ಚಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಗಣನೀಯವಾಗಿ ಕಡಿಮೆ ಆಗುತ್ತಿದೆ. ಬ್ರೆಂಟ್ ಕಚ್ಚಾ ತೈಲವು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರೆಲ್‌ಗೆ $ 61ನಂತೆ ಲಭ್ಯವಾಗುತ್ತಿದೆ. ಈಗಾಗಲೇ ಕೊರೊನಾ ಮತ್ತು ಲಾಕ್​ಡೌನ್​ ಕಾರಣಗಳಿಂದ ಜನ ಸಾಮಾನ್ಯರು ಕಷ್ಟದಲ್ಲಿದ್ದಾರೆ. ಜೊತೆಗೆ ಕಾಂಗ್ರೆಸ್ ನಾಯಕರು ಸಹ ಪೆಟ್ರೋಲ್ - ಡೀಸೆಲ್ ಬೆಲೆ ಏರಿಕೆಗೆ ವ್ಯಾಪಕವಾದ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದ್ಯಾವುದನ್ನೂ ಪರಿಗಣಿಸದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಳ ಮಾಡುತ್ತಲೇ ಇದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.