ನವದೆಹಲಿ: ದೇಶಾದ್ಯಂತ ಸತತ ಐದನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದೆ. ಇಂದೂ ಸಹ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ತೈಲ ಕಂಪನಿಗಳು 35 ಪೈಸೆ ಹೆಚ್ಚಿಸಿವೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 107.59 ರೂಪಾಯಿ ಹಾಗೂ ಡೀಸೆಲ್ ದರ 96.32 ರೂಪಾಯಿ ಇದೆ. ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 113.46 ಕ್ಕೆ ಹಾಗೂ ಲೀಟರ್ ಡೀಸೆಲ್ 104.38 ರೂ. ಗೆ ಮಾರಾಟವಾಗುತ್ತಿದೆ. ಕೋಲ್ಕತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 108.11 ಕ್ಕೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಡೀಸೆಲ್ ದರ 99.43 ರೂ. ಗೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಎಷ್ಟಿದೆ ತೈಲ ದರ?:
ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 111.34 ಕ್ಕೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಡೀಸೆಲ್ ದರ 102.23 ರೂ. ಗೆ ಏರಿಕೆಯಾಗಿದೆ. ಹೈದರಾಬಾದ್ನಲ್ಲಿ ಸಹ ಡೀಸೆಲ್ ₹105 ರ ಗಡಿ ದಾಟಿದೆ. ಸದ್ಯಕ್ಕೆ ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ಗೆ 111.91 ರೂ. ಹಾಗೂ ಲೀಟರ್ ಡೀಸೆಲ್ಗೆ 105.08 ರೂ. ಇದೆ. ಚೆನ್ನೈನಲ್ಲಿ ಪ್ರತಿ ಲೀಟರ್ಗೆ ಪೆಟ್ರೋಲ್ಗೆ 104.52 ರೂ. ಇದ್ದು, ಲೀಟರ್ ಡೀಸೆಲ್ 100.59 ಕ್ಕೆ ಲಭ್ಯವಿದೆ.
ಇನ್ನು ರಾಜಸ್ಥಾನದ ಗಂಗಾನಗರ ಪಟ್ಟಣದಲ್ಲಿ ಲೀಟರ್ ಪೆಟ್ರೋಲ್ಗೆ 119.79 ರೂ. ಇದ್ದು, ಡಿಸೇಲ್ 110.63 ರೂ.ಗೆ ಲಭ್ಯವಾಗುತ್ತಿದೆ. ದೇಶಾದ್ಯಂತ ಸತತವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಿದ್ದು, ವಾಹನ ಸವಾರರಿಗೆ ಕೇಂದ್ರ ಸರ್ಕಾರ ಶಾಕ್ ನೀಡಿವೆ.
ಭಾರತ್ ಪೆಟ್ರೋಲಿಯಂ, ಇಂಡಿಯನ್ ಆಯಿಲ್ ಮತ್ತು ಹಿಂದುಸ್ತಾನ್ ಪೆಟ್ರೋಲಿಯಂ ಸೇರಿದಂತೆ ತೈಲ ಕಂಪನಿಗಳು ಅಬಕಾರಿ ಸುಂಕಗಳ ಆಧಾರದ ಮೇಲೆ ಇಂಧನ ದರವನ್ನು ಹೆಚ್ಚಿಸುತ್ತಿರುತ್ತವೆ.