ನವದೆಹಲಿ: ಕಳೆದ 12 ದಿನಗಳಿಂದ ಸತತವಾಗಿ ಏರಿಕೆ ದಾಖಲಿಸಿದ್ದ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಂದು ಯಥಾಸ್ಥಿತಿ ಕಾಪಾಡಿಕೊಳ್ಳಲಾಗಿದೆ.
ಒಟ್ಟಾರೆ 12 ದಿನಗಳಲ್ಲಿ ಸುಮಾರು 3.63 ರೂ. ಪೆಟ್ರೋಲ್ ದರದಲ್ಲಿ ಹೆಚ್ಚಳ ಕಂಡಿದ್ದರೆ, ಡೀಸೆಲ್ ಬೆಲೆಯಲ್ಲಿ ಬರೋಬ್ಬರಿ 3.84 ರೂ. ಏರಿಕೆ ಕಂಡು ಬಂದಿತ್ತು. ಮುಂಬೈನಲ್ಲಿ ಲೀಟರ್ ಪೆಟ್ರೋಲ್ಗೆ 97 ರೂ ಇದ್ದರೆ, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಇದು 100 ರೂ ದಾಟಿತ್ತು. ಹೀಗಾಗಿ ದೇಶಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.
ಓದಿ: ಪುದುಚೇರಿ ಸಿಎಂ ವಿ. ನಾರಾಯಣಸ್ವಾಮಿ ರಾಜೀನಾಮೆ; ಅಧಿಕಾರ ಕಳೆದುಕೊಂಡ ಕಾಂಗ್ರೆಸ್
ಈ ನಡುವೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬೆಲೆ ಏರಿಕೆ ನಿಯಂತ್ರಣದ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಯೋಚಿಸಬೇಕಾಗಿದೆ ಎಂದಿದ್ದರು. ಪ್ರಧಾನಿ ನರೇಂದ್ರ ಮೋದಿ ಇಂಧನ ಬೆಲೆ ಏರಿಕೆಗೆ ಹಿಂದಿನ ಸರ್ಕಾರಗಳ ನಿರ್ಧಾರಗಳೇ ಕಾರಣ ಎಂದು ಆರೋಪಿಸಿದ್ದರು.