ETV Bharat / bharat

ಪೆಟ್ರೋಲ್‌, ಡೀಸೆಲ್ ಬೆಲೆ ಏರಿಕೆಗೆ ರಾಜ್ಯ ಸರ್ಕಾರಗಳೇ ಕಾರಣ: ಕೇಂದ್ರ ಪೆಟ್ರೋಲಿಯಂ ಸಚಿವ

author img

By

Published : Sep 23, 2021, 3:19 PM IST

ಇಂಧನ ಬೆಲೆ ಜಿಎಸ್​​ಟಿ ವ್ಯಾಪ್ತಿಗೆ ತರುವುದಕ್ಕೆ ರಾಜ್ಯಗಳು ವಿರೋಧ ವ್ಯಕ್ತಪಡಿಸುತ್ತಿರುವ ಕಾರಣಕ್ಕೆ ತೈಲ ಬೆಲೆ ಇಳಿಕೆಯಾಗುತ್ತಿಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಸಚಿವರು ಹೇಳಿದ್ದಾರೆ.

Hardeep Singh Puri
Hardeep Singh Puri

ಕೋಲ್ಕತ್ತಾ(ಪಶ್ಚಿಮ ಬಂಗಾಳ): ದೇಶದಲ್ಲಿ ತೈಲ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಬಹುತೇಕ ಎಲ್ಲ ರಾಜ್ಯಗಳಲ್ಲೂ ಈಗಾಗಲೇ ಪೆಟ್ರೋಲ್‌ ದರ ಲೀಟರ್‌ಗೆ 100 ರೂಪಾಯಿ ಗಡಿ ದಾಟಿದೆ.

ಪೆಟ್ರೋಲ್​​- ಡೀಸೆಲ್​​ ಜಿಎಸ್​​ಟಿ (ಸರಕು ಮತ್ತು ಸೇವಾ ತೆರಿಗೆ) ವ್ಯಾಪ್ತಿಗೆ ತರಲು ಕೇಂದ್ರ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ ಎಂಬ ಮಾತು ಕೂಡಾ ಕೇಳಿ ಬಂದಿತ್ತು. ಆದರೆ ಇದಕ್ಕೆ ಅನೇಕ ರಾಜ್ಯಗಳಿಂದ ವಿರೋಧ ವ್ಯಕ್ತವಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಹೇಳಿದ್ದರು. ಇದೀಗ ಈ ವಿಚಾರವಾಗಿ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್​ ಸಿಂಗ್​ ಪುರಿ ಮಾತನಾಡಿದ್ದಾರೆ.

ಕೋಲ್ಕತ್ತಾಗೆ ಭೇಟಿ ನೀಡಿರುವ ಸಂದರ್ಭದಲ್ಲಿ ಪ್ರತಿಕ್ರಿಯಿಸಿರುವ ಅವರು, 'ರಾಜ್ಯ ಸರ್ಕಾರಗಳು ಇಂಧನ ಬೆಲೆಯನ್ನು ಜಿಎಸ್​ಟಿ ವ್ಯಾಪ್ತಿಗೆ ತರಲು ಹಿಂದೇಟು ಹಾಕುತ್ತಿರುವ ಕಾರಣ ಪೆಟ್ರೋಲ್​​, ಡೀಸೆಲ್​ ಬೆಲೆಯಲ್ಲಿ ಇಳಿಕೆ ಕಂಡು ಬರುತ್ತಿಲ್ಲ' ಎಂದು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲೂ ಪೆಟ್ರೋಲ್​ ಬೆಲೆ ಲೀ.ಗೆ 100 ದಾಟಿದೆ. ಇದಕ್ಕೆ ಮುಖ್ಯ ಕಾರಣ ಇಲ್ಲಿನ ಸರ್ಕಾರ ಹೆಚ್ಚಿನ ತೆರಿಗೆ ವಿಧಿಸುತ್ತಿರುವುದು ಎಂದಿದ್ದಾರೆ.

ಇದನ್ನೂ ಓದಿ: 14 ವರ್ಷದ ಬಾಲಕಿ ಮೇಲೆ 30 ಜನರಿಂದ ಅತ್ಯಾಚಾರ, 22 ಜನರ ಬಂಧನ

ಪೆಟ್ರೋಲ್​​, ಡೀಸೆಲ್​ ದರ ಇಳಿಕೆ ಮಾಡುವಿರಾ ಎಂದು ನೀವು ಪ್ರಶ್ನಿಸಿದಾಗ ನಾವು ಹೌದು ಎನ್ನುತ್ತೇವೆ. ಆದರೆ ಇದಕ್ಕೆ ರಾಜ್ಯ ಸರ್ಕಾರಗಳು ಅವಕಾಶ ನೀಡುತ್ತಿಲ್ಲ. ಇಂಧನ ಜಿಎಸ್​ಟಿ ವ್ಯಾಪ್ತಿಗೆ ಬರುವುದು ಅವುಗಳಿಗೆ ಇಷ್ಟವಿಲ್ಲ. ಹೀಗಾಗಿ ಇದು ಕಾರ್ಯ ಸಾಧ್ಯವಾಗುತ್ತಿಲ್ಲ ಎಂದರು.

ಕೇಂದ್ರ ಸರ್ಕಾರ ಪ್ರತಿ ಲೀಟರ್​ ಪೆಟ್ರೋಲ್​ಗೆ 32 ರೂ. ವಿಧಿಸುತ್ತದೆ. ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್​ಗೆ 19 ಡಾಲರ್​ ಇದ್ದಾಗಲೂ ಕೂಡ ನಾವು 32 ರೂಪಾಯಿ ತೆಗೆದುಕೊಳ್ಳುತ್ತಿದ್ದೆವು. ಆದರೀಗ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್​ಗೆ 75 ಡಾಲರ್​​ ಆಗಿದ್ದರೂ ಕೂಡ ನಾವು 32 ರೂ. ವಿಧಿಸುತ್ತಿದ್ದೇವೆ. ಆದರೆ ರಾಜ್ಯ ಸರ್ಕಾರಗಳು ಮೇಲಿಂದ ಮೇಲೆ ತೈಲ ಬೆಲೆ ಏರಿಕೆ ಮಾಡುತ್ತಲೇ ಇವೆ ಎನ್ನುತ್ತಾ ತೈಲ ಬೆಲೆ ಏರಿಕೆಗೆ ರಾಜ್ಯ ಸರ್ಕಾರಗಳನ್ನೇ ಹೊಣೆಯಾಗಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.