ಹೈದರಾಬಾದ್: ಪಂಚ ರಾಜ್ಯಗಳ ಚುನಾವಣೆ ಮುಕ್ತಾಯಗೊಳ್ಳಲು ಕೇವಲ ಎರಡು ದಿನಗಳು ಮಾತ್ರ ಬಾಕಿ ಉಳಿದಿವೆ. ಇದರ ಮಧ್ಯೆ ಕಾಂಗ್ರೆಸ್ನ ಹಿರಿಯ ನಾಯಕ ರಾಹುಲ್ ಗಾಂಧಿ 'ತಕ್ಷಣವೇ ಪೆಟ್ರೋಲ್ ಟ್ಯಾಂಕ್ ತುಂಬಿಸಿಕೊಳ್ಳಿ' ಎಂದು ಟ್ವೀಟ್ ಮಾಡಿದ್ದಾರೆ.
ಉತ್ತರ ಪ್ರದೇಶ, ಪಂಜಾಬ್, ಗೋವಾ, ಮಣಿಪುರ ಮತ್ತು ಉತ್ತರಾಖಂಡ ಚುನಾವಣೆ ಘೋಷಣೆಯಾದಾಗಿನಿಂದಲೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ರೀತಿಯ ಬದಲಾವಣೆ ಕಂಡು ಬಂದಿಲ್ಲ. ಇದಕ್ಕೆ ಪಂಚರಾಜ್ಯಗಳ ಚುನಾವಣೆ ಘೋಷಣೆಯಾಗಿರುವುದೇ ಕಾರಣ ಎಂದು ಅನೇಕರು ಮಾತನಾಡಿಕೊಳ್ಳುತ್ತಿದ್ದಾರೆ. ಇದೀಗ ಎಲ್ಲ ರಾಜ್ಯಗಳ ಚುನಾವಣೆ ಮುಕ್ತಾಯಗೊಳ್ಳುತ್ತಿದ್ದು, ಮತ್ತೊಮ್ಮೆ ತೈಲ ಬೆಲೆಯಲ್ಲಿ ಭಾರಿ ಏರಿಕೆ ಕಂಡು ಬರುವ ಸಾಧ್ಯತೆ ದಟ್ಟವಾಗಿದೆ. ಇದೇ ಕಾರಣಕ್ಕಾಗಿ ಮೋದಿ ಸರ್ಕಾರದ ಚುನಾವಣಾ ಆಫರ್ ಮುಗಿಯಲಿದ್ದು, ತಕ್ಷಣವೇ ಪೆಟ್ರೋಲ್ ಫುಲ್ ಮಾಡಿಕೊಳ್ಳಿ ಎಂದು ರಾಗಾ ಟ್ವೀಟ್ ಮಾಡಿದ್ದಾರೆ.
-
फटाफट Petrol टैंक फुल करवा लीजिए।
— Rahul Gandhi (@RahulGandhi) March 5, 2022 " class="align-text-top noRightClick twitterSection" data="
मोदी सरकार का ‘चुनावी’ offer ख़त्म होने जा रहा है। pic.twitter.com/Y8oiFvCJTU
">फटाफट Petrol टैंक फुल करवा लीजिए।
— Rahul Gandhi (@RahulGandhi) March 5, 2022
मोदी सरकार का ‘चुनावी’ offer ख़त्म होने जा रहा है। pic.twitter.com/Y8oiFvCJTUफटाफट Petrol टैंक फुल करवा लीजिए।
— Rahul Gandhi (@RahulGandhi) March 5, 2022
मोदी सरकार का ‘चुनावी’ offer ख़त्म होने जा रहा है। pic.twitter.com/Y8oiFvCJTU
ರಷ್ಯಾ-ಉಕ್ರೇನ್ ನಡುವೆ ಯುದ್ಧ ನಡೆಯುತ್ತಿರುವ ಕಾರಣ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್ಗೆ 120 ಡಾಲರ್ ಗಡಿ ದಾಟಿದೆ. ಇಷ್ಟಾದ್ರೂ ಕೂಡ ದೇಶದಲ್ಲಿ ತೈಲ ಬೆಲೆ ಏರಿಕೆಯಾಗಿಲ್ಲ. ಚುನಾವಣೆ ಮುಗಿಯುತ್ತಿದ್ದಂತೆ ತೈಲ ಬೆಲೆಯಲ್ಲಿ ಏರಿಕೆಯಾಗುವ ಸಾಧ್ಯತೆ ಇರುವ ಕಾರಣ ರಾಹುಲ್ ಈ ರೀತಿಯಾಗಿ ಟ್ವೀಟ್ ಮಾಡಿದ್ದಾರೆ.
ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ 12 ರೂ. ಏರಿಕೆ?: ಕಳೆದ ಎರಡು ತಿಂಗಳಿಂದ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಗಣನೀಯವಾದ ಏರಿಕೆ ಕಂಡು ಬಂದಿದ್ದು, ಕೇಂದ್ರ ಸರ್ಕಾರ ಮಾತ್ರ ಯಾವುದೇ ರೀತಿಯ ಬೆಲೆ ಏರಿಕೆ ಮಾಡಿಲ್ಲ. ಹೀಗಾಗಿ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಪ್ರತಿ ಲೀಟರ್‌ಗೆ 12 ರೂ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ICICI ಸೆಕ್ಯುರಿಟೀಸ್ ವರದಿ ಪ್ರಕಾರ ಅಂತಾರಾಷ್ಟ್ರೀಯ ತೈಲ ಬೆಲೆಯಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ ಎಂಬ ವರದಿ ಬಹಿರಂಗಗೊಂಡಿದೆ.
ಇದನ್ನೂ ಓದಿರಿ: ಕೊನೆ ಹಂತದ ಕಸರತ್ತು: ವಾರಣಾಸಿಯಲ್ಲಿ ಭರ್ಜರಿ ಮತಬೇಟೆ ನಡೆಸಿದ ನಮೋ
ವರದಿಯ ಪ್ರಕಾರ, ಸಾರ್ವಜನಿಕ ವಲಯದ ತೈಲ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಚ್ಚಾ ತೈಲ ಬೆಲೆ ಏರಿಕೆಯಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಲೀಟರ್‌ಗೆ 5.7 ರೂಪಾಯಿ ನಷ್ಟ ಅನುಭವಿಸುತ್ತಿವೆ ಎಂದು ತಿಳಿದು ಬಂದಿದೆ.