ETV Bharat / bharat

ಶಿಕ್ಷಣ ಸಂಸ್ಥೆಗಳಲ್ಲಿ ಏಕರೂಪದ ವಸ್ತ್ರಸಂಹಿತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರಿಂ ಕೋರ್ಟ್‌

ಶಿಕ್ಷಣ ಸಂಸ್ಥೆಗಳಲ್ಲಿ ಏಕರೂಪದ ವಸ್ತ್ರಸಂಹಿತೆ ಜಾರಿಗೊಳಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಪಿಐಎಲ್​ ಅನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇದು ತೀರ್ಪಿಗಾಗಿ ನ್ಯಾಯಾಲಯಕ್ಕೆ ಬರಬೇಕಾದ ವಿಷಯವಲ್ಲ ಎಂದು ನ್ಯಾಯಾಲಯ ಹೇಳಿತು.

ಶಿಕ್ಷಣ ಸಂಸ್ಥೆಗಳಲ್ಲಿ ಏಕರೂಪದ ವಸ್ತ್ರಸಂಹಿತೆ
SC refuses to entertain PIL
author img

By

Published : Sep 16, 2022, 1:21 PM IST

ನವದೆಹಲಿ: ನೋಂದಾಯಿತ ಶಿಕ್ಷಣ ಸಂಸ್ಥೆಗಳಲ್ಲಿ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಸಾಮಾನ್ಯ ಡ್ರೆಸ್ ಕೋಡ್ (ಏಕರೂಪದ ವಸ್ತ್ರ ಸಂಹಿತೆ) ಜಾರಿಗೊಳಿಸಲು ಕೇಂದ್ರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ಇದು ತೀರ್ಪಿಗಾಗಿ ನ್ಯಾಯಾಲಯಕ್ಕೆ ಬರಬೇಕಾದ ವಿಷಯವಲ್ಲ ಎಂದು ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠ ಹೇಳಿತು.

ಸಮಾನತೆ, ಭ್ರಾತೃತ್ವ ಮತ್ತು ರಾಷ್ಟ್ರೀಯ ಏಕತೆಯನ್ನು ಉತ್ತೇಜಿಸಲು ಡ್ರೆಸ್ ಕೋಡ್ ಜಾರಿಗೊಳಿಸಬೇಕು ಎಂದು ಪಿಐಎಲ್​ನಲ್ಲಿ ವಾದಿಸಲಾಗಿದೆ. ಅರ್ಜಿದಾರ ನಿಖಿಲ್ ಉಪಾಧ್ಯಾಯ ಪರ ವಾದ ಮಂಡಿಸಿದ ಹಿರಿಯ ವಕೀಲ ಗೌರವ್ ಭಾಟಿಯಾ, ಇದೊಂದು ಸಾಂವಿಧಾನಿಕ ಸಮಸ್ಯೆಯಾಗಿದ್ದು, ಶಿಕ್ಷಣ ಹಕ್ಕು ಕಾಯ್ದೆಯಡಿ ನಿರ್ದೇಶನ ನೀಡುವಂತೆ ಕೋರಿದ್ದರು.

ಆದರೆ ಪಿಐಎಲ್​ ಅನ್ನು ವಿಚಾರಣೆಗೆ ಸ್ವೀಕರಿಸಲು ನ್ಯಾಯಪೀಠ ಒಪ್ಪದ ಕಾರಣ ಆರ್ಜಿದಾರರು ಅರ್ಜಿಯನ್ನು ಹಿಂಪಡೆದರು. ಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಈ ಪಿಐಎಲ್ ಸಲ್ಲಿಸಲಾಗಿತ್ತು. ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಮೇಲಿನ ನಿಷೇಧವನ್ನು ತೆಗೆದುಹಾಕಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಬ್ಯಾಚ್‌ನ ವಾದವನ್ನು ನ್ಯಾಯಮೂರ್ತಿ ಗುಪ್ತಾ ನೇತೃತ್ವದ ಇದೇ ಪೀಠ ಆಲಿಸುತ್ತಿದೆ.

ಇದನ್ನೂ ಓದಿ: ಶಾಲಾ ಸಮವಸ್ತ್ರ ನೀತಿ ರೂಪಿಸುವ ಅಧಿಕಾರ ಸರ್ಕಾರಕ್ಕಿದೆ: ಸುಪ್ರೀಂಕೋರ್ಟ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.