ನವದೆಹಲಿ: ಹೊಸದಾಗಿ ದೃಢಪಟ್ಟಿರುವ ಕೋವಿಡ್ ಪ್ರಕರಣಗಳ ಪೈಕಿ ಶೇಕಡಾ 72 ಕ್ಕಿಂತ ಹೆಚ್ಚು ಕೋವಿಡ್ ಸಕ್ರಿಯ ಪ್ರಕರಣಗಳು ದೇಶದ 10 ರಾಜ್ಯಗಳಲ್ಲಿ ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ದೆಹಲಿ, ಹರಿಯಾಣ, ಉತ್ತರಪ್ರದೇಶ, ಕೇರಳ, ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಪಶ್ಚಿಮಬಂಗಾಳ, ರಾಜಸ್ಥಾನ, ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಪ್ರಕರಣಗಳಿವೆ. ಮಹಾರಾಷ್ಟ್ರದಲ್ಲಿ ಒಂದೇ ದಿನ 46,781, ಕೇರಳದಲ್ಲಿ 43,529, ಕರ್ನಾಟಕದಲ್ಲಿ 39,998 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ.
ಈ ಬಗ್ಗೆ ಮಾಹಿತಿ ನೀಡಿರುವ ಹಿರಿಯ ಅಧಿಕಾರಿಯೊಬ್ಬರು, 12 ರಾಜ್ಯಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. 24 ರಾಜ್ಯಗಳು ಶೇಕಡಾ 15 ಕ್ಕಿಂತ ಹೆಚ್ಚು ಆ್ಯಕ್ಟಿವ್ ಕೇಸ್ಗಳನ್ನು ಹೊಂದಿವೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:92 ವರ್ಷದ ವೃದ್ಧನಿಗೆ ಸರಪಳಿ ಕಟ್ಟಿ ಚಿಕಿತ್ಸೆ.. ವೈರಲ್ ಆಯ್ತು ಮಾನವೀಯತೆ ನಾಚಿಸುವ ಚಿತ್ರ
ದೇಶದಲ್ಲೀಗ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 2,37,03,665, ಮೃತರ ಸಂಖ್ಯೆ 2,58,317 ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ 37,10,525ಕ್ಕೆ ಏರಿಕೆಯಾಗಿದೆ. ಬುಧವಾರ 3,52,181 ಸೋಂಕಿತರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇಲ್ಲಿಯವರೆಗೆ ಒಟ್ಟು 1,97,34,823 ಮಂದಿ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.