ETV Bharat / bharat

ಬಂಗಾಳದಲ್ಲಿ ಹಿಂಸಾಚಾರ: ಉನ್ನತ ತನಿಖೆಗೆ ಒತ್ತಾಯಿಸಿ ಸುಪ್ರೀಂಗೆ ದೂರು

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಘೋಷಣೆಯ ನಂತರ ಭುಗಿಲೆದ್ದಿರುವ ಹಿಂಸಾಚಾರ ಅಲ್ಲಿನ ಸಂವಿಧಾನಿಕ ಅಂಶಗಳ ವೈಫಲ್ಯವನ್ನು ತೋರಿಸುತ್ತಿದೆ ಎಂದು ಆರೋಪಿಸಿ ತಮಿಳುನಾಡು ಮೂಲದ ಇಂಡಿಕ್ ಕಲೆಕ್ಟಿವ್ ಟ್ರಸ್ಟ್ ವಕೀಲ ಸುವಿದುತ್ ಎಂ.ಎಸ್ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

author img

By

Published : May 5, 2021, 9:28 AM IST

President's rule in Bengal
ಪಶ್ಚಿಮ ಬಂಗಾಳ

ನವದೆಹಲಿ: ವಿಧಾನಸಭಾ ಚುನಾವಣೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸಂವಿಧಾನಿಕ ಅಂಶಗಳು ಮರೆಯಾಗಿದೆ ಎಂದು ಆರೋಪಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ರಾಜ್ಯದಲ್ಲಿ ರಾಷ್ಟ್ರಪತಿಗಳ ಆಡಳಿತವನ್ನು ಹೇರಲು ಪ್ರಯತ್ನಿಸುವುದರ ಜೊತೆಗೆ ಕೇಂದ್ರದ ಭದ್ರತಾ ಪಡೆಗಳ ನಿಯೋಜನೆ ಬಗ್ಗೆ ವಿಚಾರಣೆ ನಡೆಸುವಂತೆ ಕೋರಿ ಈ ಅರ್ಜಿಯನ್ನು ಸಲ್ಲಿಸಲಾಗಿದೆ.

ಈ ಮನವಿಯನ್ನು ತಮಿಳುನಾಡು ಮೂಲದ ಇಂಡಿಕ್ ಕಲೆಕ್ಟಿವ್ ಟ್ರಸ್ಟ್ ವಕೀಲ ಸುವಿದುತ್ ಎಂ.ಎಸ್ ಸುಪ್ರೀಂಕೋರ್ಟ್​ಗೆ ಸಲ್ಲಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಘೋಷಣೆ ನಂತರ ಭುಗಿಲೆದ್ದಿರುವ ಹಿಂಸಾಚಾರ ಅಲ್ಲಿನ ಸಂವಿಧಾನಿಕ ಅಂಶಗಳ ವೈಫಲ್ಯವನ್ನು ತೋರಿಸುತ್ತಿದೆ. ಇದು ಕಾನೂನು ಸುವ್ಯವಸ್ಥೆಗೆ ಅಡ್ಡಿಯಾಗಿದ್ದು, ಇದನ್ನು ಗಮನದಲ್ಲಿಟ್ಟುಕೊಂಡು ಅರ್ಜಿದಾರರು ತುರ್ತು ಪರಿಹಾರವನ್ನು ಕೋರಿ ಮನವಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಪಾಳುಬಿದ್ದ ಕೊಠಡಿಯಲ್ಲಿ ಬಕೆಟ್ ಒಳಗೆ ಕಚ್ಚಾ ಬಾಂಬ್‌ ಪತ್ತೆ!

ಮೇ 2 ರಂದು ಚುನಾವಣಾ ಫಲಿತಾಂಶ ಘೋಷಣೆಯ ನಂತರ ರಾಜ್ಯದಲ್ಲಿ ಹಿಂಸಾಚಾರ ಪ್ರಾರಂಭವಾಯಿತು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಎದುರಾಳಿ ರಾಜಕೀಯ ಪಕ್ಷಗಳ ಸದಸ್ಯರು ಮತ್ತು ಬೆಂಬಲಿಗರನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಅವರ ಮನೆಗಳಿಗೆ ಹಾಗೂ ಆಸ್ತಿಗಳಿಗೆ ಅಪಾರ ಪ್ರಮಾಣದಲ್ಲಿ ಹಾನಿ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಬಂಗಾಳ ಫಲಿತಾಂಶದ ಬೆನ್ನಲ್ಲೇ ಭುಗಿಲೆದ್ದ ಹಿಂಸಾಚಾರ, ಬಿಜೆಪಿ ಕಚೇರಿ, ಅಂಗಡಿ ಧ್ವಂಸ

ಕೆಲ ದಿನಗಳ ಹಿಂದೆ, ಹಿರಿಯ ವಕೀಲ ಮತ್ತು ಬಿಜೆಪಿಯ ರಾಷ್ಟ್ರೀಯ ವಕ್ತಾರ ಗೌರವ್ ಭಾತಿಯಾ ಅವರು ವಿಧಾನಸಭಾ ಚುನಾವಣಾ ಫಲಿತಾಂಶ ಘೋಷಣೆಯ ನಂತರ ರಾಜ್ಯದಲ್ಲಿ ನಡೆದ ಹಿಂಸಾತ್ಮಕ ಘಟನೆಗಳ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ಸುಪ್ರೀಂಕೋರ್ಟ್​ ಮೊರೆ ಹೋಗಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.