ನವದೆಹಲಿ: ಭಾರತದಲ್ಲಿ ಸಾವಿರಕ್ಕೂ ಅಧಿಕ ಮಂದಿಯ ಮೇಲೆ ಪೆಗಾಸಸ್ ಮೂಲಕ ಬೇಹುಗಾರಿಕೆ ನಡೆಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದ ಬೆನ್ನಲ್ಲೆ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
‘ರೈತರ ಆಂದೋಲನ’ ಹಾಗೂ ‘ಪೆಗಾಸಸ್ ಯೋಜನೆ’ ಸಂಸತ್ ಭವನದ ಮುಂದಿನ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದೆ. ಈ ವೇಳೆ ಮಾತನಾಡಿದ್ದ ರಾಹುಲ್ ಗಾಂಧಿ, ಪೆಗಾಸಸ್ ಸಾಫ್ಟ್ವೇರ್ ಅನ್ನು ಇಸ್ರೇಲ್ ಆಯುಧವಾಗಿ ಬಳಸಲು ತಯಾರಿಸಿದೆ. ಭಯೋತ್ಪಾದಕರ ವಿರುದ್ಧವೇ ಬಳಸಬೇಕಿದೆ. ಆದರೆ, ಪ್ರಧಾನಿ ಮತ್ತು ಗೃಹ ಸಚಿವ ಅಮಿತ್ ಶಾ ಭಾರತೀಯರ ವಿರುದ್ಧ ಮತ್ತು ನಮ್ಮ ಸಂಸ್ಥೆಗಳ ವಿರುದ್ಧ ಬಳಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಪೆಗಾಸಸ್ ಸ್ಪೈವೇರ್ ಬಳಸಿ ಕಣ್ಗಾವಲು ಆರೋಪದ ಬಗ್ಗೆ ಸುಪ್ರೀಂಕೋರ್ಟ್ ತನಿಖೆಗೆ ಆದೇಶಿಸಬೇಕು ಎಂದು ಕೋರಿ ವಿವಿಧ ರಾಜ್ಯಗಳಲ್ಲಿ ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆ ನಡೆಸಿದೆ. ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆಗೆ ಪಕ್ಷ ಒತ್ತಾಯಿಸಿದೆ.
ಓದಿ: ‘ಪ್ರಜಾಪ್ರಭುತ್ವಕ್ಕೆ ಕಪ್ಪುಚುಕ್ಕೆ’: ಮೀಡಿಯಾ ಹೌಸ್ ಐಟಿ ರೈಡ್ ವಿರುದ್ಧ ಕಾಂಗ್ರೆಸ್ ಕಿಡಿ