ಸಮರಕಂದ್ (ಉಜ್ಬೆಕಿಸ್ತಾನ್): ಭಾರತವನ್ನು ಸರಕುಗಳ ಉತ್ಪಾದನಾ ಹಬ್ ಮಾಡುವುದು ತಮ್ಮ ಉದ್ದೇಶ ಎಂದು ಶುಕ್ರವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಶಾಂಘೈ ಸಹಕಾರ ಸಂಸ್ಥೆ - ಎಸ್‌ಸಿಒ ಶೃಂಗಸಭೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಸಭೆಯಲ್ಲಿ ಭಾಗವಹಿಸಿ ಪ್ರಧಾನಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸೇರಿದಂತೆ ಇತರರ ಉಪಸ್ಥಿತಿಯಲ್ಲಿ ಇಂದಿನ ಸಭೆ ಪ್ರಾರಂಭವಾಯಿತು.
ಪ್ರಾದೇಶಿಕ ಭದ್ರತಾ ಸವಾಲುಗಳು, ವ್ಯಾಪಾರ ಮತ್ತು ಇಂಧನ ಪೂರೈಕೆಯನ್ನು ಉತ್ತೇಜಿಸುವ ಇತರ ವಿಷಯಗಳ ಕುರಿತು ಶೃಂಗಸಭೆಯಲ್ಲಿ ಚರ್ಚಿಸಲು ವೇದಿಕೆ ಸಿದ್ಧವಾಗಿದೆ. ಪ್ರಧಾನಿ ಮೋದಿ ಅವರು ಪುಟಿನ್ ಮತ್ತು ಉಜ್ಬೆಕ್ ಅಧ್ಯಕ್ಷ ಶವ್ಕತ್ ಮಿರ್ಜಿಯೊಯೆವ್ ಸೇರಿದಂತೆ ಇತರ ಜೊತೆಯಲ್ಲಿ ದ್ವಿಪಕ್ಷೀಯ ಸಭೆಗಳನ್ನು ನಡೆಸುವ ನಿರೀಕ್ಷೆಯಿದೆ.
-
At the SCO Summit in Samarkand, emphasised on the constructive role SCO can play in the post-COVID era particularly in furthering economic recovery and strengthening supply chains. Highlighted India’s emphasis on people-centric growth which also gives importance to technology. pic.twitter.com/kwF5bDESkR
— Narendra Modi (@narendramodi) September 16, 2022 " class="align-text-top noRightClick twitterSection" data="
">At the SCO Summit in Samarkand, emphasised on the constructive role SCO can play in the post-COVID era particularly in furthering economic recovery and strengthening supply chains. Highlighted India’s emphasis on people-centric growth which also gives importance to technology. pic.twitter.com/kwF5bDESkR
— Narendra Modi (@narendramodi) September 16, 2022At the SCO Summit in Samarkand, emphasised on the constructive role SCO can play in the post-COVID era particularly in furthering economic recovery and strengthening supply chains. Highlighted India’s emphasis on people-centric growth which also gives importance to technology. pic.twitter.com/kwF5bDESkR
— Narendra Modi (@narendramodi) September 16, 2022
ರಾಗಿಯನ್ನು ಜನಪ್ರಿಯಗೊಳಿಸಲು ಮತ್ತು ಆಹಾರ ಭದ್ರತೆ ಸವಾಲುಗಳನ್ನು ಎದುರಿಸಲು ಭಾರತದ ಪ್ರಯತ್ನಗಳನ್ನು ಸಭೆಯಲ್ಲಿ ತಾವು ಮುಖ್ಯವಾಗಿ ಪ್ರಸ್ತಾಪಿಸಿರುವುದಾಗಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಕೋವಿಡ್ ನಂತರದ ಯುಗದಲ್ಲಿ ಎಸ್‌ಸಿಒ ನಿರ್ವಹಿಸಬಹುದಾದ ಪಾತ್ರವನ್ನು ಅವರು ಒತ್ತಿ ಹೇಳಿದರು. ಸಾಂಪ್ರದಾಯಿಕ ಔಷಧಗಳ ಕುರಿತು ಹೊಸ ಎಸ್‌ಸಿಒ ವರ್ಕಿಂಗ್ ಗ್ರೂಪ್ ರಚನೆಗೆ ಭಾರತವು ಉಪಕ್ರಮವನ್ನು ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದರು.
ಭಾರತದ ಆರ್ಥಿಕತೆಯು ಈ ವರ್ಷ ಶೇ 7.5 ದರದಲ್ಲಿ ಬೆಳೆಯುವ ನಿರೀಕ್ಷೆಯಿದೆ. ಪ್ರಪಂಚದ ಅತಿದೊಡ್ಡ ಆರ್ಥಿಕತೆಗಳಲ್ಲಿ ನಮ್ಮದು ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಒಂದಾಗಿರುವುದು ನಮಗೆ ಸಂತೋಷದ ವಿಷಯವಾಗಿದೆ ಎಂದು ಪ್ರಧಾನಿ ತಿಳಿಸಿದರು.
ಇದನ್ನೂ ಓದಿ: ಅಖಂಡ ಭಾರತ ಮೊದಲ ಪ್ರಧಾನಿ ನೇತಾಜಿ: ಪ್ರಧಾನಿ ಮೋದಿ