ಅಹಮದಾಬಾದ್(ಗುಜರಾತ್): ಎರಡು ದಿನಗಳ ಭಾರತದ ಪ್ರವಾಸದಲ್ಲಿರುವ ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ ಮಹತ್ವದ ಘೋಷಣೆ ಹೊರಹಾಕಿದ್ದು, ಭಾರತದಲ್ಲಿ ಒಂದು ಬಿಲಿಯನ್ ಪೌಂಡ್ ಹೂಡಿಕೆ ಮಾಡುವ ಘೋಷಣೆ ಮಾಡಿದ್ದಾರೆ. ವ್ಯಾಪಾರ, ಹೂಡಿಕೆ ಮತ್ತು ತಂತ್ರಜ್ಞಾನದಲ್ಲಿ ಇಷ್ಟೊಂದು ಮೊತ್ತ ಹೂಡಿಕೆ ಮಾಡುವ ಒಪ್ಪಂದವನ್ನು ಅವರು ಪ್ರಕಟಿಸಿದ್ದಾರೆ.
ಇದಕ್ಕೆ ಸಂಬಂಧಿಸಿದಂತೆ ಬ್ರಿಟಿಷ್ ಹೈಕಮಿಷನ್ ಪ್ರಕಟಣೆ ಹೊರಡಿಸಿದ್ದು, ಭಾರತದೊಂದಿಗೆ ಬಾಂಧವ್ಯ ವೃದ್ಧಿಸಲು ಬೋರಿಸ್ ಜಾನ್ಸನ್ ಭಾರತಕ್ಕೆ ಭೇಟಿ ನೀಡಿದ್ದು, ಉಭಯ ದೇಶಗಳು ಅನೇಕ ವ್ಯವಹಾರಗಳಿಗೆ ಸಂಬಂಧಿಸಿದಂತೆ ಒಪ್ಪಂದ ಮಾಡಿಕೊಳ್ಳಲಿವೆ ಎಂದಿದೆ. ಸಾಫ್ಟ್‌ವೇರ್ ಇಂಜಿನಿಯರಿಂಗ್ನಿಂದ ಹಿಡಿದು ಆರೋಗ್ಯ ಕ್ಷೇತ್ರದವರೆಗೆ ಇದೀಗ ಬ್ರಿಟನ್ ಹೂಡಿಕೆ ಮಾಡಲು ನಿರ್ಧರಿಸಿದ್ದು, ಅದಕ್ಕಾಗಿ £1 ಬಿಲಿಯನ್ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದಿದ್ದು, ಇದರಿಂದ 11,000 ಸಾವಿರ ಉದ್ಯೋಗ ಸೃಷ್ಟಿ ನಿರೀಕ್ಷೆ ಇದೆ.
ಇದನ್ನೂ ಓದಿ: ವಿಡಿಯೋ: ವಡೋದರಾದ ಬುಲ್ಡೋಜರ್ ಪ್ಲಾಂಟ್‌ನಲ್ಲಿ ಜೆಸಿಬಿ ಏರಿ ಕುಳಿತ ಬ್ರಿಟಿಷ್ ಪ್ರಧಾನಿ
ಬ್ರಿಟಿಷ್ ಪ್ರಧಾನಿ ಇಂದು ಗುಜರಾತ್ನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದು, ನಾಳೆ ದೆಹಲಿಗೆ ಪ್ರಯಾಣ ಕೈಗೊಳ್ಳಲಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಜೊತೆ ಮಹತ್ವದ ಮಾತುಕತೆಯಲ್ಲಿ ಭಾಗಿಯಾಗಲಿದ್ದಾರೆ.