ನವದೆಹಲಿ: ದೇಶದ ಕೆಲವೊಂದು ರಾಜ್ಯಗಳಲ್ಲಿ ಕೊರೊನಾ ಹಾವಳಿ ಹೆಚ್ಚಾಗುತ್ತಿರುವ ಕಾರಣ ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆಯಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ವಿವಿಧ ರಾಜ್ಯಗಳಲ್ಲಿನ ಕೊರೊನಾ ಸೋಂಕಿತ ಪ್ರಕರಣ ಹಾಗೂ ವ್ಯಾಕ್ಸಿನೇಷನ್ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.
-
Prime Minister Narendra Modi chairs a high-level meeting to review the COVID-19 related situation and vaccination in the country pic.twitter.com/buGonucrx7
— ANI (@ANI) September 10, 2021 " class="align-text-top noRightClick twitterSection" data="
">Prime Minister Narendra Modi chairs a high-level meeting to review the COVID-19 related situation and vaccination in the country pic.twitter.com/buGonucrx7
— ANI (@ANI) September 10, 2021Prime Minister Narendra Modi chairs a high-level meeting to review the COVID-19 related situation and vaccination in the country pic.twitter.com/buGonucrx7
— ANI (@ANI) September 10, 2021
ಸೆಪ್ಟೆಂಬರ್-ಅಕ್ಟೋಬರ್ ತಿಂಗಳಲ್ಲಿ ಕೊರೊನಾ 3ನೇ ಅಲೆ ಎಚ್ಚರಿಕೆ ನೀಡಿರುವ ಕಾರಣ ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆಯಲ್ಲಿ ಭಾಗಿಯಾಗಿದ್ದು, ಈ ವೇಳೆ ವಿವಿಧ ಸಚಿವರು, ಅಧಿಕಾರಿಗಳೊಂದಿಗೆ ನಮೋ ಮಹತ್ವದ ಮಾಹಿತಿ ಕಲೆ ಹಾಕುತ್ತಿದ್ದಾರೆ. ಜತೆಗೆ ವಿವಿಧ ರಾಜ್ಯಗಳಲ್ಲಿ ವ್ಯಾಕ್ಸಿನೇಷನ್ ಕುರಿತು ಮಾಹಿತಿ ಕಲೆ ಹಾಕಿದ್ದಾಗಿ ತಿಳಿದು ಬಂದಿದೆ.
ದೇಶದ 35 ಜಿಲ್ಲೆಗಳಲ್ಲಿ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ಶೇ. 10ಕ್ಕಿಂತಲೂ ಹೆಚ್ಚಾಗಿದ್ದು, 30 ಜಿಲ್ಲೆಗಳಲ್ಲಿ ಸೋಂಕಿತ ಪ್ರಕರಣ ಶೇ. 10ಕ್ಕಿಂತಲೂ ಕಡಿಮೆ ಇದೆ. ಇಂತಹ ಜಿಲ್ಲೆಗಳಲ್ಲಿ ಹೆಚ್ಚಿನ ಕ್ರಮ ಕೈಗೊಳ್ಳುವಂತೆ ಈಗಾಗಲೇ ಕೇಂದ್ರ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಪ್ರಮುಖವಾಗಿ ಕೇರಳ, ಮಹಾರಾಷ್ಟ್ರ, ಆಂಧ್ರಪ್ರದೇಶ, ಕರ್ನಾಟಕ ಹಾಗೂ ಪಂಜಾಬ್ನಲ್ಲಿ ಕೊರೊನಾ ಸೋಂಕಿತ ಪ್ರಕರಣ ಹೆಚ್ಚಾಗಿದ್ದು, ಈ ರಾಜ್ಯಗಳಿಗೆ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡುವ ಸಾಧ್ಯತೆ ಇದೆ.