ETV Bharat / bharat

ಟರ್ಕಿ - ಸಿರಿಯಾ ಭೂಕಂಪದಲ್ಲಿ ಮಡಿದವರಿಗೆ ಮೋದಿ ಸಂತಾಪ: ಭುಜ್ ಭೂಕಂಪ ನೆನೆದು ಭಾವುಕ

ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಸಾವಿರಾರು ಜನ ಸಾವಿಗೀಡಾಗಿದ್ದಾರೆ. ಭೂಕಂಪದಲ್ಲಿ ಸಾವಿಗೀಡಾದವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.

PM Modi gets emotional over Turkey situation, recalls 2001 Bhuj earthquake

author img

By

Published : Feb 7, 2023, 5:59 PM IST

ನವದೆಹಲಿ: ಟರ್ಕಿ ಮತ್ತು ಸಿರಿಯಾದಲ್ಲಿ ಭೂಕಂಪದಿಂದ ಸಂಭವಿಸಿದ ಸಾವು ನೋವುಗಳಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಸಂತಾಪ ಸೂಚಿಸಿದ್ದಾರೆ. ಗುಜರಾತಿನಲ್ಲಿ ಸಾವಿರಾರು ಜನರನ್ನು ಬಲಿ ತೆಗೆದುಕೊಂಡ 2001 ರ ಭುಜ್ ಭೂಕಂಪದ ನೆನಪು ಮಾಡಿಕೊಂಡ ಅವರು ಭಾವುಕರಾದರು. ಭಾರತೀಯ ಜನತಾ ಪಕ್ಷದ ಸಂಸದೀಯ ಪಕ್ಷದ ಸಭೆಯಲ್ಲಿ ಸಂಸದರನ್ನು ಉದ್ದೇಶಿಸಿ ಮಾತನಾಡುವಾಗ ಪ್ರಧಾನಿ ಭಾವುಕರಾದರು.

ಸಂಸತ್ತಿನ ಬಜೆಟ್ ಅಧಿವೇಶನದ ಕಲಾಪ ಪ್ರಾರಂಭವಾಗುವ ಮೊದಲು ಇಂದು ಬೆಳಗ್ಗೆ ಮಾತನಾಡಿದ ಅವರು, ತಾವು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಸಂಭವಿಸಿದ್ದ 2001 ರ ವಿನಾಶಕಾರಿ ಭುಜ್ ಭೂಕಂಪವನ್ನು ನೆನಪಿಸಿಕೊಂಡರು ಮತ್ತು ರಕ್ಷಣಾ ಕಾರ್ಯಾಚರಣೆಗೆ ಉಂಟಾಗಿದ್ದ ಸವಾಲುಗಳ ಬಗ್ಗೆ ಮಾತನಾಡಿದರು.

ಸೋಮವಾರ ಟರ್ಕಿ ಮತ್ತು ಸಿರಿಯಾ ಎರಡರಲ್ಲೂ 7.8 ತೀವ್ರತೆಯ ಭೂಕಂಪ ಸಂಭವಿಸಿದೆ. ಈ ದೇಶಗಳಿಗೆ ಭಾರತ ಸರ್ಕಾರವು ಮಾನವೀಯ ನೆರವು ನೀಡುವುದಾಗಿ ಪ್ರಧಾನಿ ಮೋದಿ ಘೋಷಿಸಿದರು. ಟರ್ಕಿಯಲ್ಲಿ ಈಗ ಎಂಥ ಕೆಟ್ಟ ಪರಿಸ್ಥಿತಿ ಇದೆ ಎಂಬುದನ್ನು ನಾನು ತುಂಬಾ ಚೆನ್ನಾಗಿ ಅರ್ಥ ಮಾಡಿಕೊಳ್ಳಬಲ್ಲೆ ಎಂದು ಪ್ರಧಾನಿ ಹೇಳಿದರು. 2001 ರಲ್ಲಿ ಗುಜರಾತ್‌ನ ಕಚ್ ಜಿಲ್ಲೆಯ ಭುಜ್‌ನಲ್ಲಿ ಭಾರಿ ಭೂಕಂಪ ಸಂಭವಿಸಿತ್ತು. ಇದರಲ್ಲಿ 20,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು ಮತ್ತು 1.5 ಲಕ್ಷಕ್ಕೂ ಹೆಚ್ಚು ಜನರು ಗಾಯಗೊಂಡರು. ಭೂಕಂಪದಿಂದಾಗಿ ಸಾವಿರಾರು ಮಂದಿ ನಿರಾಶ್ರಿತರಾದರು.

ಅಧಿಕಾರಿಗಳು ಮತ್ತು ಏಜೆನ್ಸಿಗಳ ಪ್ರಕಾರ, ಸೋಮವಾರ ಮುಂಜಾನೆ ಟರ್ಕಿ ಮತ್ತು ಸಿರಿಯಾದಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ ನಂತರ ಕನಿಷ್ಠ 4,372 ಜನ ಸಾವಿಗೀಡಾಗಿದ್ದಾರೆ ಮತ್ತು ಸಾವಿರಾರು ಜನ ಗಾಯಗೊಂಡಿದ್ದಾರೆ. ಸಿರಿಯಾದಲ್ಲಿ 1,451 ಜನ ಮೃತಪಟ್ಟಿದ್ದು, 3,531 ಜನ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಎರಡೂ ದೇಶಗಳಲ್ಲಿ ಸಾವಿರಾರು ಕಟ್ಟಡಗಳು ಕುಸಿದಿವೆ. ವಿಶೇಷವಾಗಿ ವಾಯುವ್ಯ ಸಿರಿಯಾದಲ್ಲಿನ ಪರಿಸ್ಥಿತಿ ಕಳವಳಕಾರಿಯಾಗಿದೆ. ಅಲ್ಲಿ ಈಗಾಗಲೇ 4 ದಶಲಕ್ಷಕ್ಕೂ ಹೆಚ್ಚು ಜನರು ಮಾನವೀಯ ಸಹಾಯದ ನಿರೀಕ್ಷೆಯಲ್ಲಿದ್ದಾರೆ.

100 ವರ್ಷಗಳ ಇತಿಹಾಸದಲ್ಲೇ ಇದು ಈ ಪ್ರದೇಶದಲ್ಲಿ ಅಪ್ಪಳಿಸಿರುವ ಪ್ರಬಲ ಭೂಕಂಪವಾಗಿದೆ. ಭೂಕಂಪವು ಟರ್ಕಿಯ ಗಾಜಿಯಾಂಟೆಪ್ ಪ್ರಾಂತ್ಯದ ನೂರ್ಡಗಿಯ ಪೂರ್ವಕ್ಕೆ 23 ಕಿಲೋಮೀಟರ್ (14.2 ಮೈಲುಗಳು) 24.1 ಕಿಲೋಮೀಟರ್ (14.9 ಮೈಲುಗಳು) ಆಳದಲ್ಲಿ ಸಂಭವಿಸಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ. ಸೋಮವಾರ ಟರ್ಕಿ ಮತ್ತು ಸಿರಿಯಾದಲ್ಲಿ ಭೂಕಂಪಗಳು ಸಂಭವಿಸಿದ ನಂತರ ಭಾರತವು ತನ್ನ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡವನ್ನು ಟರ್ಕಿಗೆ ಕಳುಹಿಸಿದೆ.

ಟರ್ಕಿಯಲ್ಲಿ ಶೋಧ ಮತ್ತು ರಕ್ಷಣಾ ಪ್ರಯತ್ನಗಳನ್ನು ಬೆಂಬಲಿಸಲು ವಿಪತ್ತು ಪರಿಹಾರ ಸಾಮಗ್ರಿ ಮತ್ತು ರಕ್ಷಣಾ ತಂಡವನ್ನು ಹೊತ್ತ ಭಾರತೀಯ ವಾಯುಪಡೆಯ ಮೊದಲ ವಿಮಾನ ಇಂದು ಭೂಕಂಪ ಪೀಡಿತ ದೇಶದ ಅದಾನಾ ಪ್ರದೇಶಕ್ಕೆ ಆಗಮಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. ಭಾರತವು ಮಾನವೀಯ ನೆರವಿನೊಂದಿಗೆ 60 ಪ್ಯಾರಾ ಫೀಲ್ಡ್ ಆಸ್ಪತ್ರೆ ಮತ್ತು ಸಿಬ್ಬಂದಿಗಳೊಂದಿಗೆ ಇನ್ನೂ ಎರಡು ಸಿ 17 ವಿಮಾನಗಳನ್ನು ಭೂಕಂಪ - ಪೀಡಿತ ಟರ್ಕಿಗೆ ಕಳುಹಿಸಲಿದೆ.

ನವದೆಹಲಿಯಲ್ಲಿರುವ ಟರ್ಕಿಶ್ ರಾಯಭಾರ ಕಚೇರಿ ಹೀಗೆ ಟ್ವೀಟ್ ಮಾಡಿದೆ: ಎನ್‌ಡಿಆರ್‌ಎಫ್‌ನ ವಿಶೇಷ ಶೋಧ ಮತ್ತು ರಕ್ಷಣಾ ತಂಡಗಳು ಮತ್ತು ತರಬೇತಿ ಪಡೆದ ಶ್ವಾನದಳಗಳೊಂದಿಗೆ ಭೂಕಂಪ ಪರಿಹಾರ ಸಾಮಗ್ರಿಗಳ ಮೊದಲ ಬ್ಯಾಚ್ ಟರ್ಕಿಗೆ ಆಗಮಿಸಿದೆ. ನಿಮ್ಮ ಬೆಂಬಲ ಮತ್ತು ಸಹಾಯಕ್ಕಾಗಿ ಭಾರತಕ್ಕೆ ಧನ್ಯವಾದಗಳು.

ಇದನ್ನೂ ಓದಿ: ಟರ್ಕಿ ತಲುಪಿದ 51 ಜನರ ಎನ್​ಡಿಆರ್​ಎಫ್​ ತಂಡ.. 50 ಸಿಬ್ಬಂದಿಯ ಮತ್ತೊಂದು ತಂಡ ಶೀಘ್ರ ಅಂಕಾರಾಗೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.