ನವದೆಹಲಿ : ಮುಂದಿನ ಹಣಕಾಸು ವರ್ಷದಲ್ಲಿ ಎಕ್ಸ್‌ಪ್ರೆಸ್‌ವೇಗಳಿಗೆ 'ಪ್ರಧಾನ ಮಂತ್ರಿ ಗತಿಶಕ್ತಿ ಮಾಸ್ಟರ್‌ಪ್ಲಾನ್' ರೂಪಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಆಜಾದಿ ಅಮೃತ ಮಹೋತ್ಸವ ಪ್ರಸ್ತಾಪ : ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾದ ಹಿನ್ನೆಲೆಯಲ್ಲಿ ಸರ್ಕಾರ 'ಆಜಾದಿ ಕಾ ಅಮೃತ್ ಮಹೋತ್ಸವ' ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಿದೆ.
ನಮ್ಮ ಸರ್ಕಾರವು ದೇಶದ ಆರ್ಥಿಕ ಅಭಿವೃದ್ಧಿಗೆ ಹಲವು ಕ್ರಮಗಳನ್ನು ಕೈಗೊಂಡಿದೆ. ಮಧ್ಯಮ ವರ್ಗಕ್ಕೆ ಅಗತ್ಯ ಸವಲತ್ತು ಒದಗಿಸಲು ಯತ್ನಿಸುತ್ತಿದೆ ಎಂದು ವಿತ್ತ ಸಚಿವೆ ಹೇಳಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಈಗಾಗಲೇ 60 ಲಕ್ಷ ಉದ್ಯೋಗ ಸೃಷ್ಟಿ : 14 ಕ್ಷೇತ್ರಗಳ ಪಿಎಲ್‌ಐಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಈಗಾಗಲೇ 60 ಲಕ್ಷ ಉದ್ಯೋಗ ಸೃಷ್ಟಿಯಾಗಿದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.
ಈ ಸಲದ ಬಜೆಟ್ 25 ವರ್ಷಗಳ ಮಾರ್ಗದರ್ಶಿ : ನಾನು ಇಂದು ಮಂಡಿಸುತ್ತಿರುವ ನಮ್ಮ ಸರ್ಕಾರದ ಬಜೆಟ್ ಭಾರತ ದೇಶದ ಮುಂದಿನ 25 ವರ್ಷಗಳ ಮಾರ್ಗದರ್ಶಿಯಾಗಿರಲಿದೆ. ಭಾರತವು ಸ್ವಾತಂತ್ರ್ಯ ಪಡೆದು 100 ವರ್ಷಗಳಾಗುವ ಹೊತ್ತಿಗೆ ಯಾವ ಸ್ಥಿತಿಯಲ್ಲಿ ಇರಬೇಕು ಎನ್ನುವುದನ್ನು ಈ ಬಜೆಟ್ ಕೈದೀವಿಗೆಯಾಗಿ ಮಾರ್ಗದರ್ಶನ ಮಾಡಲಿದೆ. ನಮ್ಮ ಕನಸುಗಳನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಇದೇ ವೇಳೆ ಹೇಳಿದರು.
ಇದನ್ನೂ ಓದಿ: ರಾಷ್ಟ್ರಪತಿಗಳ ಭೇಟಿ ಬಳಿಕ ಬಜೆಟ್ ಪ್ರತಿಯೊಂದಿಗೆ ಸಂಸತ್‌ಗೆ ಆಗಮಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್