ನವದೆಹಲಿ: ಉತ್ತರ ಪ್ರದೇಶ ಸರ್ಕಾರ ರಚನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸದಲ್ಲಿ ಸಭೆ ಪ್ರಗತಿಯಲ್ಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಎರಡನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ಈ ವಾರದ ಆರಂಭದಲ್ಲಿ ತಿಳಿಸಿತ್ತು. ಆದರೆ, ಅವರ ಸಂಪುಟದ ಗಾತ್ರ ಅಥವಾ ವಿವಿಧ ಸಚಿವಾಲಯಗಳಿಗೆ ಹೆಸರುಗಳನ್ನು ಅಂತಿಮಗೊಳಿಸಲಾಗಿಲ್ಲ.
ಇದನ್ನೂ ಓದಿ: ವಾಹನ ಮಾರಾಟ ಮೇಳದ ಫೋಟೋ ಒಎಲ್ಎಕ್ಸ್ನಲ್ಲಿ ಹಾಕಿ ಗ್ರಾಹಕರ ವಂಚಿಸುತ್ತಿದ್ದ ಖತರ್ನಾಕ್ ಗ್ಯಾಂಗ್ ಅಂದರ್
ಯೋಗಿ ಆದಿತ್ಯನಾಥ್ ಅವರು ತಮ್ಮ ಸಂಪುಟದ ಅಭ್ಯರ್ಥಿಗಳ ಕುರಿತು ಪ್ರಧಾನಿ ಮೋದಿ ಮತ್ತು ಬಿಜೆಪಿಯ ಕೇಂದ್ರ ನಾಯಕತ್ವದೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸುತ್ತಿದ್ದಾರೆ.
ಈ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ದಾಖಲೆಯ ಗೆಲುವು ಸಾಧಿಸಿತ್ತು. 403 ವಿಧಾನಸಭಾ ಸ್ಥಾನಗಳಲ್ಲಿ 255 ಸ್ಥಾನಗಳನ್ನು ಗಳಿಸಿತ್ತು. ಅದರ ಮಿತ್ರಪಕ್ಷಗಳು 18 ಹೆಚ್ಚು ಸ್ಥಾನಗಳನ್ನು ಗೆದ್ದವು.