ಕೋಲ್ಕತ್ತಾ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮದಿನದ ಅಂಗವಾಗಿ ‘ಪರಾಕ್ರಮ ದಿನ’ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಪಶ್ಚಿಮ ಬಂಗಾಳಕ್ಕೆ ಆಗಮಿಸಲಿದ್ದು, ಇತ್ತ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರ‍್ಯಾಲಿ ನಡೆಸುತ್ತಿದ್ದಾರೆ.
ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ಇನ್ನು ಮುಂದೆ ‘ಪರಾಕ್ರಮ ದಿನ’ವನ್ನಾಗಿ ಆಚರಿಸಲು ಭಾರತ ಸರ್ಕಾರ ನಿರ್ಧರಿಸಿದ್ದು, ಈ ಸಮಾರಂಭದ ಉದ್ಘಾಟನೆಯನ್ನು ಕೋಲ್ಕತ್ತಾದ ವಿಕ್ಟೋರಿಯಾ ಸ್ಮಾರಕದಲ್ಲಿ ಪಿಎಂ ಮೋದಿ ನೆರವೇರಿಸಲಿದ್ದಾರೆ. ನೇತಾಜಿ ಭವನ ಹಾಗೂ ರಾಷ್ಟ್ರೀಯ ಗ್ರಂಥಾಲಯಕ್ಕೆ ಕೂಡ ಮೋದಿ ಭೇಟಿ ನೀಡಲಿದ್ದಾರೆ.
ಇತ್ತ ಮಮತಾ ಬ್ಯಾನರ್ಜಿ ಕೂಡ ಸುಭಾಷ್ ಚಂದ್ರ ಬೋಸ್ ಜನ್ಮದಿನದ ಅಂಗವಾಗಿ ಕೋಲ್ಕತ್ತಾದ ಶ್ಯಾಮ್ ಬಜಾರ್ನಿಂದ ರೆಡ್ ರೋಡ್ವರೆಗೆ ರ‍್ಯಾಲಿ ನಡೆಸುತ್ತಿದ್ದಾರೆ. ವಿಕ್ಟೋರಿಯಾ ಸ್ಮಾರಕದಲ್ಲಿ ನಡೆಯುವ ಕಾರ್ಯಕ್ರಮಕ್ಕೂ ದೀದಿಗೆ ಆಹ್ವಾನ ನೀಡಿಲಾಗಿದೆ.
ನೇತಾಜಿಯ ಜನ್ಮದಿನವನ್ನು 'ದೇಶನಾಯಕ ದಿನ' ಎಂದು ಆಚರಿಸಲು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಂದಾಗಿದ್ದು, ಜನವರಿ 23 ಅನ್ನು ರಾಷ್ಟ್ರೀಯ ರಜಾದಿನವಾಗಿ ಘೋಷಿಸಬೇಕೆಂದು ಮಮತಾ ಒತ್ತಾಯಿಸಿದ್ದಾರೆ.