ETV Bharat / bharat

ಪ್ರಧಾನಿ ನರೇಂದ್ರ ಮೋದಿ 3 ದೇಶಗಳ ಪ್ರವಾಸ ಆರಂಭ; ಬರ್ಲಿನ್‌ನತ್ತ ಪ್ರಯಾಣ

ಪ್ರಧಾನಿ ನರೇಂದ್ರ ಮೋದಿ ನಿನ್ನೆ ರಾತ್ರಿ ಜರ್ಮನಿಯ ಬರ್ಲಿನ್‌ಗೆ ತೆರಳಿದ್ದಾರೆ. ಈ ಮೂಲಕ ಕೋವಿಡ್​ -19 ನಂತರ ಭಾರತ ಮತ್ತು ಜರ್ಮನಿ ನಡುವಿನ ದೀರ್ಘಕಾಲದ ವಾಣಿಜ್ಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ಪ್ರಯತ್ನ ಮಾಡಲಾಗುತ್ತಿದೆ.

author img

By

Published : May 2, 2022, 9:11 AM IST

ಮೋದಿ
ಮೋದಿ

ನವದೆಹಲಿ: ಈ ವರ್ಷದ ಮೊದಲ ವಿದೇಶ ಪ್ರವಾಸವನ್ನು ಪ್ರಧಾನಿ ನರೇಂದ್ರ ಮೋದಿ ಕೈಗೊಂಡಿದ್ದಾರೆ. ಭಾನುವಾರ ರಾತ್ರಿ ಜರ್ಮನಿಯ ಬರ್ಲಿನ್‌ಗೆ ತೆರಳಿದ್ದು, ಈ ಮೂಲಕ ಯುರೋಪಿನ ದೇಶಗಳೊಂದಿಗೆ ಶಾಂತಿ ಸಮೃದ್ಧಿ, ಸಹಕಾರವನ್ನು ಮತ್ತಷ್ಟು ಬಲಪಡಿಸಲು ಅವರು ಮುಂದಾಗಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿರುವ ಪ್ರಧಾನ ಮಂತ್ರಿ ಕಚೇರಿ, ಜರ್ಮನ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್, ಡೆನ್ಮಾರ್ಕ್ ಪ್ರಧಾನಿ ಮೆಟ್ಟೆ ಫ್ರೆಡೆರಿಕ್ಸೆನ್ ಮತ್ತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಮೋದಿ ಭೇಟಿ ಮಾಡಲಿದ್ದಾರೆ. ಜರ್ಮನಿಯಲ್ಲಿ ಇಂದು ಹಲವಾರು ಪ್ರಮುಖ ಕಾರ್ಯಕ್ರಮಗಳಲ್ಲಿ ಹಾಜರಾಗಲು ಪ್ರಧಾನಿ ನಿರ್ಧರಿಸಿದ್ದಾರೆ. ಅಷ್ಟೇ ಅಲ್ಲದೆ, ಯುರೋಪ್ ಭೇಟಿಯ ಸಮಯದಲ್ಲಿ ಉಕ್ರೇನ್ ಯುದ್ಧದ ಬಗ್ಗೆಯೂ ಗಮನ ಹರಿಸಲಾಗುವುದು ಎಂದು ತಿಳಿಸಿದೆ.

ಯುರೋಪ್ ಖಂಡ ಭಾರತೀಯ ಮೂಲದ ಒಂದು ಮಿಲಿಯನ್‌ಗಿಂತಲೂ ಹೆಚ್ಚು ಜನರಿಗೆ ನೆಲೆಯಾಗಿದೆ. ಅದರಲ್ಲೂ ಜರ್ಮನಿ ಗಮನಾರ್ಹ ಪ್ರಮಾಣವನ್ನು ಹೊಂದಿದೆ. ಕೋವಿಡ್​ -19 ನಂತರ ಭಾರತ ಮತ್ತು ಜರ್ಮನಿ ನಡುವಿನ ದೀರ್ಘಕಾಲದ ವಾಣಿಜ್ಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ಪ್ರಯತ್ನ ಮಾಡುತ್ತೇನೆ. ಯುರೋಪ್​ನಲ್ಲಿರುವ ನಮ್ಮ ಸಹೋದರ, ಸಹೋದರಿಯರನ್ನು ಭೇಟಿ ಮಾಡುತ್ತೇನೆ ಎಂದು ಪ್ರಧಾನಿ ಹೇಳಿದ್ದಾರೆ.

ಜರ್ಮನಿಯ ಫೆಡರಲ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅವರು ಇಂದು ಜರ್ಮನಿಯ ಬರ್ಲಿನ್‌ಗೆ ಭೇಟಿ ನೀಡಿದ್ದಾರೆ. ನಂತರ ಅವರು ಮೇ 3 ರಿಂದ 4 ಡೆನ್ಮಾರ್ಕ್‌ನ ಕೋಪನ್‌ಹೇಗನ್‌ಗೆ ಪ್ರಯಾಣಿಸಲಿದ್ದಾರೆ. ಭಾರತಕ್ಕೆ ಹಿಂತಿರುಗುವ ವೇಳೆ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಮೋದಿ ಭೇಟಿ ಮಾಡುವರು.

ಇದನ್ನೂ ಓದಿ: ಮೂರು ದಿನ ಮೋದಿ ವಿದೇಶ ಪ್ರವಾಸ.. 25 ಸಭೆಗಳಲ್ಲಿ ಭಾಗಿಯಾಗಲಿರುವ ಪ್ರಧಾನಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.