ETV Bharat / bharat

ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪಿಎಂ ಮೋದಿ.. ವಿರೋಧ ಪಕ್ಷದವರು? - ಉತ್ತರ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ

ಲಖನೌದ ಏಕನಾ ಸ್ಟೇಡಿಯಂನಲ್ಲಿ ಅದ್ಧೂರಿ ಸಮಾರಂಭಕ್ಕೆ ಸಿದ್ಧತೆಗಳು ಆರಂಭವಾಗಿದೆ. ಬಿಜೆಪಿ ಈಗಾಗಲೇ ಸಂಪುಟ ಸದಸ್ಯರ ಹೆಸರನ್ನು ಅಂತಿಮಗೊಳಿಸಿದೆ. ಉತ್ತರಪ್ರದೇಶದಲ್ಲಿ ಸರ್ಕಾರ ರಚನೆಯ ಉಸ್ತುವಾರಿ ನೋಡಿಕೊಳ್ಳಲು ಗೃಹ ಸಚಿವ ಅಮಿತ್ ಶಾ ಅವರನ್ನು ಕೇಂದ್ರ ವೀಕ್ಷಕರನ್ನಾಗಿ ನೇಮಿಸಲಾಗಿದೆ..

Yogi Adityanath oath taking ceremony
ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕಾರ ಸಮಾರಂಭ
author img

By

Published : Mar 19, 2022, 1:38 PM IST

ನವದೆಹಲಿ : 2022ರ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತ ಪಡೆದ ಯೋಗಿ ಆದಿತ್ಯನಾಥ್‌ ನೇತೃತ್ವದ ಬಿಜೆಪಿ ಎರಡನೇ ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗಿದೆ.

ಮಾರ್ಚ್ 25ರಂದು ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕಾರ ಸಮಾರಂಭ ಆಯೋಜನೆಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಉತ್ತರಪ್ರದೇಶದಲ್ಲಿ ತಮ್ಮ ಪಕ್ಷವನ್ನು ಭರ್ಜರಿ ಗೆಲುವಿನತ್ತ ಮುನ್ನಡೆಸಿದ ಯೋಗಿ ಆದಿತ್ಯನಾಥ್ ಅವರು, ಮಾರ್ಚ್ 25ರಂದು ಎರಡನೇ ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಪ್ರಧಾನಿ, ಕೇಂದ್ರ ಸಚಿವರು ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸಹ ಆಹ್ವಾನಿತರಲ್ಲಿ ಸೇರಿದ್ದಾರೆ. ಅಲ್ಲದೇ, ಪ್ರಮಾಣ ವಚನ ಸ್ವೀಕಾರ ಸಮಾರಂಭದ ಆಹ್ವಾನಿತರ ಪಟ್ಟಿಯಲ್ಲಿ ಹಲವಾರು ವಿರೋಧ ಪಕ್ಷದ ನಾಯಕರು ಕೂಡ ಇದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್, ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಸೇರಿದಂತೆ ವಿರೋಧ ಪಕ್ಷಗಳ ಪ್ರಮುಖರನ್ನು ಆಹ್ವಾನಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಇನ್ನೂ ಸಮಾರಂಭಕ್ಕೆ ಕೇಂದ್ರ ಮತ್ತು ರಾಜ್ಯ ನಡೆಸುವ ವಿವಿಧ ಕಲ್ಯಾಣ ಯೋಜನೆಗಳ ಫಲಾನುಭವಿಗಳನ್ನು ಸಹ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಪಂಜಾಬ್​​ನಲ್ಲಿ ಕ್ಯಾಬಿನೆಟ್ ರಚನೆ: 10 ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ

ಲಖನೌದ ಏಕನಾ ಸ್ಟೇಡಿಯಂನಲ್ಲಿ ಅದ್ಧೂರಿ ಸಮಾರಂಭಕ್ಕೆ ಸಿದ್ಧತೆಗಳು ಆರಂಭವಾಗಿದೆ. ಬಿಜೆಪಿ ಈಗಾಗಲೇ ಸಂಪುಟ ಸದಸ್ಯರ ಹೆಸರನ್ನು ಅಂತಿಮಗೊಳಿಸಿದೆ. ಉತ್ತರಪ್ರದೇಶದಲ್ಲಿ ಸರ್ಕಾರ ರಚನೆಯ ಉಸ್ತುವಾರಿ ನೋಡಿಕೊಳ್ಳಲು ಗೃಹ ಸಚಿವ ಅಮಿತ್ ಶಾ ಅವರನ್ನು ಕೇಂದ್ರ ವೀಕ್ಷಕರನ್ನಾಗಿ ನೇಮಿಸಲಾಗಿದೆ.

ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ರಘುಬರ್ ದಾಸ್ ಸಹ ಸಹ ವೀಕ್ಷಕರಾಗಿ ರಾಜ್ಯದಲ್ಲಿ ಸರ್ಕಾರ ರಚನೆಯನ್ನು ಖಾತ್ರಿಪಡಿಸಿಕೊಳ್ಳುವಲ್ಲಿ ಅಮಿತ್​ ಶಾಗೆ ಸಾಥ್​ ನೀಡಲಿದ್ದಾರೆ. ಉತ್ತರಪ್ರದೇಶದಲ್ಲಿ ಬಿಜೆಪಿ 403 ಕ್ಷೇತ್ರಗಳ ಪೈಕಿ 255 ಕ್ಷೇತ್ರಗಳನ್ನು (ಶೇ.41.29 ಮತಗಳು) ಗೆಲ್ಲುವ ಮೂಲಕ ಅಧಿಕಾರವನ್ನು ಉಳಿಸಿಕೊಂಡಿದೆ.

ಯೋಗಿ ಆದಿತ್ಯನಾಥ್ ಅವರು ರಾಜ್ಯದಲ್ಲಿ ಪೂರ್ಣಾವಧಿಯನ್ನು ಪೂರ್ಣಗೊಳಿಸಿದ ನಂತರ ಕಳೆದ 37 ವರ್ಷಗಳಲ್ಲಿ ಮತ್ತೆ ಅಧಿಕಾರಕ್ಕೆ ಬಂದ ಮೊದಲ ಮುಖ್ಯಮಂತ್ರಿಯಾಗಲಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.