ETV Bharat / bharat

ಸೂರತ್ ದುರಂತಕ್ಕೆ ಪ್ರಧಾನಿ, ಗುಜರಾತ್ - ರಾಜಸ್ಥಾನ​ ಸಿಎಂ ಸಂತಾಪ: ಮೃತರ ಕುಟುಂಬಕ್ಕೆ ತಲಾ 6 ಲಕ್ಷ ರೂ.ಪರಿಹಾರ ಘೋಷಣೆ

ಸೂರತ್​ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಮೃತರ ಕುಟುಂಬಕ್ಕೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಘೋಷಣೆಯಾಗಿದ್ದು, ಗುಜರಾತ್​ ಸಿಎಂ ವಿಜಯ್​ ರೂಪಾನಿ 2 ಲಕ್ಷ ರೂ. ಹಾಗೂ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ. ಪರಿಹಾರ ನೀಡುವುದಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್ ತಿಳಿಸಿದ್ದಾರೆ.

PM Modi and CM Vijay Rupani announces Ex-gratia of Rs 2 lakhs to kin of deceased in Surat accident
ಪ್ರಧಾನಿ, ಗುಜರಾತ್​ ಸಿಎಂ
author img

By

Published : Jan 19, 2021, 9:47 AM IST

Updated : Jan 19, 2021, 10:42 AM IST

ನವದೆಹಲಿ: ಗುಜರಾತ್​ನ ಸೂರತ್​ನಲ್ಲಿ ನಡೆದ ಭೀಕರ ರಸ್ತೆ ಅಪಘಾತಕ್ಕೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಗುಜರಾತ್​ ಮುಖ್ಯಮಂತ್ರಿ ವಿಜಯ್​ ರೂಪಾನಿ ಹಾಗೂ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಸೂರತ್‌ನಲ್ಲಿ ನಡೆದ ಟ್ರಕ್ ಅಪಘಾತದಲ್ಲಿ ಅಷ್ಟು ಮಂದಿ ಪ್ರಾಣ ಕಳೆದುಕೊಂಡಿರುವುದು ನಿಜಕ್ಕೂ ಒಂದು ದುರಂತವಾಗಿದೆ. ದುಃಖಿತ ಕುಟುಂಬಗಳಿಗೆ ನನ್ನ ಸಾಂತ್ವನ. ಗಾಯಾಳುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳಬೇಕೆಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ಪಿಎಂ ಮೋದಿ ಹೇಳಿದ್ದಾರೆ.

  • Ex-gratia of Rs 2 lakhs each from PMNRF (Prime Minister's National Relief Fund) would be given to the next of kin of those who have lost their lives due to the accident in Surat. Rs 50,000 each would be given to those injured: Prime Minister's Office (PMO) https://t.co/Qp7V0lYKss

    — ANI (@ANI) January 19, 2021 " class="align-text-top noRightClick twitterSection" data=" ">

ಮೃತರ ಸಂಬಂಧಿಗಳಿಗೆ ಪಿಎಂಎನ್‌ಆರ್‌ಎಫ್ (ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ)ಯಿಂದ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 50,000 ರೂ. ನೀಡಲಾಗುವುದು ಎಂದು ಪ್ರಧಾನಿ ಕಚೇರಿ ತಿಳಿಸಿದೆ.

ಇದನ್ನೂ ಓದಿ: ಕರ್ನಾಟಕದ ಬಳಿಕ ಗುಜರಾತ್​ನಲ್ಲಿ ಭೀಕರ ರಸ್ತೆ ಅಪಘಾತ... ಟ್ರಕ್​ ಹರಿದು 15 ಕೂಲಿ ಆಳುಗಳು ಬಲಿ!

ಗುಜರಾತ್​ ಸಿಎಂ ವಿಜಯ್​ ರೂಪಾನಿ ಕೂಡ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​ ಕೂಡ ಸಿಎಂ ಪರಿಹಾರ ನಿಧಿಯಿಂದ ಮೃತರ ಸಂಬಂಧಿಗಳಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ನೆರವು ನೀಡಿದ್ದಾರೆ.

  • Rajasthan govt will be providing Rs 2 lakh compensation to family of the deceased & Rs 50,000 to those injured from CM Relief Fund: Rajasthan CM Ashok Gehlot https://t.co/719JRKA2pU

ಇಂದು ನಸುಕಿನ ಜಾವ ಸೂರತ್​ನಲ್ಲಿ ಫುಟ್​ಪಾತ್​ನಲ್ಲಿ ಮಲಗಿದ್ದ ಸುಮಾರು 20 ಕಾರ್ಮಿಕರ ಮೇಲೆ ಟ್ರಕ್ ಹರಿದು, 15 ಮಂದಿ ಮೃತಪಟ್ಟಿದ್ದರು. ಐವರ ಸ್ಥತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ. ಕಬ್ಬು ತುಂಬಿದ ಟ್ರ್ಯಾಕ್ಟರ್‌ಗೆ ಟ್ರಕ್ ಡಿಕ್ಕಿ ಹೊಡೆದಿದ್ದು, ನಿಯಂತ್ರಣ ಕಳೆದುಕೊಂಡ ಚಾಲಕ ರಸ್ತೆ ಬದಿ ಮಲಗಿದ್ದ ಕಾರ್ಮಿಕರ ಮೇಲೆ ಟ್ರಕ್​ ಹರಿಸಿದ ಪರಿಣಾಮ ಈ ದುರಂತ ಸಂಭವಿಸಿದೆ.

Last Updated : Jan 19, 2021, 10:42 AM IST

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.